ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆ ದಿನಾಂಕವನ್ನು ಪ್ರಕಟಿಸಿದೆ. ಮಹಾರಾಷ್ಟ್ರ ಚುನಾವಣೆಯು ಒಂದೇ ಹಂತದಲ್ಲಿ ನವೆಂಬರ್ 20 ರಂದು ನಡೆಯಲಿದೆ. ಜಾರ್ಖಂಡ್ ವಿಧಾನಸಭೆ ಚುನಾವಣೆಯು ಎರಡು ಹಂತಗಳಲ್ಲಿ 13 ಹಾಗೂ ನವೆಂಬರ್ 20 ರಂದು ನಡೆಯಲಿದೆ. ಎರಡೂ ರಾಜ್ಯಗಳ ಮತ ಎಣಿಕೆ ನವೆಂಬರ್ 23 ರಂದು ನಡೆಯಲಿದೆ.
ಮಹಾರಾಷ್ಟ್ರದಲ್ಲಿ 9.63 ಕೋಟಿ ಮತದಾರರಿದ್ದರೆ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ 1,00,186 ಮತದಾನ ಕೇಂದ್ರಗಳಿವೆ. ಜಾರ್ಖಂಡ್‌ನಲ್ಲಿ 2.6 ಕೋಟಿ ಮತದಾರರಿದ್ದು, 29,562 ಮತಗಟ್ಟೆಗಳಿವೆ.
ವಿವಿಧ ರಾಜ್ಯಗಳ 48 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನ.13 ರಂದು ಹಾಗೂ 2 ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆ ನ.20 ಎಂದು ನಡೆಯಲಿದೆ. ಇದರಲ್ಲಿ ಕರ್ನಾಟಕದ ಮೂರು ವಿಧಾನಸಭಾ ಚುನಾವಣೆ ಕೂಡ ಸೇರಿದೆ.
288 ಸದಸ್ಯರ ಮಹಾರಾಷ್ಟ್ರ ವಿಧಾನಸಭೆಯ ಅಧಿಕಾರಾವಧಿಯು ಈ ವರ್ಷದ ನವೆಂಬರ್‌ನಲ್ಲಿ ಕೊನೆಗೊಳ್ಳುತ್ತಿದ್ದರೆ, 81 ಸದಸ್ಯರ ಜಾರ್ಖಂಡ್ ವಿಧಾನಸಭೆಯ ಅಧಿಕಾರಾವಧಿಯು ಜನವರಿ 5, 2025 ರಂದು ಕೊನೆಗೊಳ್ಳಲಿದೆ. ಸದ್ಯ ಮಹಾರಾಷ್ಟ್ರದಲ್ಲಿ ಬಿಜೆಪಿ – ಏಕನಾಥ್ ಶಿಂದೆ ನೇತೃತ್ವದ ಸರ್ಕಾರವಿದ್ದರೆ, ಜಾರ್ಖಂಡ್‌ನಲ್ಲಿ ಜೆಎಂಎಂ ಸರ್ಕಾರ ಅಸ್ತಿತ್ವದಲ್ಲಿದೆ.
