ಮಹಾಸ್ವಾಮಿಗಳೇ, “ಪೊಲೀಸರ ಹೀನ ದೌರ್ಜನ್ಯದ ವಿಡಿಯೋ ನೋಡಲು ನಮಗೆ ಸಮಯವಿಲ್ಲ” ಅಂತ ನೀವು ಹೇಳಿದ್ದು ಸುಳ್ಳೇ?

Date:

ದೆಹಲಿಯಲ್ಲಿ ನಡೆಯುತ್ತಿರುವ ಸಿಜೆಪಿ ನೇತೃತ್ವದ ಪ್ರತಿಭಟನೆಗೆ ಸಂಬಂಧಿಸಿದ ಅರ್ಜಿಯ ವಿಚಾರದಲ್ಲಿ ಮಾಧ್ಯಮಗಳು ತಪ್ಪು ವರದಿ ಮಾಡಿವೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -

ಜುಲೈ 22ರಂದು ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಅತಿಯಾದ ಬಲಪ್ರಯೋಗ ನಡೆಸುತ್ತಿದ್ದಾರೆ ಎಂದು ಆರೋಪಿಸಿ, ಪ್ರಕರಣವನ್ನು ತುರ್ತಾಗಿ ವಿಚಾರಣೆಗೆ ಪಟ್ಟಿ ಮಾಡುವಂತೆ ವಕೀಲರೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ ಮೌಖಿಕವಾಗಿ ಮನವಿ ಮಾಡಿದ್ದರು. ಆದರೆ, ಸಿಜೆಐ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಈ ಬಗ್ಗೆ ಶುಕ್ರವಾರ ತೆರೆದ ನ್ಯಾಯಾಲಯದಲ್ಲಿ ಪ್ರತಿಕ್ರಿಯಿಸಿದ ಸಿಜೆಐ ಸೂರ್ಯಕಾಂತ್, “ಕೆಲವರು ಕೇವಲ ಪ್ರಾತಿನಿಧ್ಯ (Representation) ಸಲ್ಲಿಸಿದ್ದರು. ಆದರೆ ನಾನು ವಿಚಾರಣೆಗೆ ನಿರಾಕರಿಸಿದ್ದೇನೆ ಎಂದು ಮಾಧ್ಯಮಗಳು ಸುಳ್ಳು ಸುದ್ದಿ ಪ್ರಸಾರ ಮಾಡಿವೆ. ನ್ಯಾಯಾಲಯದ ನೋಂದಣಿ ವಿಭಾಗವನ್ನು ಪರಿಶೀಲಿಸಿದಾಗ ಒಂದು ಅರ್ಜಿಯನ್ನೂ ಸಲ್ಲಿಸಲಾಗಿರಲಿಲ್ಲ” ಎಂದಿದ್ದಾರೆ.

ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಕೋರ್ಟ್‌ ಹಾಲ್‌ನ ವಿಡಿಯೋಗಳು ಸಿಜೆಐ ಅವರು, ವಿಷಯ ಪ್ರಸ್ತಾಪಿಸುತ್ತಿದ್ದಂತೆ ʼನಮ್ಮ ಸಮಯ ಹಾಳು ಮಾಡಬೇಡಿ, ನಮಗೆ ವಿಡಿಯೋಗಳಲ್ಲಿ ಆಸಕ್ತಿ ಇಲ್ಲʼ ಎಂದಿರುವುದನ್ನು ಸ್ಪಷ್ಟವಾಗಿ ತೋರಿಸಿವೆ. ಆ ವಿಡಿಯೋಗಳು ಲಕ್ಷಾಂತರ ವೀವ್ಸ್‌ ಪಡೆದು ಭಾರೀ ವೈರಲ್‌ ಕೂಡ ಆಗಿವೆ. ಆದರೂ ಸಿಜೆಐ ಅವರು, ತಮ್ಮ ಹೇಳಿಕೆಯನ್ನ ತಪ್ಪಾಗಿ ವರದಿ ಮಾಡಿದ್ದಾರೆ ಎಂದು ಮಾಧ್ಯಮಗಳ ಮೇಲೆ ಉದ್ದೇಶಪೂರ್ವಕವಾಗಿ ಹಾಕುತ್ತಿರುವಂತೆ ಕಾಣುತ್ತಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಜತೆಗೆ ಇಂದು “ಸಂಬಂಧಿತ ನ್ಯಾಯಾಲಯದ ಪೂರ್ವಾನುಮತಿಯಿಲ್ಲದೆ ಸಾಮಾಜಿಕ ಮಾಧ್ಯಮ ಮತ್ತು ಇತರ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ನ್ಯಾಯಾಂಗ ಪ್ರಕ್ರಿಯೆಗಳ ಆಡಿಯೋ ಮತ್ತು ವಿಡಿಯೋ ರೆಕಾರ್ಡಿಂಗ್‌ಗಳನ್ನು ಹೊರತೆಗೆಯುವುದು, ಸಂಪಾದಿಸುವುದು, ಪ್ರಸಾರ ಮಾಡುವುದು, ಮರುಪೋಸ್ಟ್ ಮಾಡುವುದು, ಅಪ್‌ಲೋಡ್ ಮಾಡುವುದು, ಆ ಮೂಲಕ ಹಣಗಳಿಸುವುದನ್ನು ನಿಷೇಧಿಸುವ ಆದೇಶ ಹೊರಡಿಸಿದೆ.

ಈ ಬೆಳವಣಿಗೆಗಳು ವಿದ್ಯಾರ್ಥಿಗಳ ಪ್ರತಿಭಟನೆಯಿಂದ ಈಗಾಗಲೇ ಕಂಗೆಟ್ಟಿರುವ ಕೇಂದ್ರ ಬಿಜೆಪಿ ಸರ್ಕಾರದ ಜತೆಗೆ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರು ಕೂಡ ಒತ್ತಡಕ್ಕೆ ಸಿಲುಕಿದ್ದಾರೆಯೇ, ಒತ್ತಡದಿಂದ ಈ ರೀತಿಯ ಆದೇಶಗಳನ್ನು, ಪ್ರತಿಕ್ರಿಯೆಗಳನ್ನು, ಹೇಳಿಕೆಗಳನ್ನು ಕೊಡುತ್ತಿದ್ದಾರೆಯೇ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಯುತ್ತಿದ್ದು, ಪೊಲೀಸರು ಕ್ರೂರವಾಗಿ ವರ್ತಿಸುತ್ತಿದ್ದಾರೆ. ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಸಂಬಂಧಿಸಿದ ವಿಡಿಯೊ ಸಾಕ್ಷ್ಯಗಳೂ ಇವೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಇದನ್ನೂ ಓದಿ: ಆಸಕ್ತಿ ಕಳೆದುಕೊಂಡಿದ್ದೇನೆಂದು ವಿಚ್ಛೇದನ ಪಡೆಯಲು ಸಾಧ್ಯವಿಲ್ಲ: ಹೈಕೋರ್ಟ್

ಇದಕ್ಕೆ ಪ್ರತಿಕ್ರಿಯಿಸಿದ್ದ ಸಿಜೆಐ, “ನಿಮ್ಮ ಸಮಯವನ್ನೂ, ನಮ್ಮ ಸಮಯವನ್ನೂ ವ್ಯರ್ಥ ಮಾಡಬೇಡಿ. ನಿಮ್ಮ ಸಮಯ ನಮ್ಮ ಸಮಯಕ್ಕಿಂತಲೂ ಅಮೂಲ್ಯ” ಎಂದು ಹೇಳಿದ್ದರು.

ಬಳಿಕ ವಕೀಲರು, ನೀಟ್ ಪರೀಕ್ಷೆಯನ್ನು ನ್ಯಾಯಯುತವಾಗಿ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಹಾಗೂ ಪದೇಪದೆ ಪ್ರಶ್ನೆಪತ್ರಿಕೆ ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯನ್ನು ವಿಸರ್ಜಿಸಬೇಕು ಎಂಬ ಬೇಡಿಕೆಗಳನ್ನೂ ಮುಂದಿಟ್ಟಿದ್ದರು.

ನ್ಯಾಯಾಲಯ ಮುಂದಿನ ಪ್ರಕರಣದ ವಿಚಾರಣೆಗೆ ಮುಂದಾದಾಗಲೂ, ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಸಂಬಂಧಿಸಿದ ವಿಡಿಯೊಗಳನ್ನು ತೋರಿಸಲು ವಕೀಲರು ಒತ್ತಾಯಿಸಿದರು. ಆದರೆ, “ನಮಗೆ ವಿಡಿಯೊಗಳಲ್ಲಿ ಆಸಕ್ತಿಯಿಲ್ಲ” ಎಂದು ಸಿಜೆಐ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...