ಅಸ್ಸಾಂನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ತೆರವು: ಭುಗಿಲೆದ್ದ ಆಕ್ರೋಶ

Date:

ಅಸ್ಸಾಂನ ತಿನ್‌ಸುಕಿಯಾ ಜಿಲ್ಲೆಯ ದೋಮ್‌ದೊಮಾ ಪಟ್ಟಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಪ್ರತಿಮೆ ತೆರವುಗೊಳಿಸಿದ ನಂತರ ರಾಜ್ಯದ ಹಲವು ಕಡೆ ಆಕ್ರೋಶ ವ್ಯಕ್ತವಾಗಿದೆ.

- Advertisement -

ಗಡಿಯಾರ ಗೋಪುರ ನಿರ್ಮಾಣಕ್ಕೆ ಸ್ಥಳಾವಕಾಶ ಕಲ್ಪಿಸಿಕೊಡುವ ಕಾರಣದಿಂದ ಸ್ಥಳದಲ್ಲಿದ್ದ 5.5 ಅಡಿ ಎತ್ತರದ ಮಹಾತ್ಮ ಗಾಂಧಿ ಪ್ರತಿಮೆಯನ್ನು ಬುಧವಾರ(ಜುಲೈ 10) ರಂದು ಕ್ರೇನ್‌ ಮೂಲಕ ತೆರವುಗೊಳಿಸಲಾಗಿದೆ. ಪ್ರತಿಮೆ ಬದಲಿಸಿದ ನಂತರ ಸ್ಥಳೀಯ ನಿವಾಸಿಗಳು ಸೇರಿ ಹಲವು ಕಡೆ ಪ್ರತಿಭಟನೆ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ದೋಮ್‌ದೊಮಾ ಕ್ಷೇತ್ರದ ಮಾಜಿ ಶಾಸಕ ದುರ್ಗಾ ಭುಮ್‌ಜಿ, “ರಾಷ್ಟ್ರಪಿತನ ಪ್ರತಿಮೆಯಿದ್ದ ಸ್ಥಳದಲ್ಲಿ ನಾವು ಗಡಿಯಾರ ಗೋಪುರ ನಿರ್ಮಿಸಲು ಅವಕಾಶ ನೀಡುವುದಿಲ್ಲ. ಗಡಿಯಾರ ಗೋಪುರವನ್ನು ಎಲ್ಲಿ ಬೇಕಾದರೂ ನಿರ್ಮಿಸಬಹುದು. ಆದರೆ ಗಾಂಧಿ ಪ್ರತಿಮೆ ಮೂಲ ಸ್ಥಳದಲ್ಲಿಯೇ ಇರಬೇಕು. ಇದು ರಾಷ್ಟ್ರಪಿತನಿಗೆ ಮಾಡಿದ ಅವಮಾನ. ಇದರಿಂದ ಜನರ ಭಾವನೆಗಳಿಗೆ ಧಕ್ಕೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮನಗರ ಜಿಲ್ಲೆ ಹೆಸರು ಬದಲಾವಣೆ ಯಾರಿಗಾಗಿ, ಏತಕ್ಕಾಗಿ?

ಮಾಜಿ ಶಾಸಕ ದುರ್ಗಾ ಭುಮ್‌ಜಿ ಹಾಗೂ ಅಸ್ಸಾಂನ ಅಖಿಲ ಭಾರತ ವಿದ್ಯಾರ್ಥಿಗಳ ಒಕ್ಕೂಟದ ಕಾರ್ಯಕರ್ತರ ನೇತೃತ್ವದಲ್ಲಿ ನೂರಾರು ಮಂದಿ ಟೈರ್‌ಗೆ ಬೆಂಕಿ ಹಚ್ಚಿ ರಸ್ತೆತಡೆ ನಡೆಸಿದರು.

ಪ್ರತಿಭಟನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, “ಜಿಲ್ಲಾಡಳಿತ ಪ್ರತಿಮೆ ತೆರವುಗೊಳಿಸುವ ನಿರ್ಧಾರದ ಬಗ್ಗೆ ತಮಗೆ ತಿಳಿದಿರಲಿಲ್ಲ. ನಿಜ ಸಂಗತಿಯ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ಅಸ್ಸಾಂ ಮಹಾತ್ಮ ಗಾಂಧಿಯವರ ಬಗ್ಗೆ ಸಾಕಷ್ಟು ಋಣಿಯಾಗಿದೆ. ಅವರು ಅಸ್ಸಾಂಅನ್ನು ಭಾರತಕ್ಕೆ ಭಾರತದ ಭಾಗವಾಗಿಸಲು ದೃಢವಾಗಿ ನಿಂತಿದ್ದರು” ಎಂದು ತಿಳಿಸಿದ್ದಾರೆ.

ಪ್ರತಿಭಟನೆಯ ನಂತರ ಮಾತನಾಡಿದ ಸ್ಥಳೀಯ ಶಾಸಕ ರೂಪೇಶ್ ಗೋವಾಲಾ, ಪ್ರತಿಮೆಯಿದ್ದ ಸ್ಥಳದಲ್ಲಿ 6.5 ಅಡಿ ಎತ್ತರದ ಪ್ರತಿಮೆಯನ್ನು ಇನ್ನು 6 ತಿಂಗಳೊಳಗೆ ಗಡಿಯಾರ ಗೋಪುರದ ಜೊತೆಯಲ್ಲಿಯೇ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಗಾಳವನ್ನು BJPಗೆ ಕೊಟ್ಟ ಗ್ಯಾನೇಶ್‌ ಕುಮಾರ್‌ಗೆ ‘ಭಾರತ ರತ್ನ’ ಕೊಡಿ: ಜೆಕೆ ಸಿಎಂ ಒಮರ್ ಅಬ್ದುಲ್ಲಾ

ಇಡೀ ಪಶ್ಚಿಮ ಬಂಗಾಳವನ್ನೇ ಬಿಜೆಪಿಗೆ ಒಪ್ಪಿಸಿರುವ ಕೇಂದ್ರ ಚುನಾವಣಾ ಆಯೋಗದ (ECI)...

ನಾವು ‘ಇಂಡಿಯಾ’ ಒಕ್ಕೂಟದ ಭಾಗವಲ್ಲ, ಸಭೆಗೆ ಹಾಜರಾಗಲ್ಲ: ಎಎಪಿ ನಾಯಕ ಸಂಜಯ್ ಸಿಂಗ್

ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಸಭೆಯಿಂದ ಆಮ್ ಆದ್ಮಿ ಪಾರ್ಟಿ (ಎಎಪಿ)...

SIR | ಫಾರ್ಮ್-6 ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ; ಆದರೆ, ಪೂರ್ಣ ವಿನಾಯಿತಿಯಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಹೊಸ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಸಂಕೀರ್ಣ ಕಾಗದಪತ್ರಗಳ ಕಟ್ಟುನಿಟ್ಟಿನ...

​’ಇದು ಶತಮಾನದ ಅತಿ ದೊಡ್ಡ ನಾಟಕ’: ನಿರ್ಮಲಾ ಸೀತಾರಾಮನ್ ಸಿಟಿ ಬಸ್ ಪ್ರಯಾಣಕ್ಕೆ ನೆಟ್ಟಿಗರ ಕಟು ಟೀಕೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವ...