ಪ್ರಶ್ನೆಗಾಗಿ ಲಂಚ: ಲೋಕಸಭೆಯಿಂದ ಮಹುವಾ ಮೊಯಿತ್ರಾ ಉಚ್ಚಾಟನೆ

Date:

Advertisements

ಪ್ರಶ್ನೆಗಾಗಿ ಲಂಚ ಆರೋಪ ಪ್ರಕರಣದ ಮೇಲೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸಂಸತ್ತಿನಿಂದ ಉಚ್ಚಾಟಿಸಲಾಗಿದೆ.

ಸದನದ ನೈತಿಕ ಸಮಿತಿಯ ವರದಿಯನ್ನು ಶುಕ್ರವಾರ ಲೋಕಸಭೆಯಲ್ಲಿ ಮಂಡನೆ ಮಾಡಲಾಯಿತು. ವರದಿ ಮಂಡನೆ ಆಧಾರದ ಮೇಲೆ ಮಹುವಾ ಮೊಯಿತ್ರಾ ಅವರನ್ನು ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಉಚ್ಚಾಟಿಸಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ಮುಂದೂಡಲ್ಪಟ್ಟ ನಂತರ ಮಧ್ಯಾಹ್ನ ಸದನ ಮತ್ತೆ ಸೇರಿದಾಗ ಸಮಿತಿಯ ಮೊದಲ ವರದಿಯನ್ನು ನೈತಿಕ ಸಮಿತಿ ಅಧ್ಯಕ್ಷ ವಿನೋದ್ ಕುಮಾರ್ ಸೋಂಕರ್ ಅವರು ಮಂಡಿಸಿದರು.

Advertisements

“ಮಹುವಾ ಮೊಯಿತ್ರಾ ಅವರ ಕಡೆಯಿಂದ ಗಂಭೀರವಾದ ದುಷ್ಕೃತ್ಯಗಳು ಕಠಿಣ ಶಿಕ್ಷೆಗೆ ಅರ್ಹವಾಗಿದೆ. ಆದ್ದರಿಂದ ಸಮಿತಿಯು ಹದಿನೇಳನೇ ಲೋಕಸಭೆಯ ಸದಸ್ಯತ್ವದಿಂದ ಸಂಸದ ಮಹುವಾ ಅವರನ್ನು ಉಚ್ಚಾಟಿಸಬಹುದು ಎಂದು ಶಿಫಾರಸು ಮಾಡಿದೆ” ಎಂದು ತಿಳಿಸಿದರು.

ಚರ್ಚೆಯ ನಂತರ, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು “ಅನೈತಿಕ ನಡವಳಿಕೆ”ಗಾಗಿ ಟಿಎಂಸಿ ಸಂಸದರನ್ನು ಉಚ್ಚಾಟಿಸುವ ಪ್ರಸ್ತಾಪವನ್ನು ಮಂಡಿಸಿದರು. ಇದನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.

ಉಚ್ಚಾಟನೆಯ ನಂತರ ಮಾತನಾಡಿದ ಮಹುವಾ ಮೊಯಿತ್ರಾ, “ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ನನ್ನನ್ನು ಉಚ್ಚಾಟಿಸಲಾಗಿದೆ. ನನಗೆ ಸದನದಲ್ಲಿ ಮಾತನಾಡಲು ಅವಕಾಶವನ್ನೇ ಕೊಡಲಿಲ್ಲ” ಎಂದು ಆರೋಪಿಸಿದರು.

“ನನ್ನನ್ನು ಬಾಯಿ ಮುಚ್ಚಿಸುವ ಮೂಲಕ ಅದಾನಿ ಸಮಸ್ಯೆ ಮುಚ್ಚಿಹಾಕಬಹುದು ಎಂದು ಈ ಮೋದಿ ಸರ್ಕಾರ ಭಾವಿಸಿದ್ದು, ಅದನ್ನು ಕಾಂಗರೂ(ಸಾಕ್ಷ್ಯಾಧಾರ ಅನುಸರಿಸದೆ ಉದ್ದೇಶಪೂರ್ವಕವಾಗಿ ಆರೋಪಿಗಳ ವಿರುದ್ಧವಾಗಿ ತೀರ್ಪು ನೀಡುವುದು) ನ್ಯಾಯಾಲಯದ ಮೂಲಕ ತೋರಿಸಿದೆ ಎಂದು ನಾನು ನಿಮಗೆ ಹೇಳಬಯಸುತ್ತೇನೆ. ನೀವು ನನ್ನ ಪ್ರಕರಣದಲ್ಲಿ ತೋರಿಸಿದ ತರಾತುರಿ ಮತ್ತು ಪ್ರಕ್ರಿಯೆಯ ದುರುಪಯೋಗವು ನಿಮಗೆ ಅದಾನಿ ಎಷ್ಟು ಮುಖ್ಯ ಎಂಬುದನ್ನು ತೋರಿಸುತ್ತದೆ. ಒಂಟಿ ಮಹಿಳಾ ಸಂಸದೆಯನ್ನು ಬಾಯಿ ಮುಚ್ಚಿಸುವ ಮೂಲಕ ನೀವು ಎಷ್ಟು ಕಾಲ ಕಿರುಕುಳ ನೀಡುತ್ತೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೊಯಿತ್ರಾ ಉಚ್ಚಾಟನೆಯ ನಂತರ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಸದಸ್ಯರು ಲೋಕಸಭೆಯ ಹೊರಗೆ ಪ್ರತಿಭಟನೆ ನಡೆಸಿದರು. ವರದಿ ಮಂಡನೆಯಾದ ತಕ್ಷಣ ತೃಣಮೂಲ ಕಾಂಗ್ರೆಸ್ ಸದಸ್ಯರು ಮತ್ತು ಕಾಂಗ್ರೆಸ್‌ನ ಕೆಲವರು ಸದನದ ಬಾವಿಗಿಳಿದು ವರದಿಯ ಪ್ರತಿಯನ್ನು ನೀಡುವಂತೆ ಘೋಷಣೆಗಳನ್ನು ಕೂಗಿದರು.

ಈ ಸುದ್ದಿ ಓದಿದ್ದೀರಾ? ಮಿಜೋರಾಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಲಾಲ್ದುಹೋಮಾ

ತೃಣಮೂಲ ಕಾಂಗ್ರೆಸ್ ಸದಸ್ಯ ಕಲ್ಯಾಣ್ ಬ್ಯಾನರ್ಜಿ ವರದಿಯ ಶಿಫಾರಸುಗಳನ್ನು ಮತಕ್ಕೆ ಹಾಕುವ ಮೊದಲು ಅದರ ಬಗ್ಗೆ ಚರ್ಚೆ ನಡೆಸಬೇಕೆಂದು ಒತ್ತಾಯಿಸಿದರು.

ಗದ್ದಲದ ನಡುವೆಯೇ ಸಭಾಪತಿ ಸ್ಥಾನದಲ್ಲಿದ್ದ ಬಿಜೆಪಿ ಸದಸ್ಯ ರಾಜೇಂದ್ರ ಅಗರವಾಲ್ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು. ನಂತರ ನಡೆದ ಚರ್ಚೆಯಲ್ಲಿ ಮಹುವಾ ಅವರನ್ನು ಉಚ್ಚಾಟಿಸಲಾಯಿತು.

ನವೆಂಬರ್ 9 ರಂದು ನಡೆದ ಸಭೆಯಲ್ಲಿ ನೈತಿಕ ಸಮಿತಿಯು ಲೋಕಸಭೆಯಿಂದ ಮೊಯಿತ್ರಾ ಅವರನ್ನು ಉಚ್ಚಾಟಿಸಲು ಶಿಫಾರಸು ಮಾಡುವ ತನ್ನ ವರದಿಯನ್ನು ಅಂಗೀಕರಿಸಿತು.

ಈ ಹಿಂದೆ ಪಕ್ಷದಿಂದ ಅಮಾನತುಗೊಂಡಿದ್ದ ಕಾಂಗ್ರೆಸ್ ಸಂಸದೆ ಪ್ರಣೀತ್ ಕೌರ್ ಸೇರಿದಂತೆ ಸಮಿತಿಯ ಆರು ಸದಸ್ಯರು ವರದಿಯ ಪರವಾಗಿ ಮತ ಹಾಕಿದರು.

ಈ ವರದಿಯನ್ನು ಈ ಹಿಂದೆ ಡಿಸೆಂಬರ್ 4 ರಂದು ಲೋಕಸಭೆಯ ಕಾರ್ಯಸೂಚಿಯಲ್ಲಿ ಪಟ್ಟಿ ಮಾಡಲಾಗಿತ್ತು. ಆದರೆ ಅದನ್ನು ಮಂಡಿಸಲಾಗಿಲ್ಲ.

49 ವರ್ಷದ ಮಹುವಾ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು 2 ಕೋಟಿ ನಗದು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಜನರು ತಮ್ಮ ಪ್ರತಿನಿಧಿಯನ್ನು ಆರಿಸಿ ಸಂಸತ್ತಿಗೆ ಕಳುಹಿಸುತ್ತದೆ.
    ಸಂಸತ್ತು ಅವರನ್ನು ಉಚ್ಚಾಟಿಸುತ್ತಿದೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X