ಉತ್ತರ ಪ್ರದೇಶ | ದುರ್ಗಾ ಪೂಜೆ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಎನ್‌ಕೌಂಟರ್; ಬಂಧನ

Date:

ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ನಡೆದ ದುರ್ಗಾ ಪೂಜೆ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿಯನ್ನು ನೇಪಾಳ ಗಡಿಯ ಬಳಿ ಎನ್‌ಕೌಂಟರ್ ಮಾಡಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.

- Advertisement -

ಸರ್ಫರಾಜ್ ಪರಾರಿಯಾಗಲು ಯತ್ನಿಸುತ್ತಿದ್ದು, ಪೊಲೀಸರು ಎನ್‌ಕೌಂಟರ್ ಮಾಡಿ ಬಳಿಕ ಬಂಧಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಆತ ಮತ್ತು ಆತನ ಸಹ ಆರೋಪಿ ತಾಲಿಬ್ ಎನ್‌ಕೌಂಟರ್‌ನಲ್ಲಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ದುರ್ಗಾ ದೇವಿ ಮೆರವಣಿಗೆ ವೇಳೆ ಹಿಂಸಾಚಾರ: ಓರ್ವ ಯುವಕ ಸಾವು

ಭಾನುವಾರ ಸಂಜೆ ಮನ್ಸೂರ್ ಗ್ರಾಮದ ಮಹರಾಜ್‌ಗಂಜ್ ಪ್ರದೇಶದಲ್ಲಿ ಘರ್ಷಣೆ ಪ್ರಾರಂಭವಾಗಿದೆ. ದುರ್ಗಾ ಪೂಜೆ ಬಳಿಕ ಮರವಣಿಗೆ ವೇಳೆ ಧ್ವನಿವರ್ಧಕದಲ್ಲಿ ಸಂಗೀತ ಹಾಕುವ ವಿಚಾರದಲ್ಲಿ ವಾಗ್ವಾದ ಆರಂಭವಾಗಿದೆ.

ಬಳಿಕ ವಾಗ್ವಾದವು ಹಿಂಸಾಚಾರಕ್ಕೆ ತಿರುಗಿದ್ದು, ಕಲ್ಲು ತೂರಾಟ ಮತ್ತು ಗುಂಡಿನ ದಾಳಿ ನಡೆದಿದೆ. ಈ ಹಿಂಸಾಚಾರದಲ್ಲಿ ಆರು ಮಂದಿ ಗಾಯಗೊಂಡರೆ, ಓರ್ವ ಗಾಯಾಳು ಗುಂಡೇಟಿನಿಂದ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ | ದುರ್ಗಾ ಪೂಜೆ ನಡುವೆಯೂ ಆಮರಣಾಂತ ಉಪವಾಸ ಮುಂದುವರಿಸಿದ ವೈದ್ಯರು

ರೆಹುವಾ ಮನ್ಸೂರ್ ಗ್ರಾಮದ ನಿವಾಸಿ ರಾಮ್ ಗೋಪಾಲ್ ಮಿಶ್ರಾ ಅವರ ಕುಟುಂಬವು ಮೃತದೇಹದ ಅಂತ್ಯಸಂಸ್ಕಾರ ನಡೆಸಲು ನಿರಾಕರಿಸಿ ಧರಣಿ ಸತ್ಯಾಗ್ರಹ ನಡೆಸಿತ್ತು. ಪೊಲೀಸರು ಮತ್ತು ಆಡಳಿತಾಧಿಕಾರಿಗಳು ಸೂಕ್ತ ಕ್ರಮದ ಭರವಸೆ ನೀಡಿದ ಬಳಿಕ ಅಂತ್ಯಸಂಸ್ಕಾರ ನಡೆಸಿದ್ದಾರೆ.

ಇದಾದ ಮರುದಿನವೇ ಉದ್ವಿಗ್ನತೆ ಇನ್ನಷ್ಟು ಹೆಚ್ಚಾಗಿದೆ. ಸ್ಥಳದಲ್ಲಿ ಪೊಲೀಸ್ ಭದ್ರತೆ ಅಧಿಕಗೊಳಿಸಲಾಗಿದ್ದು, ಈ ಪ್ರಕರಣದಲ್ಲಿ 30ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...