ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಟ್ಟಿನ ನಡುವೆಯೇ ಶಿಕ್ಷಣ ಇಲಾಖೆಯಲ್ಲಿ ಮಹತ್ವದ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ಎತ್ತಂಗಡಿ

Date:

ದೇಶಾದ್ಯಂತ ಭಾರಿ ವಿವಾದ ಸೃಷ್ಟಿಸಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ (ನೀಟ್-ಯುಜಿ) ಖಂಡಿಸಿ ತೀವ್ರ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರವು ಮಹತ್ವದ ಆಡಳಿತಾತ್ಮಕ ಕಾರ್ಯಾಚರಣೆ ನಡೆಸಿದೆ. ಕೇಂದ್ರ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ವಿನೀತ್ ಜೋಶಿ ಅವರನ್ನು ಎತ್ತಂಗಡಿ ಮಾಡಲಾಗಿದ್ದು, ಅವರ ಸ್ಥಾನಕ್ಕೆ ನರೇಶ್ ಪಾಲ್ ಗಂಗ್ವಾರ್ ಅವರನ್ನು ನೂತನ ಶಿಕ್ಷಣ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

- Advertisement -

2025ರ ಜನವರಿಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದ ವಿನೀತ್ ಜೋಶಿ ಅವರನ್ನು ಇದೀಗ ಪಂಚಾಯತ್ ರಾಜ್ ಸಚಿವಾಲಯದ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಗುರುವಾರ ತಡರಾತ್ರಿ ನಡೆದ ಈ ಮಹತ್ವದ ಆಡಳಿತಾತ್ಮಕ ಪುನರ್‌ರಚನೆಯಲ್ಲಿ ಒಟ್ಟು 13 ಅಧಿಕಾರಿಗಳ ನೇಮಕಾತಿ ಮತ್ತು ನಾಲ್ವರ ಸ್ಥಾನಪಲ್ಲಟ ಮಾಡಲಾಗಿದೆ. ಇದೇ ವೇಳೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದ ಟಿ.ಕೆ. ಅನಿಲ್ ಕುಮಾರ್ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನೂತನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಪ್ರಶ್ನೆಪತ್ರಿಕೆ ಸೋರಿಕೆ ವಿಚಾರದಲ್ಲಿ ‘ಕಾಕ್‌ರೋಚ್ ಜನತಾ ಪಾರ್ಟಿ’ (CJP) ಹಾಗೂ ವಿರೋಧ ಪಕ್ಷಗಳು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತೀವ್ರ ಪ್ರತಿಭಟನೆ ನಡೆಸುತ್ತಿವೆ. ಈ ಬಿಕ್ಕಟ್ಟನ್ನು ನಿರ್ವಹಿಸುವಲ್ಲಿ ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ಅವರು ‘ನಿರ್ಲಕ್ಷ್ಯ ಮತ್ತು ನಿರಾಸಕ್ತಿ’ ತೋರಿದ್ದಾರೆ ಎಂಬ ಕಾರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಕಠಿಣ ಕ್ರಮ ಕೈಗೊಂಡಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ತಿಳಿಸಿದ್ದಾರೆ. “ಪರೀಕ್ಷಾ ಅಕ್ರಮಕ್ಕೆ ಕಾರಣರಾದವರ ವಿರುದ್ಧ ಹಾಗೂ ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಇದು ಮೋದಿ ಗ್ಯಾರಂಟಿ” ಎಂದು ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ಅಕ್ರಮದ ಪ್ರಕರಣಗಳ ತ್ವರಿತ ವಿಲೇವಾರಿಗಾಗಿ ಕೇಂದ್ರ ಸರ್ಕಾರವು ಈಗಾಗಲೇ ‘ಫಾಸ್ಟ್ ಟ್ರ್ಯಾಕ್’ (ತ್ವರಿತಗತಿ) ನ್ಯಾಯಾಲಯವನ್ನು ರಚಿಸಿ ಅಧಿಸೂಚನೆ ಹೊರಡಿಸಿದೆ. ಗುರುವಾರ ತಡರಾತ್ರಿ ವಿಡಿಯೊ ಸಂದೇಶ ಬಿಡುಗಡೆ ಮಾಡಿದ್ದ ಪ್ರಧಾನಿ ಮೋದಿ, ಶುಕ್ರವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ, ಮುಂದಿನ ವಾರ ಸಂಸತ್ತಿನಲ್ಲಿ ವಿದ್ಯಾರ್ಥಿಗಳ ಹಿತ ಕಾಯುವ ಕಠಿಣ ಕಾನೂನು ರೂಪಿಸುವ ವಿಧೇಯಕವನ್ನು ಮಂಡಿಸುವ ಭರವಸೆ ನೀಡಿದ್ದಾರೆ..

ವರ್ಗಾವಣೆಗೊಂಡಿರುವ ವಿನೀತ್ ಜೋಶಿ ಅವರು 1992ರ ಬ್ಯಾಚ್‌ನ ಮಣಿಪುರ ಕೇಡರ್ ಅಧಿಕಾರಿಯಾಗಿದ್ದಾರೆ. ಇವರು ಈ ಹಿಂದೆ ಮಣಿಪುರದ ಮುಖ್ಯ ಕಾರ್ಯದರ್ಶಿಯಾಗಿದ್ದರು. ಜೊತೆಗೆ ನೀಟ್ ಹಾಗೂ ಜೆಇಇ ಪರೀಕ್ಷೆಗಳನ್ನು ನಡೆಸುವ ‘ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ’ಯ (NTA) ಮೊದಲ ಮಹಾನಿರ್ದೇಶಕರಾಗಿ ಮತ್ತು ಸಿಬಿಎಸ್‌ಇ (CBSE) ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ನೂತನ ಶಿಕ್ಷಣ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ನರೇಶ್ ಪಾಲ್ ಗಂಗ್ವಾರ್ ಅವರು 1994ರ ಬ್ಯಾಚ್‌ನ ಪಶ್ಚಿಮ ಬಂಗಾಳ ಕೇಡರ್ ಅಧಿಕಾರಿಯಾಗಿದ್ದಾರೆ. ಪ್ರಸ್ತುತ ಮೀನುಗಾರಿಕೆ ಮತ್ತು ಪಶುಸಂಗೋಪನಾ ಸಚಿವಾಲಯದ ಕಾರ್ಯದರ್ಶಿಯಾಗಿದ್ದ ಇವರು, ಈ ಹಿಂದೆ ರಾಜಸ್ಥಾನದ ಶಾಲಾ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿ ಹಾಗೂ ಟೋಂಕ್, ಜೋಧ್‌ಪುರ, ಭರತ್‌ಪುರ ಸೇರಿದಂತೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ ಅಪಾರ ಅನುಭವ ಹೊಂದಿದ್ದಾರೆ. ಇವರು 2020ರಲ್ಲಿ ಕೇಂದ್ರ ಸೇವೆಗೆ ನಿಯೋಜನೆಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...