34 ವರ್ಷಗಳ ಹಿಂದಿನ ಪ್ರಕರಣದಲ್ಲಿ 84ರ ವೃದ್ಧನಿಗೆ ಕಠಿಣ ಶಿಕ್ಷೆ

Date:

34 ವರ್ಷಗಳ ಹಿಂದಿನ ಕೊಲೆ ಯತ್ನ ಪ್ರಕರಣವೊಂದರಲ್ಲಿ 84 ವರ್ಷದ ವೃದ್ಧ ಸೇರಿದಂತೆ ಒಂದೇ ಕುಟುಂಬದ ಐವರಿಗೆ ಬಿಹಾರದ ವೈಶಾಲಿ ಜಿಲ್ಲಾ ನ್ಯಾಯಾಲಯವು ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ತೀವ್ರ ವಯೋಸಹಜ ದೌರ್ಬಲ್ಯದಿಂದ ಬಳಲುತ್ತಿರುವ ವೃದ್ಧ ನ್ಯಾಯಾಲಯಕ್ಕೆ ಬರಲು ಕಷ್ಟಪಡುತ್ತಿರುವ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನ್ಯಾಯಾಂಗ ವ್ಯವಸ್ಥೆಯ ವಿಳಂಬ ಧೋರಣೆಯ ಕುರಿತು ಕಾನೂನು ತಜ್ಞರು ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

- Advertisement -

ಜಿಲ್ಲಾ ಮತ್ತು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ (1ನೇ) ಮನೋಜ್ ಕುಮಾರ್ ತಿವಾರಿ ಅವರು ನಾಲ್ವರು ದೋಷಿಗಳಿಗೆ ತಲಾ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದ್ದರೆ, 84 ವರ್ಷದ ವೃದ್ಧ ದೀಪಾ ರಾಯ್ ಅವರಿಗೆ ಮೂರು ವರ್ಷಗಳ ಶಿಕ್ಷೆ ವಿಧಿಸಿದ್ದಾರೆ. ದೋಷಿಗಳಾದ ದೀಪಾ ರಾಯ್, ಜಗದೀಶ್ ರಾಯ್, ನರೇಶ್ ರಾಯ್, ನಾಗದೇವ್ ರಾಯ್ ಮತ್ತು ನಕೇಶ್ವರ್ ರಾಯ್ ಅವರಿಗೆ ತಲಾ 25,000 ದಂಡವನ್ನೂ ವಿಧಿಸಲಾಗಿದೆ. ಆದರೆ, ದೀಪಾ ರಾಯ್ ಅವರ ಇಳಿವಯಸ್ಸನ್ನು ಪರಿಗಣಿಸಿ ನ್ಯಾಯಾಲಯವು ಅವರಿಗೆ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ವೃದ್ಧ ದೀಪಾ ರಾಯ್ ಅವರು ನಡೆಯಲೂ ಆಗದೆ ಇಬ್ಬರ ಆಸರೆಯಲ್ಲಿ ಕೋರ್ಟ್‌ ಮೆಟ್ಟಿಲೇರುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅವರು, ಈ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಸ್ವಯಂಪ್ರೇರಿತವಾಗಿ (ಸುಮೋಟೊ) ಕೈಗೆತ್ತಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿರುವ ಅವರು, “ವಯಸ್ಸಿನ ಆಧಾರದ ಮೇಲಾದರೂ ಆತನನ್ನು ಬಿಡುಗಡೆ ಮಾಡಬೇಕು. ನ್ಯಾಯಾಂಗ ವ್ಯವಸ್ಥೆಯು ತನ್ನ ವಿಳಂಬ ಧೋರಣೆ ಮತ್ತು ಅಸಡ್ಡೆಯಿಂದಾಗಿ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು. ಮನುಷ್ಯನೊಬ್ಬ ಕಳೆದುಕೊಂಡ ಸ್ವಾತಂತ್ರ್ಯದ ಒಂದು ದಿನಕ್ಕೂ ಹಣ ಪರಿಹಾರವಾಗಲಾರದು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಕಾಗದದ ನೋಟುಗಳಿಗೆ ಗುಡ್ ಬೈ? ಭಾರತಕ್ಕೆ ಬರಲಿದೆಯೇ ಪಾಲಿಮರ್ ಕರೆನ್ಸಿ

1992ರ ನವೆಂಬರ್ 10ರಂದು ಜುರಾವನ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಅದಾಲತ್ ರಾಯ್ ಮತ್ತು ಅವರ ಪತ್ನಿ ರಾಮಸಖಿ ದೇವಿ ತಮ್ಮ ಮನೆಯ ಹೊರಗೆ ಕುಳಿತಿದ್ದಾಗ, ಶಸ್ತ್ರಾಸ್ತ್ರಗಳೊಂದಿಗೆ ಅಲ್ಲಿಗೆ ಬಂದಿದ್ದ ದೀಪಾ ರಾಯ್ ಮತ್ತು ಅವರ ಕುಟುಂಬಸ್ಥರು ದಾರಿಯಲ್ಲಿ ಒಡೆದ ಗಾಜಿನ ಚೂರುಗಳನ್ನು ಹರಡಲಾರಂಭಿಸಿದ್ದರು. ಇದನ್ನು ದಂಪತಿ ಪ್ರಶ್ನಿಸಿದಾಗ, ಅವರ ಮೇಲೆ ಹಲ್ಲೆ ನಡೆಸಿ ಗುಂಡು ಹಾರಿಸಲಾಗಿತ್ತು. ಪರಿಣಾಮ ದಂಪತಿ ತೀವ್ರವಾಗಿ ಗಾಯಗೊಂಡಿದ್ದರು.

ಈ ಘಟನೆಗೆ ಸಂಬಂಧಿಸಿದಂತೆ 1993ರ ಮಾರ್ಚ್‌ನಲ್ಲಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 1993ರ ಜೂನ್ 17ರಂದು ಅಧಿಕೃತವಾಗಿ ಆರೋಪಗಳನ್ನು ನಿಗದಿಪಡಿಸಲಾಗಿತ್ತು. ಸುದೀರ್ಘ 34 ವರ್ಷಗಳ ಕಾಲ ನಡೆದ ಈ ವಿಚಾರಣೆಯ ಅವಧಿಯಲ್ಲಿ ಪ್ರಕರಣದ ನಾಲ್ವರು ಆರೋಪಿಗಳು ಮೃತಪಟ್ಟಿದ್ದಾರೆ.
ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 148,307 ಹಾಗೂ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 27ರ ಅಡಿ ದೋಷಿಗಳಿಗೆ ಶಿಕ್ಷೆ ಪ್ರಕಟಿಸಲಾಗಿದೆ ಎಂದು ಹೆಚ್ಚುವರಿ ಸರ್ಕಾರಿ ಅಭಿಯೋಜಕ (ಎಪಿಪಿ) ಖ್ವಾಜಾ ಹಸನ್ ಖಾನ್ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ದೆಹಲಿ | ‘ಫಾರ್ಮ್ 7’ ಅಸ್ತ್ರ ಬಳಸಿ ಮುಸ್ಲಿಂ ಮತದಾರರ ಹೆಸರು ಡಿಲೀಟ್ ಮಾಡಿಸಿದ ಬಿಜೆಪಿ BLAಗಳು! 

ದೆಹಲಿಯಲ್ಲಿ ಸುದೀರ್ಘ ಕಾಲದಿಂದ ವಾಸಿಸುತ್ತಿರುವ ಮುಸ್ಲಿಂ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...