ಮದುವೆ ಆಗುವ ಪುರುಷರಿಗೆ ಮಾದಕ ದ್ರವ್ಯ ಸೇವನೆ ಪರೀಕ್ಷೆ ಕಡ್ಡಾಯಗೊಳಿಸಿ: ಎಎಪಿ ಸಂಸದ ಮಲ್ವಿಂದರ್ ಆಗ್ರಹ

Date:

ಮದುವೆ ಆಗುವ ಪುರುಷರಿಗೆ ವಿವಾಹಕ್ಕೆ ಮುನ್ನ ಮಾದಕ ದ್ರವ್ಯ ಸೇವನೆ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ಕಡ್ಡಾಯಗೊಳಿಸುವ ಕಾನೂನನ್ನು ಜಾರಿಗೆ ತರಬೇಕು ಎಂದು ಆಮ್ ಆದ್ಮಿ ಪಕ್ಷದ ಲೋಕಸಭಾ ಸಂಸದ ಮಲ್ವಿಂದರ್ ಸಿಂಗ್ ಕಾಂಗ್ ಶುಕ್ರವಾರ ಆಗ್ರಹಿಸಿದ್ದಾರೆ.

- Advertisement -

ಸಂಸತ್ತಿನಲ್ಲಿ ಶೂನ್ಯ ವೇಳೆಯಲ್ಲಿ ಮಾತನಾಡಿದ ಆನಂದಪುರ ಸಾಹಿಬ್ ಅನ್ನು ಪ್ರತಿನಿಧಿಸುವ ಮಲ್ವಿಂದರ್ ಸಿಂಗ್ ಹೆಚ್ಚುತ್ತಿರುವ ವಿಚ್ಛೇದನ ಮತ್ತು ಕೌಟುಂಬಿಕ ಹಿಂಸಾಚಾರ ಪ್ರಕರಣಗಳನ್ನು ಉಲ್ಲೇಖಿಸಿ ಈ ಆಗ್ರಹ ಮುಂದಿಟ್ಟಿದ್ದಾರೆ. ಹಾಗೆಯೇ ಪಂಜಾಬ್‌ನಲ್ಲಿ ಮಾತ್ರವಲ್ಲದೆ ದೇಶಾದ್ಯಂತ ವಿವಾಹಗಳು ಮತ್ತು ಕುಟುಂಬಗಳ ವಿಘಟನೆ ಹೆಚ್ಚುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಹೊಸ ವರ್ಷಾಚರಣೆ | ₹21 ಕೋಟಿ ಮೌಲ್ಯದ ಮಾದಕ ದ್ರವ್ಯ ಪ್ರಕರಣ: ಸಿನಿ ತಾರೆಯರ ಮೇಲೆ ಗುಮಾನಿ

ಸಮಾಜದಲ್ಲಿರುವ ದ್ವಿಮುಖ ನಿಲುವುಗಳನ್ನೂ ಈ ಸಂದರ್ಭದಲ್ಲಿ ಪ್ರಶ್ನಿಸಿದ್ದಾರೆ. “ಮದುವೆಗೂ ಮುನ್ನ ಹುಡುಗಿಯ ಶಿಕ್ಷಣ, ಹಿನ್ನೆಲೆ, ಇತರೆ ಮಾಹಿತಿಯನ್ನು ಕೂಲಂಕಷವಾಗಿ ಪರಿಶೀಲಿಸುತ್ತಾರೆ. ಆದರೆ ಪುರುಷರಿಗೆ ಇದೇ ರೀತಿಯ ತಪಾಸಣೆಗಳನ್ನು ಮಾತ್ರ ನಿರ್ಲಕ್ಷಿಸಲಾಗುತ್ತದೆ” ಎಂದು ಹೇಳಿದರು.

ಪುರುಷರು ಮಾದಕ ದ್ರವ್ಯ ಸೇವನೆ ಮಾಡುವುದು, ಅವರಿಗೆ ಗಂಭೀರ ಕಾಯಿಲೆಗಳು ಇರುವುದು ಮತ್ತು ಅಪರಾಧ ಕೃತ್ಯದಲ್ಲಿ ಭಾಗಿಯಾಗುತ್ತಲಿರುವುದು ಮದುವೆಯ ನಂತರವೇ ಬೆಳಕಿಗೆ ಬರುತ್ತವೆ. ಇದು ಮಹಿಳೆಯರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಸಂಸದರು ತಿಳಿಸಿದರು.

ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಮದುವೆ ಆಗುವ ಪುರುಷರಿಗೆ ಮಾದಕ ದ್ರವ್ಯ ಸೇವನೆ ಪರೀಕ್ಷೆ ನಡೆಸುವುದು ಮತ್ತು ವೈದ್ಯಕೀಯ ಫಿಟ್‌ನೆಸ್ ಪ್ರಮಾಣಪತ್ರಗಳನ್ನು ನೀಡುವುದು ಕಡ್ಡಾಯ ಮಾಡಬೇಕು ಎಂದು ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ, ಚೀನಾಗೆ ಹೆದರಿದಿರೇ?

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ...