ಮಲಯಾಳಂ ಚಿತ್ರರಂಗದಲ್ಲಿ ಮತ್ತೆ ಸಂಚಲನ; ನಟ ಜಯಸೂರ್ಯ ವಿರುದ್ಧ ನಟಿ ಸೋನಿಯಾ #MeToo ಆರೋಪ

Date:

Advertisements

ಮಲಯಾಳಂ ನಟ ಜಯಸೂರ್ಯ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿರುವ ನಟಿ ಸೋನಿಯಾ ಮಲ್ಹಾರ್, ‘ನನ್ನ ಹೇಳಿಕೆಗಳು ಸತ್ಯ. ನನಗೆ ಜಯಸೂರ್ಯ ಲೈಂಗಿಕ ಕಿರುಕುಳ ನೀಡಿದ್ದಾರೆ’ ಎಂದು ಆರೋಪಿಸಿದ್ದಾರೆ. ಯಾವುದೇ ಬೆದರಿಕೆ ಹಾಕಿದರೂ ಪ್ರಕರಣದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.

“ಜಯಸೂರ್ಯ ಅವರು ಆರೋಪಗಳನ್ನು ಸುಳ್ಳು ಎಂದು ಹೇಳುತ್ತಿದ್ದಾರೆ. ನನ್ನ ಆರೋಪಗಳು-ಹೇಳಿಕೆಗಳು ಸುಳ್ಳಲ್ಲ. ಸತ್ಯ ಮತ್ತು ಸ್ಪಷ್ಟವಾಗಿವೆ. ಇದು ನನ್ನ ಜೀವನದಲ್ಲಿ ನಾನು ದಾಖಲಿಸಿದ 1ನೇ ಎಫ್‌ಐಆರ್” ಎಂದು ಸೋನಿಯಾ ಹೇಳಿದ್ದಾರೆ.

ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಯು ಹಲವಾರು ವರ್ಷಗಳಿಂದ ಮಲಯಾಳಂ ಚಿತ್ರರಂಗದಲ್ಲಿ ನಟಿಯರ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳ ಬಗ್ಗೆ ವಿವರಿಸಿದೆ. ವರದಿ ಬಹಿರಂಗಗೊಂಡ ಬಳಿಕ, ಹಲವಾರು ನಟಿಯರು ತಮ್ಮ ಮೇಲಾದ ದೌರ್ಜನ್ಯ-ಕಿರುಕುಳಗಳ ಬಗ್ಗೆ ಮಾತನಾಡುತ್ತಿದ್ದಾರೆ. ಅವರಲ್ಲಿ ನಟಿ ಸೋನಿಯಾ ಕೂಡ ಒಬ್ಬರು.

Advertisements

ಈ ಹಿಂದೆ ಬೇರೊಂದು #MeToo ಪ್ರಕರಣದಲ್ಲಿ ಆರೋಪಿಯಾಗಿದ್ದ ಜಯಸೂರ್ಯ, ಇದೀಗ ಮತ್ತೊಂದು ಪ್ರಕರಣದಲ್ಲಿಯೂ ಆರೋಪಿಯಾಗಿದ್ದಾರೆ. ಆದರೆ, ತಮ್ಮ ವಿರುದ್ಧದ ಆರೋಪ ಸುಳ್ಳು. ತನ್ನ ವಿರುದ್ಧ ಆರೋಪ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇನೆಂದು ಬೆದರಿಕೆ ಹಾಕಿದ್ದಾರೆ.

“ಸುಳ್ಳು ಯಾವಾಗಲೂ ಸತ್ಯಕ್ಕಿಂತ ವೇಗವಾಗಿ ಹರಡುತ್ತದೆ. ಆದರೆ, ಕಡೆಗೆ ಸತ್ಯ ಮೇಲುಗೈ ಸಾಧಿಸುತ್ತದೆ. ನಾನು ನಿರಪರಾಧಿ ಎಂದು ಸಾಬೀತುಪಡಿಸಲು ಎಲ್ಲ ಕಾನೂನು ಪ್ರಕ್ರಿಯೆಗಳನ್ನು ಮುಂದುವರಿಸುತ್ತೇನೆ” ಎಂದು ಜಯಸೂರ್ಯ ಹೇಳಿದ್ದಾರೆ.

ಹೇಮಾ ಸಮಿತಿ ನೀಡಿದ್ದ 235 ಪುಟಗಳ ಸಮಗ್ರ ವರದಿಯಲ್ಲಿ ಮಲಯಾಳಂ ಚಿತ್ರರಂಗದ ಸುಮಾರು 10-15 ಪ್ರಭಾವಿ ಪುರುಷ ನಿರ್ಮಾಪಕರು, ನಿರ್ದೇಶಕರು ಮತ್ತು ನಟರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಹೇಳಲಾಗಿತ್ತು. ಇದು, ದೇಶಾದ್ಯಂತ ಮೀಟೂ ಅಭಿಮಾನದ ಜ್ವಾಲೆಯನ್ನು ಎಬ್ಬಿಸಿತ್ತು. ಮಲಯಾಳಂ ಚಿತ್ರರಂಗದಲ್ಲಿ ಸಂಚಲನ ಸೃಷ್ಠಿಯಾಗಿತ್ತು. ಭಾರೀ ಆಕ್ರೋಶ ಭುಗಿಲೆದ್ದಿದ್ದರಿಂದ ಖ್ಯಾತ ನಟ, ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷ ಮೋಹನ್ ಲಾಲ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಣ್ಣಾಮಲೈ ಕೈಯಿಂದ ಪ್ರಶಸ್ತಿ ಪಡೆಯಲು ವಿದ್ಯಾರ್ಥಿ ನಕಾರ

ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿದ್ದ ವಿದ್ಯಾರ್ಥಿಯೊಬ್ಬ ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರಿಂದ...

ಆಸ್ಪತ್ರೆ ನಿರ್ಮಾಣ ಹಗರಣ: ಎಎಪಿಯ ಸೌರಭ್ ಭಾರದ್ವಾಜ್ ನಿವಾಸದ ಮೇಲೆ ಇಡಿ ದಾಳಿ

ದೆಹಲಿ ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ ಆಸ್ಪತ್ರೆಗಳ ನಿರ್ಮಾಣದಲ್ಲಿ ಹಗರಣ ನಡೆದಿದೆ ಎಂಬ...

ನಟ ಶಿವಣ್ಣನ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು

ಸಹ ನಟಿಯ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕಾಮಿಡಿ...

VP-Polls | ಸುದರ್ಶನ್‌ ರೆಡ್ಡಿ ವಿರುದ್ಧದ ಅಮಿತ್‌ ಶಾ ಹೇಳಿಕೆ ಖಂಡಿಸಿದ ನಿವೃತ್ತ ನ್ಯಾಯಮೂರ್ತಿಗಳು

ಸಾಲ್ವಾ ಜುಡುಮ್‌ ತೀರ್ಪಿನ ಕುರಿತು ವಿರೋಧ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ಬಿ....

Download Eedina App Android / iOS

X