ಮೋಹನ್ ಭಾಗವತ್‌ರನ್ನು ಬಂಧಿಸಿ ಕರೆತನ್ನಿ ಎಂಬ ಆದೇಶವಿತ್ತು, ನಾನು ಪಾಲಿಸಲಿಲ್ಲ: ಮುಜಾವರ್

Date:

ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ ಭಾಗವತ್ ಅವರನ್ನು ಬಂಧಿಸುವಂತೆ ಸೂಚನೆ ಇತ್ತು ಎಂದು ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳದ (ಎಟಿಎಸ್) ಮಾಜಿ ಅಧಿಕಾರಿ ಮೆಹಬೂಬ್‌ ಮುಜಾವರ್‌ ಹೇಳಿದ್ದಾರೆ.

- Advertisement -

2008ರ ಸೆ. 29ರಂದು ನಡೆದ ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ 7 ಆರೋಪಿಗಳನ್ನು ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದ್ದರ ಕುರಿತು ಪ್ರತಿಕ್ರಿಯಿಸಿರುವ ಅವರು, ‘ಈ ಪ್ರಕರಣದ ಹಿಂದೆ ಕೇಸರಿ ಭಯೋತ್ಪಾದನೆ ಇತ್ತು ಎಂಬುದನ್ನು ಸಾಬೀತುಪಡಿಸುವ ಉದ್ದೇಶವಿತ್ತು. ಸುಳ್ಳು ಕಥೆಗಳನ್ನು ಎಟಿಎಸ್ ಹೆಣೆದಿದೆ ಎಂದು ನ್ಯಾಯಾಲಯ ಹೇಳಿದೆ’ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

‘ಘಟನೆ ನಡೆದಾಗ ಎಟಿಎಸ್‌ ಈ ಪ್ರಕರಣದ ತನಿಖೆ ನಡೆಸಿತ್ತು. ನಂತರದ ದಿನಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ಆರಂಭಿಸಿತು. ನಕಲಿ ತನಿಖೆಯನ್ನು ನಕಲಿ ಅಧಿಕಾರಿಯೊಬ್ಬರು ನಡೆಸಿದ್ದಾರೆ ಎಂಬುದನ್ನು ನ್ಯಾಯಾಲಯ ತನ್ನ ಆದೇಶದಲ್ಲಿ ಹೇಳಿದೆ’ ಎಂದು ಮುಜಾವರ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಾಢ್ಯರೊಂದಿಗೆ ಜೊತೆಯಾಗುವುದು ಜನದ್ರೋಹ

‘ನಾನೂ ಈ ಪ್ರಕರಣದ ತನಿಖಾ ತಂಡದಲ್ಲಿದ್ದೆ. ‘ಹೋಗಿ ಮೋಹನ್ ಭಾಗವತ್ ಅವರನ್ನು ಬಂಧಿಸಿ ಕರೆತನ್ನಿ’ ಎಂದು ಮೇಲಿನಿಂದ ಆದೇಶ ಬಂತು. ಎಟಿಎಸ್‌ ಯಾವ ರೀತಿಯಲ್ಲಿ ತನಿಖೆ ನಡೆಸಿತು ಮತ್ತು ಏಕೆ ಎಂಬುದನ್ನು ನಾನು ಹೇಳಲಾರೆ, ಆದರೆ ರಾಮ್‌ ಕಾಲಸಂಗ್ರ, ಸಂದೀಪ್ ದಾಂಗೆ, ದಿಲೀಪ್ ಪಾಟೀದಾರ್‌ ಮತ್ತು ಮೋಹನ ಭಾಗವತ್ ಅವರನ್ನು ಬಂಧಿಸಿ ಕರೆತರುವಂತೆ ಆದೇಶಿಸಲಾಗಿತ್ತು. ಇವು ಪಾಲಿಸಲು ಸಾಧ್ಯವಿಲ್ಲದ ಆದೇಶಗಳಾಗಿದ್ದವು’ ಎಂದಿದ್ದಾರೆ.

‘ಮೋಹನ ಬಾಗವತ್ ಅವರನ್ನು ಬಂಧಿಸಿ ಕರೆತರುವುದು ನನ್ನ ಸಾಮರ್ಥ್ಯಕ್ಕೂ ಮೀರಿದ್ದಾಗಿತ್ತು. ನಾನು ಆ ಆದೇಶವನ್ನು ಪಾಲಿಸಲಿಲ್ಲ. ಅದಕ್ಕಾಗಿ ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಯಿತು. ನನ್ನ 40 ವರ್ಷದ ವೃತ್ತಿ ಬದುಕನ್ನೇ ನಾಶ ಮಾಡಿದರು. ಹಿಂದೂ ಭಯೋತ್ಪಾದನೆ ಎಂಬುದು ಇರಲೇ ಇಲ್ಲ. ಅವೆಲ್ಲವೂ ಸುಳ್ಳು’ ಎಂದು ಮುಜಾವರ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...