ಕ್ರಿಸ್ಮಸ್ ದಾಂಧಲೆ: 6 ಬಜರಂಗಿಗಳಿಗೆ ಜಾಮೀನು; ಕೋಮುವಾದಿಗಳ ಸಂಭ್ರಮದ ಸ್ವಾಗತ

Date:

ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದ ‘ಮ್ಯಾಗ್ನೆಟೋ’ ಮಾಲ್‌ನಲ್ಲಿ ಕ್ರಿಸ್‌ಮಸ್ ಆಚರಣೆಯ ಅಲಂಕಾರವನ್ನು ಧ್ವಂಸ ಮಾಡಿದ್ದಕ್ಕಾಗಿ ಬಜರಂಗದಳದ ಆರು ಮಂದಿಯನ್ನು ಬಂಧಿಸಲಾಗಿತ್ತು. ಅವರಿಗೆ ಸೆಷನ್ಸ್‌ ನ್ಯಾಯಾಲಯವು ಜಾಮೀನು ನೀಡಿದ್ದು, ಅವರನ್ನು ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಹಾರ-ತುರಾಯಿ ಹಾಕಿ ಸ್ವಾಗತಿಸಿ, ಸಂಭ್ರಮಿಸಿದ್ದಾರೆ.

- Advertisement -

ರಾಯ್‌ಪುರ ಜೈಲಿನಿಂದ ಆರೋಪಿಗಳು ಹೊರಬಂದ ಕೂಡಲೇ, ಅವರಿಗೆ ಬಜರಂಗದಳ ಕಾರ್ಯಕರ್ತರು ಹಾರ ಹಾಕಿ, ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿದ್ದಾರೆ. ಹಿಂದುತ್ವದ ಘೋಷಣೆಗಳನ್ನು ಕೂಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಆರೋಪಿಗಳನ್ನು ಡಿಸೆಂಬರ್ 24ರಂದು ಬಂಧಿಸಲಾಗಿತ್ತು. ಅವರು ರಾಯ್‌ಪುರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಡಿಸೆಂಬರ್ 29ರಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಜಾಮೀನು ನಿರಾಕರಿಸಿತ್ತು. ಬಳಿಕ, ಆರೋಪಿಗಳು ಸೆಷನ್ಸ್‌ ನ್ಯಾಯಾಲಯದ ಮೊರೆಹೋಗಿದ್ದರು. ನ್ಯಾಯಾಲಯವು ಆರೋಪಿಗಳಿಗೆ ಜಾಮೀನು ನೀಡಿದೆ.

ಆರೋಪಿಗಳನ್ನು ಸ್ವಾಗತಿಸಿ ಸಂಭ್ರಮಿಸಿದ್ದನ್ನು ಸಮರ್ಥಿಸಿಕೊಂಡಿರುವ ಬಜರಂಗದಳದ ರಾಜ್ಯ ಮುಖ್ಯಸ್ಥ ರಿಷಿ ಮಿಶ್ರಾ, “ಮೆರವಣಿಗೆ ಮಾಡುವುದು, ಘೋಷಣೆ ಕೂಗುವುದರಲ್ಲಿ ತಪ್ಪೇನಿದೆ. ಛತ್ತೀಸ್‌ಗಢದಲ್ಲಿ ಕ್ರಿಶ್ಚಿಯನ್ನರು ಧಾರ್ಮಿಕ ಮತಾಂತರ ಮಾಡಿದ್ದಾರೆ, ಅವರ ವಿರುದ್ಧ ಘೋಷಣೆ ಕೂಗುವುದು ತಪ್ಪಲ್ಲ” ಎಂದಿದ್ದಾರೆ.

ಘಟನೆಯ ವಿವರ

ಡಿಸೆಂಬರ್ 24ರ ರಾತ್ರಿ ಶಸ್ತ್ರಸಜ್ಜಿತ ಗುಂಪು ‘ಮ್ಯಾಗ್ನೆಟೋ’ ಮಾಲ್‌ಗೆ ನುಗ್ಗಿ ಕ್ರಿಸ್‌ಮಸ್ ಅಲಂಕಾರಗಳನ್ನು ಧ್ವಂಸಗೊಳಿಸಿತು. ಮಾಲ್‌ನಲ್ಲಿ ಸಾಂಟಾ ಕ್ಲಾಸ್, ಹಿಮಸಾರಂಗ, ಜಾರುಬಂಡಿ ಮತ್ತು ಹಿಮ ಮಾನವರ ಪ್ರತಿಮೆಗಳನ್ನು ಆರೋಪಿಗಲನ್ನು ನಾಶಮಾಡಿದ್ದರು.

ಘಟನೆ ಸಂಬಂಧಿಸಿದಂತೆ ತೆಲಿಬಂಧ ಪೊಲೀಸ್ ಠಾಣೆಯಲ್ಲಿ 30-40 ಅಪರಿಚಿತರ ವಿರುದ್ಧ ಬಿಎನ್‌ಎಸ್ ಸೆಕ್ಷನ್‌ಗಳು 331(3), 324(2), 115(2), 191(2) ಹಾಗೂ 190ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು.

ಆರೋಪಿಗಳ ಬಂಧನವನ್ನು ವಿರೋಧಿಸಿ ಉದ್ರಿಕ್ತ ಬಜರಂಗದಳದ 300ಕ್ಕೂ ಹೆಚ್ಚು ಕಾರ್ಯಕರ್ತರು ಪೊಲೀಸ್‌ ಠಾಣೆಯ ಹೊರಗೆ ಜಮಾಸಿ ದಾಂಧಲೆ ನಡೆಸಿದ್ದರು. ಸುಮಾರು 9 ಗಂಟೆಗಳ ಕಾಲ ರಸ್ತೆ ತಡೆ ನಡೆಸಿ, ವಾಹನ ಸಂಚಾರಕ್ಕೆ ಅಡ್ಡಿಯುಂಟುಮಾಡಿದ್ದರು. ಆದಾಗ್ಯೂ, ಆ ಘಟನೆಗೆ ಸಂಬಂಧಿಸಿದಂತೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...