ಉತ್ತರ ಪ್ರದೇಶ ರೈಲು ದುರಂತಕ್ಕೆ ಪ್ರಧಾನಿ, ರೈಲ್ವೆ ಸಚಿವರ ವಿರುದ್ಧ ಖರ್ಗೆ ಆಕ್ರೋಶ

Date:

ಚಂಡೀಗಢ – ದಿಬ್ರುಗಢ ಎಕ್ಸ್‌ಪ್ರೆಸ್ ಹಳಿತಪ್ಪಿದ ಘಟನೆ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘಟನೆಯ ಸಂಪೂರ್ಣ ಹೊಣೆಹೊರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

- Advertisement -

‘ಉತ್ತರ ಪ್ರದೇಶದಲ್ಲಿ ಚಂಡೀಗಢ – ದಿಬ್ರುಗಢ ಎಕ್ಸ್‌ಪ್ರೆಸ್ ಹಳಿತಪ್ಪಿರುವುದು ಮೋದಿ ಸರ್ಕಾರವು ರೈಲು ಸುರಕ್ಷತೆಯನ್ನು ಹೇಗೆ ವ್ಯವಸ್ಥಿತವಾಗಿ ಅಪಾಯಕ್ಕೆ ಸಿಲುಕಿಸಿದೆ ಎಂಬುದಕ್ಕೆ ಮತ್ತೊಂದು ಉದಾಹರಣೆಯಾಗಿದೆ’ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಬಗ್ಗೆ ಎಕ್ಸ್‌ಪ್ರೆಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಮೃತರ ಕುಟುಂಬಗಳಿಗೆ ನಮ್ಮ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇವೆ’ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಕಾರಕ್ಕೆ ಇಕ್ಕಟ್ಟು ತಂದ ಖಾಸಗಿ ಮೀಸಲು ಸಮಸ್ಯೆ

ಒಂದು ತಿಂಗಳ ಹಿಂದೆ, ಸೀಲ್ದಾ-ಅಗರ್ತಲಾ ಕಾಂಚನಜುಂಗಾ ಎಕ್ಸ್‌ಪ್ರೆಸ್ ಗೂಡ್ಸ್ ರೈಲು ಡಿಕ್ಕಿ ಹೊಡೆದು 11 ಜನರು ಪ್ರಾಣ ಕಳೆದುಕೊಂಡಿದ್ದರು. ಸ್ವಯಂ ಚಾಲಿತ ಸಿಗ್ನಲ್ ವೈಫಲ್ಯ, ಕಾರ್ಯಾಚರಣೆ ನಿರ್ವ ಹಣೆಯಲ್ಲಿನ ಹಲವು ಹಂತಗಳಲ್ಲಿ ಇರುವ ಲೋಪಗಳು ಮತ್ತು ಲೊಕೊ ಪೈಲಟ್ ಮತ್ತು ರೈಲು ವ್ಯವಸ್ಥಾಪಕರೊಂದಿಗೆ ವಾಕಿ – ಟಾಕಿಯಂತಹ ನಿರ್ಣಾಯಕ ಸುರಕ್ಷತಾ ಸಾಧನಗಳ ಲಭ್ಯತೆಯಿಲ್ಲದಿರುವುದು ಅಪಘಾತಕ್ಕೆ ಕಾರಣ ಎಂದು ರೈಲ್ವೆ ಸುರಕ್ಷತಾ ಆಯುಕ್ತರ ವರದಿ ಹೇಳಿದೆ. ಸ್ವಪ್ರಚಾರಕ್ಕಾಗಿ ಯಾವುದೇ ಅವಕಾಶವನ್ನು ಬಿಡದ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವರು ಭಾರತೀಯ ರೈಲ್ವೆಯನ್ನು ಬಾಧಿಸಿರುವ ಬೃಹತ್ ಲೋಪಗಳ ನೇರ ಹೊಣೆಗಾರಿಕೆಯನ್ನು ಹೊರಬೇಕು ಎಂದು ಅವರು ಆಗ್ರಹಿಸಿದ್ದಾರೆ.

ವರ್ಧಿತ ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಮತ್ತು ಅಪಘಾತಗಳನ್ನು ತಡೆಯಲು ಭಾರತದಾದ್ಯಂತ ಎಲ್ಲ ಮಾರ್ಗಗಳಲ್ಲಿ ‘ಕವಚ್’ ವ್ಯವಸ್ಥೆಯನ್ನು ಅಳವಡಿಸಬೇಕು ಎಂಬುದು ತಮ್ಮ ಪಕ್ಷದ ಬೇಡಿಕೆಯಾಗಿದೆ ಎಂದು ಖರ್ಗೆ ಪೋಸ್ಟ್‌ನಲ್ಲಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...