ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗಿ

Date:

ಕಾಂಗ್ರೆಸ್‌ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನ ಮಂತ್ರಿ ಕಚೇರಿಯಿಂದ ಆಹ್ವಾನ ಸ್ವೀಕರಿಸಿದ ಒಂದು ದಿನದ  ನಂತರ ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.

- Advertisement -

ಇಂಡಿಯಾ ಒಕ್ಕೂಟದ ನಾಯಕರ ಜೊತೆ ಸಮೋಲೋಚಿಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸಮಾರಂಭ ಸ್ವೀಕಾರ ಸಮಾರಂಭದಲ್ಲಿ ಇಂಡಿಯಾ ಒಕ್ಕೂಟದ ಮಿತ್ರ ಪಕ್ಷವಾಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಪಕ್ಷದ ನಾಯಕರು ಪಾಲ್ಗೊಳ್ಳುವುದಿಲ್ಲ ಎಂದು ಶನಿವಾರ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದುಬಾರಿ ಚುನಾವಣೆಗಳು, ಸಾಮಾನ್ಯರ ಸ್ಪರ್ಧೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ

ಶನಿವಾರದಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ಸೇರಿ ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿ ಸ್ಥಾನ ವಹಿಸಿಕೊಳ್ಳಬೇಕೆಂದು ನಿರ್ಣಯ ಅಂಗೀಕರಿಸಿತು. ಈ ಬಗ್ಗೆ ರಾಹುಲ್‌ ಗಾಂಧಿ ಶೀಘ್ರದಲ್ಲೇ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ. ಪಕ್ಷದ ನಾಯಕಿ ಸೋನಿಯಾ ಗಾಂಧಿ ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷ ಸ್ಥಾನ ಸ್ವೀಕರಿಸುವುದಾಗಿ ಒಪ್ಪಿಕೊಂಡಿದ್ದಾರೆ.

“ಕಾಂಗ್ರೆಸ್ ಕಾರ್ಯಕಾರಿ ಸಮಿತಿ ರಾಹುಲ್‌ ಗಾಂಧಿ ಅವರು ಲೋಕಸಭೆಯ ವಿಪಕ್ಷ ನಾಯಕನ ಸ್ಥಾನ ಅಲಂಕರಿಸುವಂತೆ ಅವಿರೋಧವಾಗಿ ನಿರ್ಣಯ ಕೈಗೊಂಡಿದೆ. ರಾಹುಲ್‌ ಅವರು ಮಾತ್ರವೇ ಲೋಕಸಭೆಯ ಒಳಗಡೆ ಪಕ್ಷವನ್ನು ಮುನ್ನಡೆಸಲು ಸಮರ್ಥ ನಾಯಕರು” ಎಂದು ಕಾಂಗ್ರೆಸ್ ನಾಯಕ ಕೆ ಸಿ ವೇಣು ಗೋಪಾಲ್‌ ತಿಳಿಸಿದ್ದಾರೆ.

ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಿ ಇಂದು ಸಂಜೆ 7.15 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಂತ್ರಿಮಂಡಳದ ಸದಸ್ಯರಿಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...