ಹಲ್ದ್ವಾನಿ ಶುದ್ಧೀಕರಣ ವಿವಾದ: ಎಫ್ಐಆರ್ ವಿಳಂಬಕ್ಕೆ ಜೆ.ಪಿ. ನಡ್ಡಾಗೆ ಮಲ್ಲಿಕಾರ್ಜುನ ಖರ್ಗೆ ಪತ್ರ

Date:

ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ವಿವಾದಾತ್ಮಕ ‘ಶುದ್ಧೀಕರಣ’ ಧಾರ್ಮಿಕ ವಿಧಿ-ವಿಧಾನಕ್ಕೆ ಸಂಬಂಧಿಸಿದಂತೆ ಭರವಸೆ ನೀಡಿ 24 ದಿನಗಳು ಕಳೆದರೂ ಇದುವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು ರಾಜ್ಯಸಭೆಯ ಸದನ ನಾಯಕ ಜೆ.ಪಿ. ನಡ್ಡಾ ಅವರಿಗೆ ಗುರುವಾರ ಪತ್ರ ಬರೆಯುವ ಮೂಲಕ ಸರ್ಕಾರದ ಮೌನವನ್ನು ಪ್ರಶ್ನಿಸಿದ್ದಾರೆ.

- Advertisement -

​ಆಗಸ್ಟ್ 8ರಂದು ಹಲ್ದ್ವಾನಿಯಲ್ಲಿ ತಾವು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಳಿಕ, ಅದೇ ಸ್ಥಳದಲ್ಲಿ ‘ಶುದ್ಧೀಕರಣ’ ನೆರವೇರಿಸಲಾಗಿತ್ತು. ಈ ಘಟನೆಯನ್ನು ಖಂಡಿಸಿ ಆಗಸ್ಟ್ 13ರಂದು ತಾನು ರಾಜ್ಯಸಭೆಯಲ್ಲಿ ತೀವ್ರ ನೋವಿನಿಂದ ಪ್ರಸ್ತಾಪಿಸಿದ್ದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರದಲ್ಲಿ ನೆನಪಿಸಿದ್ದಾರೆ. ಆ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ್ದ ಜೆ.ಪಿ. ನಡ್ಡಾ, “ಇದು ಅತ್ಯಂತ ದುರದೃಷ್ಟಕರ ಸಂಗತಿ ಮತ್ತು ಈ ಬಗ್ಗೆ ಖಂಡಿತವಾಗಿಯೂ ತನಿಖೆಯಾಗುತ್ತದೆ” ಎಂದು ಭರವಸೆ ನೀಡಿದ್ದನ್ನು ಅವರು ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

​ಆದರೆ, ಘಟನೆ ನಡೆದು 24 ದಿನಗಳು ಕಳೆದರೂ ಕೃತ್ಯ ಎಸಗಿದ ವ್ಯಕ್ತಿಗಳು ಅಥವಾ ಸಂಸ್ಥೆಗಳ ವಿರುದ್ಧ ಇದುವರೆಗೆ ಯಾವುದೇ ಪೊಲೀಸ್ ಪ್ರಕರಣ ದಾಖಲಾಗಿಲ್ಲ ಎಂದು ಖರ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. “ಇದು ಕೇವಲ ನನ್ನೊಬ್ಬನ ವೈಯಕ್ತಿಕ ವಿಚಾರವಲ್ಲ. ಬದಲಾಗಿ, ಪ್ರತಿದಿನ ಇಂತಹ ಕಹಿ ಅನುಭವಗಳನ್ನು ಎದುರಿಸುತ್ತಿರುವ ಕೋಟ್ಯಂತರ ಜನರ ಭಾವನೆಗಳಿಗೆ ಮತ್ತು ಸಮಾಜದ ಒಂದು ವರ್ಗದ ಮೇಲೆ ನೇರ ಪರಿಣಾಮ ಬೀರುವ ಮನಸ್ಥಿತಿಗೆ ಸಂಬಂಧಿಸಿದ್ದಾಗಿದೆ” ಎಂದು ಅವರು ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.

​ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದಲ್ಲೇ ಶುದ್ಧೀಕರಣ ನಡೆಸಿರುವುದು ಭಾರತೀಯ ಸಂವಿಧಾನದ ಆಶಯಗಳು ಮತ್ತು ಮಾನವೀಯ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಖರ್ಗೆ ಕಿಡಿಕಾರಿದ್ದಾರೆ. “ಸಾಮಾನ್ಯವಾಗಿ ಇಂತಹ ಆಚರಣೆಗಳು ನೇರವಾಗಿ ಅಸ್ಪೃಶ್ಯತೆಗೆ ಕನ್ನಡಿ ಹಿಡಿಯುತ್ತವೆ. ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ಮಹಾಡ್ ಸತ್ಯಾಗ್ರಹದ ಸಮಯದಲ್ಲಿ ಇದೇ ರೀತಿಯ ಜಾತಿ ದ್ವೇಷದ ಘಟನೆಯನ್ನು ಎದುರಿಸಬೇಕಾಗಿ ಬಂದಿತ್ತು” ಎಂದು ಅವರು ಐತಿಹಾಸಿಕ ಉದಾಹರಣೆಯನ್ನು ಉಲ್ಲೇಖಿಸಿದ್ದಾರೆ.

​ಹಾಗಾಗಿ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಸೂಚನೆ ನೀಡಿ, ಶುದ್ಧೀಕರಣ ನೆರವೇರಿಸಿದ ವ್ಯಕ್ತಿಗಳು ಹಾಗೂ ಸಂಘಟನೆಗಳ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಾಗುವಂತೆ ಕ್ರಮಕೈಗೊಳ್ಳಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಜೆ.ಪಿ. ನಡ್ಡಾ ಅವರನ್ನು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂದು ಬೆಂಬಲ, ಇಂದು ಪಶ್ಚಾತಾಪ: 2023ರ ಚುನಾವಣಾ ಆಯುಕ್ತರ ಕಾಯ್ದೆಗೆ ಬೆಂಬಲ ನೀಡಿ ತಪ್ಪು ಮಾಡಿದೆ ಎಂದ ಜಗನ್ ಮೋಹನ್ ರೆಡ್ಡಿ

ಆಂಧ್ರಪ್ರದೇಶದ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆ ನಡೆದಿದೆ. ಮಾಜಿ...

ಯಾದಗಿರಿ | ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಯುವಜನರು ಪ್ರಜಾಪ್ರಭುತ್ವದ ಆಶಯಗಳು ಹಾಗೂ ಸಂವಿಧಾನದ ಮೌಲ್ಯಗಳನ್ನು ಅರಿತುಕೊಂಡು ಅವುಗಳನ್ನು ತಮ್ಮ...

ಬೀದರ್‌ | ಅ.20ರಂದು ರೇಕುಳಗಿಯಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಬೀದರ್ ತಾಲ್ಲೂಕಿನ ರೇಕುಳಗಿ ಗ್ರಾಮದ ಧಮ್ಮಾಂಕುರ ಮೌಂಟ್‌ನ ಅನಾಥ ಪಿಂಡಕ ಬುದ್ಧ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ ಸ್ಥಾನ?

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು...