ಪ್ರಧಾನಿ ಮೋದಿ ಸೇವೆಯಲ್ಲಿ ನಿರತರಾಗಿರುವ ಮಮತಾ: ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ

Date:

ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಮೈತ್ರಿಕೂಟದಲ್ಲಿ ಲೋಕಸಭಾ ಚುನಾವಣೆಯ ಕ್ಷೇತ್ರ ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಬಿರುಕು ಮೂಡುವಂತೆ ಕಾಣುತ್ತಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಅದೇ ರಾಜ್ಯದ ಕಾಂಗ್ರೆಸ್ ಅಧ್ಯಕ್ಷರಾದ ಅಧೀರ್ ರಂಜನ್‌ ಚೌಧರಿ ವಾಗ್ದಾಳಿ ನಡೆಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅಧೀರ್ ರಂಜನ್‌ ಚೌಧರಿ, ”ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಯ ಸೇವೆಯಲ್ಲಿ ನಿರತರಾಗಿದ್ದಾರೆ. ನಾವು ಭಿಕ್ಷೆ ಬೇಡುತ್ತಿಲ್ಲ. ಮಮತಾ ಅವರು ನಮಗೆ ಕರುಣೆ ತೋರಿಸುವುದು ಬೇಡ. ನಾವು ನಮ್ಮ ಸ್ವಂತ ಬಲದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತೇವೆ. ಮಮತಾ ಅವರು ಸ್ವತಃ ಮೈತ್ರಿ ಬಯಸುವುದಾಗಿ ಹೇಳುತ್ತಾರೆ. ಆದರೆ ನಿಜವಾಗಿಯು ಒಕ್ಕೂಟದೊಂದಿಗೆ ಮೈತ್ರಿ ಹೊಂದಲು ಬಯಸದೆ ಪ್ರಧಾನಿ ನರೇಂದ್ರ ಮೋದಿಯವರ ಸೇವೆಯಲ್ಲಿ ನಿರತರಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷವು ಲೋಕಸಭೆ ಚುನಾವಣೆಯಲ್ಲಿ ಕೇವಲ ಎರಡು ಸ್ಥಾನ ನೀಡುವುದಾಗಿ ಹೇಳಿದ ನಂತರ ಕಾಂಗ್ರೆಸ್ ನಾಯಕ ಅಧೀರ್‌ ರಂಜನ್‌ ಅವರು ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹರಿಗೆ ಗುಡಿ ಕಟ್ಟುವ ಮುನ್ನ ದರಿದ್ರ ನಾರಾಯಣರತ್ತ ನೋಡುವರೇ ದೊರೆಗಳು?

ಮೂಲಗಳ ಪ್ರಕಾರ ಕ್ಷೇತ್ರ ಹಂಚಿಕೆಯು ಮುಂಬರುವ ಲೋಕಸಭಾ ಹಾಗೂ ವಿಧಾನಸಭೆ ಚುನಾವಣೆಯ ಸ್ಪಷ್ಟ ಸೂತ್ರವನ್ನು ಒಳಗೊಂಡಿರುತ್ತದೆ. ಅಲ್ಲದೆ ಪ್ರಮುಖ ಪಕ್ಷವಾದ ಟಿಎಂಸಿಯೇ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕೆಂದು ಬಯಸಿದೆ.

ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಇಂಡಿಯಾ ಒಕ್ಕೂಟದ ಸಂಚಾಲಕರಾಗುವುದು ತಮ್ಮ ಆಯ್ಕೆ ಎಂದು ಟಿಎಂಸಿ ಮತ್ತೆ ಪುನರುಚ್ಚರಿಸಿದೆ. ಜೆಡಿಯು ಅಧ್ಯಕ್ಷರಾದ ನಿತೀಶ್ ಕುಮಾರ್‌ ಅವರ ಬಗ್ಗೆ ಯಾವುದೇ ವಿರೋಧವಿಲ್ಲ. ಖರ್ಗೆಯವರು ವಿಪಕ್ಷಗಳ ಒಕ್ಕೂಟದ ಸಂಚಾಲಕರಾದರೆ ಚುನಾವಣೆಯಲ್ಲಿ ಉತ್ತಮ ಪರಿಣಾಮ ಬೀರಬಹುದು ಎಂದು ಪಕ್ಷ ನಂಬುತ್ತದೆ ಎಂದು ಟಿಎಂಸಿ ಮೂಲಗಳು ತಿಳಿಸಿವೆ.

ದಲಿತ ಸಮುದಾಯದವರಾಗಿರುವ ಖರ್ಗೆ ಅವರು ಸಂಚಾಲಕ ಸ್ಥಾನದ ಉತ್ತಮ ಆಯ್ಕೆಯಾಗಿದ್ದು ಅವರು ದೇಶದ 58 ಕ್ಷೇತ್ರಗಳ ಮೇಲೆ ಪ್ರಭಾವ ಬೀರುತ್ತಾರೆ ಎಂದು ಟಿಎಂಸಿ ತಿಳಿಸಿದೆ.

ಕಳೆದ ವರ್ಷದ ಡಿಸೆಂಬರ್‌ನಲ್ಲಿ ನಡೆದ ಇಂಡಿಯಾ ಒಕ್ಕೂಟದ ಸಭೆಯಲ್ಲಿ 2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಯ ಕ್ಷೇತ್ರ ಹಂಚಿಕೆಯ ಬಗ್ಗೆ ಮಾತುಕತೆಗಳು ನಡೆದಿದ್ದು, ಶೀಘ್ರದಲ್ಲೇ ಅಂತಿಮಗೊಳ್ಳಲಿದೆ ಎನ್ನಲಾಗಿದೆ.

ಕ್ಷೇತ್ರ ಹಂಚಿಕೆ ಡಿಸೆಂಬರ್‌ 31ರೊಳಗೆ ಅಂತಿಮಗೊಳ್ಳಬೇಕು ಎಂದು ಟಿಎಂಸಿ ಬಯಸಿತ್ತು. ಆದರೆ ಗಡುವು ಮುಗಿದಿದ್ದು, ಇಂಡಿಯಾ ಒಕ್ಕೂಟವು ಕ್ಷೇತ್ರ ಹಂಚಿಕೆಯ ಬಗ್ಗೆ ಇನ್ನೂ ಒಮ್ಮತಕ್ಕೆ ಬರಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...