ಟಿಎಂಸಿ ಬಂಡಾಯ: ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ; ಗುಪ್ತ ಸಭೆ

Date:

ಟಿಎಂಸಿ ನಾಯಕರ ಬಂಡಾಯದ ನಡುವೆ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ನವದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಇತ್ತೀಚೆಗೆ ನಡೆದ ಇಂಡಿಯಾ ಒಕ್ಕೂಟದ ಸಭೆಯ ಬೆನ್ನಲ್ಲೇ ಜೂನ್ 9ರಂದು ಇಬ್ಬರು ಹಿರಿಯ ನಾಯಕಿಯರು ‘ಮುಚ್ಚಿದ ಬಾಗಿಲಿನ ರಹಸ್ಯ ಸಭೆ’ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

- Advertisement -

ಇದಾದ ಕೆಲವೇ ಗಂಟೆಗಳ ನಂತರ ಪಶ್ಚಿಮ ಬಂಗಾಳದ ಅಪರಾಧ ತನಿಖಾ ಇಲಾಖೆ (ಸಿಐಡಿ) ಕೋಲ್ಕತ್ತಾದಲ್ಲಿರುವ ಮಮತಾ ಬ್ಯಾನರ್ಜಿ ಅವರ ಪಕ್ಷದ ಕೇಂದ್ರ ಕಚೇರಿ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಕ್ಯಾಮಕ್ ಸ್ಟ್ರೀಟ್ ಕಚೇರಿಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಇದನ್ನು ಓದಿದ್ದೀರಾ? ತಾಯಿ ಬಗ್ಗೆ ನಿಂದನೆ ನೆನೆದು ಮೋದಿ ಭಾವುಕ: ‘ನೀವೇ ಬಿತ್ತಿದ ಬೀಜವಿದು’ ಎಂದ ಗಾಯಕಿ ನೇಹಾ ಸಿಂಗ್

ಸುಮಾರು ಐದು ವರ್ಷಗಳ ನಂತರ ಇಬ್ಬರು ಹಿರಿಯ ನಾಯಕರು ಸಭೆ ನಡೆಸಿದ್ದು, ಜನಪಥ್ ನಿವಾಸದಲ್ಲಿ ಇಂಡಿಯಾ ಒಕ್ಕೂಟದ ಕುರಿತು ಒಂದು ಗಂಟೆ ಕಾಲ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ. 2021ರಲ್ಲಿ ಪಶ್ಚಿಮ ಬಂಗಾಳದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡ ನಂತರ ಸೋನಿಯಾ ಗಾಂಧಿ ಅವರನ್ನು ಮಮತಾ ಬ್ಯಾನರ್ಜಿ ಭೇಟಿಯಾಗಿದ್ದರು. ಅದಾದ ಬಳಿಕ ಇದೀಗ ಸುಮಾರು ಐದು ವರ್ಷದ ನಂತರ ಭೇಟಿಯಾಗಿದ್ದಾರೆ. ಟಿಎಂಸಿಯ ರಾಜ್ಯಸಭಾ ನಾಯಕಿ ಡೆರೆಕ್ ಒ’ಬ್ರೇನ್ ಬ್ಯಾನರ್ಜಿ ಕೂಡಾ ಈ ಸಭೆಯಲ್ಲಿದ್ದರು.

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣೆಗಳ ಬಳಿಕ ತೃಣಮೂಲ ಕಾಂಗ್ರೆಸ್‌ನಲ್ಲಿ ಭಿನ್ನಮತ ಮತ್ತು ಆಂತರಿಕ ಬಿಕ್ಕಟ್ಟು ಎದುರಾಗಿದೆ. ಕೆಲವು ಸಂಸದರು ಪಕ್ಷದ ವಿರುದ್ಧ ಬಂಡಾಯವೆದ್ದಿರುವ ಹಿನ್ನೆಲೆಯಲ್ಲಿ ಈ ಭೇಟಿ ನಡೆದಿದೆ ಎಂದೂ ಹೇಳಲಾಗುತ್ತಿದೆ. ಟಿಎಂಸಿ ಎದುರಿಸುತ್ತಿರುವ ಈ ಕಠಿಣ ಪರಿಸ್ಥಿತಿಯಲ್ಲಿ ಪಕ್ಷಕ್ಕೆ ಅಗತ್ಯವಿರುವ ಸಂಸದೀಯ ಹಾಗೂ ಕಾನೂನಾತ್ಮಕ ಬೆಂಬಲವನ್ನು ನೀಡುವುದಾಗಿ ಸೋನಿಯಾ ಗಾಂಧಿ ಅವರು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಮಮತಾ ಬ್ಯಾನರ್ಜಿ ಅವರ ಪಕ್ಷವು ಕಾಂಗ್ರೆಸ್‌ನೊಂದಿಗೆ ವಿಲೀನವಾಗಬಹುದು ಎಂಬ ವದಂತಿಗಳು ಹರಡಿದ್ದರೂ, ಈ ಸಭೆಯಲ್ಲಿ ಪಕ್ಷಗಳ ವಿಲೀನದ ಬಗ್ಗೆ ಯಾವುದೇ ಅಧಿಕೃತ ಚರ್ಚೆ ನಡೆದಿಲ್ಲ ಎಂದೂ ಹೇಳಲಾಗುತ್ತಿದೆ.

ಇನ್ನೊಂದೆಡೆ ಶಾಸಕರ ನಕಲಿ ಸಹಿ (ಫೋರ್ಜರಿ) ಹಗರಣದ ತನಿಖೆಗೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಅವರ ಕೋಲ್ಕತ್ತಾದ ಕಾಳಿಘಾಟ್ ನಿವಾಸ ಮತ್ತು ಅವರ ಅಳಿಯ ಅಭಿಷೇಕ್ ಬ್ಯಾನರ್ಜಿ ಅವರ ನಿವಾಸದ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ಶಾಸಕರ ನಕಲಿ ಸಹಿಗಳನ್ನು ಸಂಗ್ರಹಿಸಿ ದುರುಪಯೋಗಪಡಿಸಿಕೊಂಡ ಆರೋಪದ ಅಡಿಯಲ್ಲಿ ಈ ತನಿಖೆ ನಡೆಯುತ್ತಿದೆ. ಸಿಐಡಿ ಅಧಿಕಾರಿಗಳು ಈ ದಾಳಿ ನಡೆಸಿದ ಸಮಯದಲ್ಲಿ ಮಮತಾ ಬ್ಯಾನರ್ಜಿ ಅವರು ದೆಹಲಿಯಲ್ಲಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ ಭರವಸೆಯ ಆಟಗಾರ

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ...

ನಟ ಧನ್ವೀರ್ ಗೌಡ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಣಿ ದೂರು ದಾಖಲು!

ಕನ್ನಡ ಚಿತ್ರರಂಗದ ನಟ ಧನ್ವೀರ್ ಗೌಡ ಮತ್ತು ನಟ ದರ್ಶನ್ ಅವರ...

ಸಿದ್ಧರಾಮಯ್ಯ ‘ಸ್ಟಿಂಗ್’ ಪ್ರಕರಣ: ಎಚ್‌ಡಿಕೆ‌ ದೆಹಲಿ ಕಚೇರಿಯ ಸಿಬ್ಬಂದಿ ರಿತೇಶ್ ಬಂಧನ

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಂಬಂಧಿಸಿದ 'ಸ್ಟಿಂಗ್ ಆಪರೇಷನ್' ಪ್ರಕರಣದಲ್ಲಿ ದೆಹಲಿ...

ಕಲಬುರಗಿ | ರೈತರ ಸಾಲಮನ್ನಾ, ಎಕರೆಗೆ ₹50 ಸಾವಿರ ಪರಿಹಾರಕ್ಕೆ ಆಗ್ರಹ

ಅನಾವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಶೇ.100ರಷ್ಟು ಬೆಳೆ ವಿಮೆ ಪರಿಹಾರ...