ಬೆಂಗಳೂರಿನಲ್ಲಿ ಜುಲೈ 18, 2023ರ ಮಂಗಳವಾರ, ವಿರೋಧ ಪಕ್ಷಗಳ ಸಭೆ ನಡೆಯಲಿದೆ. ಅದಕ್ಕೆ ಪೂರ್ವಭಾವಿಯಾಗಿ, ಜುಲೈ 17ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಪಕ್ಷಗಳಿಗೆ ಔತಣಕೂಟ ಆಯೋಜಿಸಿದ್ದು, ಅದರಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗಿಯಾಗುವುದಿಲ್ಲವೆಂದು ಟಿಎಂಸಿ ತಿಳಿಸಿದೆ.
ಮಮತಾ ಬ್ಯಾನರ್ಜಿ ಅವರು ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಶಸ್ತ್ರಚಿಕಿತ್ಸೆ ನಂತರದ ಪ್ರೋಟೋಕಾಲ್‌ಗಳನ್ನು ಅನುಸರಿಸಬೇಕಾಗಿರುವುದರಿಂದ ಜುಲೈ 17 ರಂದು ಪ್ರತಿಪಕ್ಷಗಳ ಔತಣಕೂಟದಲ್ಲಿ ಭಾಗವಹಿಸುವುದಿಲ್ಲ. ಆದರೆ ಜುಲೈ 18 ರಂದು ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಮೊದಲ ಸಭೆಯಲ್ಲಿ 15 ಪಕ್ಷಗಳು ಭಾಗವಹಿಸಿದ್ದವು. ಬೆಂಗಳೂರಿನ ಸಭೆಗೆ ಆಮ್ ಆದ್ಮಿ ಸೇರಿದಂತೆ 24 ಪಕ್ಷಗಳಿಗೆ ಸಭೆಗೆ ಆಹ್ವಾನ ನೀಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ನ ಮಹಿಳಾ ಸಬಲೀಕರಣ ಯೋಜನೆಗಳು ಗೊಂದಲದ ಗೂಡಾಗಿವೆ; ಬಿಜೆಪಿ ಟೀಕೆ
ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದ ವಿಧಾನಸಭಾ ಚುನಾವಣೆಯ ಗೆಲುವು ಮೋದಿ ಸರ್ಕಾರದ ವಿರುದ್ಧದ ಹೋರಾಟಕ್ಕೆ ಹೊಸ ಆಯಾಮ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಸಭೆಗೆ ಹೆಚ್ಚಿನ ಮಹತ್ವ ಇದೆ.