SIR – ಬೃಹತ್ ಹಗರಣ; ನೈಜ ಮತದಾರರನ್ನು ಕೈಬಿಟ್ಟರೆ ಚು.ಆ. ಕಚೇರಿಗೆ ಘೇರಾವ್: ಸಿಎಂ ಮಮತಾ ಎಚ್ಚರಿಕೆ

Date:

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಅತೀ ದೊಡ್ಡ ಹಗರಣವಾಗಿದೆ. ಎಸ್‌ಐಆರ್‌ನ ಅಂತಿಮ ಮತಪಟ್ಟಿಯಿಂದ ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರರ ಹೆಸರನ್ನು ಕೈಬಿಟ್ಟರೂ ದೆಹಲಿಯಲ್ಲಿರುವ ಚುನಾವಣಾ ಆಯೋಗದ ಪ್ರಧಾನ ಕಚೇರಿಗೆ ಘೋರಾವ್ ಹಾಕಲಾಗುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಾರೆ.

- Advertisement -

ಬಂಗಾಳದ ಬಂಕುರಾ ಜಿಲ್ಲೆಯಲ್ಲಿ ನಡೆದ ಸಮಾವೇಶದಲ್ಲಿ ಅವರು ಮಾತನಾಡಿದರು. “ಎಸ್‌ಐಆರ್‌ ಕೃತಕ ಬುದ್ಧಿಮತ್ತೆ (AI) ಸಹಾಯದಿಂದ ನಡೆಸಲಾಗುತ್ತಿರುವ ಅತೀ ದೊಡ್ಡ ಹಗರಣ. ಎಸ್‌ಐಆರ್‌ ಹೆಸರಿನಲ್ಲಿ ರಾಜ್ಯದ ಜನರನ್ನು ಹಿಂಸಿಸಲಾಗುತ್ತಿದೆ. ಎಸ್‌ಐಆರ್‌ ಪ್ರಕ್ರಿಯೆಯಿಂದಾಗಿ 60 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ದಾಖಲೆ ಪರಿಶೀಲನೆ ವೇಳೆ ವಿಚಾರಣೆಗೆ ವೃದ್ಧರನ್ನು ಕರೆಯಲಾಗುತ್ತಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

“ಅಂತಿಮ ಪಟ್ಟಿಯಿಂದ ಒಬ್ಬ ಕಾನೂನುಬದ್ಧ ಮತದಾರರ ಹೆಸರನ್ನು ಅಳಿಸಿದರೂ ಸಹ, ದೆಹಲಿಯ ಚುನಾವಣಾ ಆಯೋಗದ ಕಚೇರಿಗೆ ಟಿಎಂಸಿ ಘೇರಾವ್ ಹಾಕುತ್ತದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

“ಎಸ್‌ಐಆರ್‌ ಮೂಲಕ ನೀಡಲಾಗುತ್ತಿರುವ ಕಿರುಕುಳವನ್ನು ರಾಜ್ಯದ ಜನರು ಸಹಿಸುವುದಿಲ್ಲ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಜನರು ಬಿಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ರಕ್ಷಣಾ ಕ್ಷೇತ್ರಕ್ಕೂ ‘ಮೋದಿ ಮಿತ್ರ’ನ ಲಗ್ಗೆ: ದೇಶದ ಗಡಿ ಕಾಯುವ ಹೊಣೆ ಇನ್ನು ‘ಅದಾನಿ’ ಪಾಲು!

ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ದಾಳಿಗಳು ನಡೆಯುತ್ತಿವೆ. ಚುನಾವಣೆ ಬಂದಾಗಲೆಲ್ಲಾ ‘ಸೋನಾರ್ ಬಾಂಗ್ಲಾ’ ನಿರ್ಮಿಸುವುದಾಗಿ ಬಿಜೆಪಿ ಭರವಸೆ ನೀಡುತ್ತದೆ. ಆದರೆ, ವಾಸ್ತವದಲ್ಲಿ, ತನ್ನ ಆಳುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಜನರನ್ನು ಬಿಜೆಪಿ ಹಿಂಸಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಬಂಗಾಳದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಂಡಿದೆ. ಡಿಸೆಂಬರ್ 16 ರಂದು ಪ್ರಕಟವಾದ ಕರಡು ಪಟ್ಟಿ ಪ್ರಕಟವಾಗಿದ್ದು, ಒಟ್ಟು 7.6 ಕೋಟಿ ಮತದಾರರಲ್ಲಿ, 58 ಲಕ್ಷಕ್ಕೂ ಹೆಚ್ಚು ಮತದಾರರನ್ನು ಅಳಿಸಲಾಗಿದೆ. ಅಲ್ಲದೆ, ಸುಮಾರು 1.66 ಕೋಟಿ ಮತದಾರರ ‘ಪ್ರಾಮಾಣಿಕತೆ’ಯ ಬಗ್ಗೆ ಚುನಾವಣಾ ಆಯೋಗವು ಅನುಮಾನ ವ್ಯಕ್ತಪಡಿಸಿದೆ. ಅವರನ್ನು ಮತ್ತೆ ತಮ್ಮ ದಾಖಲೆಗಳನ್ನು ಪರಿಶೀಲಿಸಲು ವಿಚಾರಣೆಗೆ ಕರೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ಪರ್ವತದಷ್ಟು ಹಗರಣ, ಸಾಸಿವೆಯಷ್ಟು ದಂಡ: ₹1.48 ಕೋಟಿಗೆ ಅದಾನಿ ಸಮೂಹದ ಅಕ್ರಮಗಳಿಗೆ ಸೆಬಿ ‘ಕ್ಲೀನ್ ಚಿಟ್’

ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ...

ಸಂಭಲ್ ಪ್ರಕರಣ: ಆರೋಪಿ ಮೇಲಿನ NSA ರದ್ದು, ಯೋಗಿ ಸರ್ಕಾರಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ!

2024ರ ಸಂಭಲ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಲ್ಲಾ ಅಫ್ರೋಜ್ ವಿರುದ್ಧ...