ಕೋಲಾರ | 10 ಸಾವಿರಕ್ಕೆ 5 ಬಾಟಲ್‌ ಮದ್ಯ ಕುಡಿಯುವ ಪಂದ್ಯ ಕಟ್ಟಿದ ಯುವಕ ಪ್ರಾಣ ಬಿಟ್ಟ

Date:

ಸ್ನೇಹಿತರೊಂದಿಗೆ 10 ಸಾವಿರ ರೂ.ಗಳಿಗೆ 5 ಬಾಟಲ್‌ ಮದ್ಯ ಕುಡಿಯುವ ಪಂದ್ಯ ಕಟ್ಟಿದ್ದ ಯುವಕನೊಬ್ಬ ಪ್ರಾಣ ಕಳೆದುಕೊಂಡ ಘಟನೆ ಕೋಲಾರದ ಮುಳಬಾಗಿಲಿನಲ್ಲಿ ನಡೆದಿದೆ.

- Advertisement -

21 ವರ್ಷದ ಕಾರ್ತಿಕ್ ಮೃತಪಟ್ಟ ಯುವಕ. ಈತ ಸುಬ್ರಮಣಿ, ವೆಂಕಟ ರೆಡ್ಡಿ ಸೇರಿ ಇನ್ನೂ ಮೂವರೊಂದಿಗೆ ನೀರು ಬೆರಸದೆ 5 ಬಾಟಲ್‌ ಮದ್ಯ ಕುಡಿಯುವ ಪಂದ್ಯ ಕಟ್ಟಿದ್ದ. ವೆಂಕಟ ರೆಡ್ಡಿ ಎಂಬಾತ ನೀನು ನೀರಿಲ್ಲದೆ 5 ಬಾಟಲ್‌ ಮದ್ಯ ಸೇವಿಸಿದರೆ 10 ಸಾವಿರ ರೂ. ನೀಡುವುದಾಗಿ ತಿಳಿಸಿದ್ದ. ಕಾರ್ತಿಕ್‌ 5 ಬಾಟಲ್‌ ಮದ್ಯ ಸೇವಿಸಿದ ನಂತರ ತೀವ್ರ ಅಸ್ವಸ್ಥನಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ನಂತರ ಆತನನ್ನು ಮುಳಬಾಗಲಿನ ಆಸ್ಪತ್ರೆಗೆ ಸೇರಿಸಲಾಗಿದೆ. ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಕಾರ್ತಿಕ್‌ ಮೃತಪಟ್ಟಿದ್ದಾನೆ. ಕಾರ್ತಿಕ್‌ ಒಂದು ವರ್ಷದ ಹಿಂದಷ್ಟೆ ಮದುವೆಯಾಗಿದ್ದ. ಈತನ ಪತ್ನಿ 8 ದಿನಗಳ ಹಿಂದಷ್ಟೆ ಮಗುವಿಗೆ ಜನ್ಮ ನೀಡಿದ್ದರು.

ನಂಗಲಿ ಠಾಣೆ ಪೊಲೀಸರು ವೆಂಕಟ ರೆಡ್ಡಿ, ಸುಬ್ರಮಣಿ ಸೇರಿ 6 ಮಂದಿ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಇಬ್ಬರನ್ನು ಬಂಧಿಸಲಾಗಿದ್ದು, ಉಳಿದವರಿಗಾಗಿ ಶೋಧ ನಡೆಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮರ್ಯಾದೆಗೇಡು ಹತ್ಯೆಗಳು ನಿಲ್ಲಬೇಕಿದ್ದರೆ ಜಾತಿವಿನಾಶ ಆಗಲೇಬೇಕು

ವಿಶ್ವ ಆರೋಗ್ಯ ಸಂಸ್ಥೆ ವರದಿಯ ಪ್ರಕಾರ ಪ್ರತಿ ವರ್ಷ ಜಗತ್ತಿನಾದ್ಯಂತ ಮದ್ಯಪಾನ ಸೇವಿಸಿ 26 ಲಕ್ಷ ಮೃತಪಡುತ್ತಿದ್ದಾರೆ. ಇದು ಶೇಕಡಾವಾರು 4.7 ರಷ್ಟಿದೆ.

ಮದ್ಯಪಾನ ಸೇವಿಸುವುದರಿಂದ ಆರೋಗ್ಯಕ್ಕೆ ಉಪಯುಕ್ತ ಎಂದು ನಾವು ಹೇಳುವುದಿಲ್ಲ. ಇತ್ತೀಚಿನ ಹಲವು ವರದಿಗಳು ಇದನ್ನು ಬಹಿರಂಗಪಡಿಸಿವೆ. ನೀವು ಒಂದು ಹನಿ ಮದ್ಯಪಾನ ಸೇವಿಸಿದರೂ ನಿಮ್ಮ ಆರೋಗ್ಯಕ್ಕೆ ತೊಂದರೆ ಶುರುವಾಗುತ್ತದೆ. ಹೆಚ್ಚು ಕುಡಿದಷ್ಟು ನಿಮ್ಮ ಆರೋಗ್ಯಕ್ಕೆ ತೀವ್ರ ಹಾನಿಯಾಗುತ್ತದೆ ಅತಿಯಾದ ಮದ್ಯಪಾನದಿಂದ ಕ್ಯಾನ್ಸರ್‌ ಸೇರಿದಂತೆ ಹಲವು ರೋಗಗಳಿಗೆ ತುತ್ತಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಯೂರೋಪಿನ ಘಟಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...