ಚೆನ್ನೈ-ಮುಂಬೈ ಇಂಡಿಗೋ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ ಪ್ರಕರಣ; ಆರೋಪಿ ಬಂಧನ

Date:

ಮುಂಬೈಗೆ ತೆರಳುತ್ತಿದ್ದ ಇಂಡಿಗೋ ಏರ್‌ಲೈನ್ಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ತಮಿಳುನಾಡಿನ ತಂಜಾವೂರು ಜಿಲ್ಲೆಯ 27 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

- Advertisement -

ಆರೋಪಿಯನ್ನು ತಿರುವೈಯಾರು ಮೂಲದ ವಿ ಪ್ರಸನ್ನ ಎಂದು ಗುರುತಿಸಲಾಗಿದ್ದು, ಕೇಂದ್ರ ಅಪರಾಧ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯ ತಂಡ ಬಂಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜೂನ್ 18ರಂದು ಚೆನ್ನೈ-ಮುಂಬೈ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಪ್ರಸನ್ನ ಚಾಟ್ ಮೂಲಕ ಏರ್‌ಲೈನ್ಸ್ ಗ್ರಾಹಕ ಸೇವಾ ಕೇಂದ್ರಕ್ಕೆ ಬೆದರಿಕೆ ಹಾಕಿದ್ದರು.

ಇದನ್ನು ಓದಿದ್ದೀರಾ?  ಚೆನ್ನೈ-ಮುಂಬೈ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ಪ್ರಯಾಣಿಕರು ಸುರಕ್ಷಿತ

ಜೂನ್ 18ರಂದು, ಭಾರತದಾದ್ಯಂತ 41 ವಿಮಾನ ನಿಲ್ದಾಣಗಳಿಗೆ ಇಮೇಲ್ ಮೂಲಕ ಇದೇ ರೀತಿಯ ಹುಸಿ ಬಾಂಬ್ ಬೆದರಿಕೆಗಳು ಬಂದಿದ್ದವು. ಇದರಿಂದಾಗಿ ಭದ್ರತೆ ಹೆಚ್ಚಿಸಲಾಗಿತ್ತು, ತಪಾಸಣೆ ಮಾಡಲಾಗಿತ್ತು. ಯಾವುದೇ ಸ್ಪೋಟಕ ಕಂಡು ಬಂದಿರಲಿಲ್ಲ. ಆದರೆ ಈ ಸುಳ್ಳು ಬಾಂಬ್ ಬೆದರಿಕೆಯಿಂದಾಗಿ ಹಾರಾಟದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಬೇಕಾಗಿತ್ತು.

ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ​​​​ಸೆಕ್ಯುರಿಟಿಯು ಸುಳ್ಳು ಬಾಂಬ್ ಬೆದರಿಕೆಗಳನ್ನು ಮಾಡುವ ತಪ್ಪಿತಸ್ಥರಿಗೆ ಐದು ವರ್ಷಗಳ ಕಾಲ ಹಾರಾಟವನ್ನು ನಿಷೇಧ ಮಾಡುತ್ತದೆ.

ಈ ಪ್ರಕರಣದಲ್ಲಿ ಸೈಬರ್ ಕ್ರೈಂ ವಿಭಾಗದಲ್ಲಿ ದೂರು ದಾಖಲಾಗಿದ್ದು, ಪ್ರಸನ್ನನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದ ಇಂಧನದಿಂದ ಭಾರತ ದೂರ ಸರಿಯುವುದು ಅಸಾಧ್ಯ: ಅಮೆರಿಕ

ರಷ್ಯಾದ ತೈಲ ಖರೀದಿಸುವ ರಾಷ್ಟ್ರಗಳ ಮೇಲಿನ ದಿಗ್ಬಂಧನ ಮತ್ತು ಆಮದು ಸುಂಕದ...

ಫುಟ್‌ಪಾತ್ ನಿರ್ಮಿಸದಿದ್ರೆ, ನಾವೇ ಧರಣಿ‌ ಕೂರ್ತೀವಿ; BJP ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ವಾರ್ನಿಂಗ್!

ದೆಹಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಸಮೀಪದ ಮಥುರಾ ರಸ್ತೆಯಲ್ಲಿ ಪಾದಚಾರಿಗಳು...

ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ನೀತಿ ಜಾರಿ: ಆದೇಶ ಪಾಲಿಸದ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಶಾಲೆಗಳಲ್ಲಿ ಓದುವ ಹೆಣ್ಣುಮಕ್ಕಳಿಗೆ ಮೂಲಭೂತ ಋತುಚಕ್ರ ನೈರ್ಮಲ್ಯ ಸೌಲಭ್ಯಗಳು ಮತ್ತು ಉಚಿತ...