ಲಿಂಗತ್ವ ಅಲ್ಪಸಂಖ್ಯಾತ ವೇಷದಲ್ಲಿ ಮನೆಗೆ ನುಗ್ಗಿ ಅತ್ಯಾಚಾರವೆಸಗಿದ ಕಾಮುಕನ ಬಂಧನ

Date:

ವಾಣಿಜ್ಯ ನಗರಿ ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಮನೆಯ ಕೆಟ್ಟ ದೃಷ್ಟಿ ತೆಗೆಯುವುದಾಗಿ ಹಾಗೂ ಪತಿಯ ಕಾಯಿಲೆ ವಾಸಿಮಾಡುವುದಾಗಿ ನಂಬಿಸಿ, ಲಿಂಗತ್ವ ಅಲ್ಪಸಂಖ್ಯಾತನ ವೇಷದಲ್ಲಿ ಮನೆಗೆ ನುಗ್ಗಿದ ವಂಚಕನೊಬ್ಬ ಗಗನಸಖಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.

- Advertisement -

ಘಟನೆಗೆ ಸಂಬಂಧಿಸಿದಂತೆ 28 ವರ್ಷದ ಯುವಕನನ್ನು ಪೋವೈ (Powai) ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅನಿಲ್ ಶೇಷರಾವ್ ಶಿಂಧೆ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಆಗಸ್ಟ್ 18ರಂದು ಈ ಕರಾಳ ಕೃತ್ಯ ನಡೆದಿದೆ. ಆರೋಪಿ ಅನಿಲ್ ಶಿಂಧೆ ಸೀರೆಯುಟ್ಟು, ಅಪ್ಪಟ ಲಿಂಗತ್ವ ಅಲ್ಪಸಂಖ್ಯಾತನ ವೇಷ ಧರಿಸಿ ಸಂತ್ರಸ್ತೆಯ ಮನೆಬಾಗಿಲಿಗೆ ಬಂದಿದ್ದ. ಮಹಿಳೆಯ ಪತಿಗೆ ಅನಾರೋಗ್ಯವಿರುವ ವಿಚಾರವನ್ನು ಮೊದಲೇ ಅರಿತಿದ್ದ ಆತ, ‘ನಿಮ್ಮ ಮನೆಗೆ ಕೆಟ್ಟ ದೃಷ್ಟಿ ಬಿದ್ದಿದೆ. ಪತಿಯ ಕಾಯಿಲೆ ವಾಸಿಯಾಗಬೇಕೆಂದರೆ ದೃಷ್ಟಿ ತೆಗೆಸಬೇಕು’ ಎಂದು ನಂಬಿಸಿದ್ದಾನೆ.

ಆತನ ಮಾತುಗಳನ್ನು ನಂಬಿದ ಗಗನಸಖಿ ಆತನನ್ನು ಮನೆಗೆ ಸೇರಿಸಿದ್ದಾರೆ. ದೃಷ್ಟಿ ತೆಗೆಯುವ ನೆಪದಲ್ಲಿ ಆಕೆಯನ್ನು ಸಮ್ಮೋಹನಗೊಳಿಸಿದಂತೆ (Hypnotise) ನಾಟಕವಾಡಿದ ಆತ, ನೇರವಾಗಿ ಮಲಗುವ ಕೋಣೆಗೆ (ಬೆಡ್‌ರೂಮ್) ತೆರಳಿದ್ದಾನೆ. ಅಲ್ಲಿ ಆಕೆಗೆ ದೈಹಿಕ ಹಲ್ಲೆ ನಡೆಸುವ ಹಾಗೂ ಜೀವ ಬೆದರಿಕೆಯೊಡ್ಡಿ, ಬಲವಂತವಾಗಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಯಿಂದ ತೀವ್ರ ಆಘಾತಕ್ಕೊಳಗಾದ ಸಂತ್ರಸ್ತೆ ತಕ್ಷಣವೇ ಪೋವೈ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಪ್ರಕರಣದ ಗಾಂಭೀರ್ಯತೆಯನ್ನು ಅರಿತ ಪೊಲೀಸರು ತ್ವರಿತಗತಿಯಲ್ಲಿ ಕಾರ್ಯಾಚರಣೆ ಆರಂಭಿಸಿದರು. ಆ ಪ್ರದೇಶದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ, ಆರೋಪಿ ಅನಿಲ್ ಕೃತ್ಯ ಎಸಗಿದ ಬಳಿಕ ಆಟೋರಿಕ್ಷಾ ಹತ್ತಿ ಪರಾರಿಯಾಗುತ್ತಿರುವುದು ಸೆರೆಯಾಗಿತ್ತು.

ಆಟೋದ ಜಾಡು ಹಿಡಿದು ಹೊರಟ ಪೊಲೀಸರಿಗೆ, ಆತ ಥಾಣೆ ಜಿಲ್ಲೆಯ ಖಾರೆಗಾಂವ್ (Kharegaon) ಕೊಳೆಗೇರಿ ಪ್ರದೇಶದಲ್ಲಿ ಅಡಗಿ ಕುಳಿತಿರುವುದು ಖಚಿತವಾಗಿದೆ. ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆತನನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ವಿಚಾರಣೆ ವೇಳೆ ಆರೋಪಿ ಅನಿಲ್ ಶಿಂಧೆಯ ಕರಾಳ ಮುಖವಾಡ ಕಳಚಿದೆ. ಈತ ಕೇವಲ ನಕಲಿ ಲಿಗತ್ವ ಅಲ್ಪಸಂಖ್ಯಾತ ಮಾತ್ರವಲ್ಲ, ಈ ಹಿಂದೆಯೂ ಭಿಕ್ಷುಕನಂತೆ ವೇಷ ಬದಲಿಸಿ ಅಮಾಯಕ ಜನರಿಗೆ ವಂಚಿಸುತ್ತಿದ್ದ ಎಂಬ ಆಘಾತಕಾರಿ ವಿಚಾರ ಪೊಲೀಸ್ ತನಿಖೆಯಿಂದ ಬಯಲಾಗಿದೆ. ಜನರ ನಂಬಿಕೆ ಹಾಗೂ ದೌರ್ಬಲ್ಯಗಳನ್ನೇ ಬಂಡವಾಳವಾಗಿಸಿಕೊಂಡು ಈತ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದನು.

ಈ ಘಟನೆಯ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. “ಮಾಟ-ಮಂತ್ರ, ದೃಷ್ಟಿ ತೆಗೆಯುವವರ ಬಗ್ಗೆ ಸಾರ್ವಜನಿಕರು ಎಚ್ಚರದಿಂದಿರಬೇಕು. ಯಾವುದೇ ಕಾರಣಕ್ಕೂ ಅಪರಿಚಿತ ವ್ಯಕ್ತಿಗಳನ್ನು, ಅವರು ಎಷ್ಟೇ ಪರಿಚಿತರಂತೆ ಅಥವಾ ಯಾವುದೇ ವೇಷದಲ್ಲಿ ಬಂದರೂ ಮನೆಗೆ ಸೇರಿಸಬಾರದು” ಎಂದು ಮನವಿ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

​

​.

​

​

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅ.7ರಂದು ಆಣದೂರ ಆರೋಗ್ಯ ಕೇಂದ್ರದಲ್ಲಿ ಸಾಮೂಹಿಕ ರಕ್ತದಾನ ಶಿಬಿರ

ಬೀದರ್‌ ತಾಲೂಕಿನ ಆಣದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅ.7ರಂದು ಬೆಳಿಗ್ಗೆ...

ಧಾರವಾಡ | ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ...

ಧಾರವಾಡ | ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಒಗ್ಗೂಡಿದ ಪ್ರಗತಿಪರ ಧ್ವನಿಗಳು

ಸಂವಿಧಾನ, ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಮಾಜಿಕ ಸೌಹಾರ್ದತೆಯ ರಕ್ಷಣೆಗಾಗಿ ಧಾರವಾಡದಲ್ಲಿ...

ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಇಬ್ಬರು ಕೇಂದ್ರ ಸಚಿವರಿಗೆ ಕೊಕ್

ಉತ್ತರ ಪ್ರದೇಶದಿಂದ ತೆರವಾಗಲಿರುವ ಎಂಟು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಸೋಮವಾರ (ಅ....