ವ್ಯಕ್ತಿಯೋರ್ವ ಕುದುರೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕುದುರೆ ಸವಾರಿ ಅಕಾಡೆಮಿಯಲ್ಲಿ ನಡೆದಿದೆ. ಸದ್ಯ ಆರೋಪಿ ಚೋಟ್ಯಾ ಸುಂದರ್ ಖೋಬ್ರಗಡೆ(30) ಅನ್ನು ಪೊಲೀಸರು ಬಂಧಿಸಿದ್ದಾರೆ.
ಮೇ 17ರಂದು ಗಿಟ್ಟಿಖಾದನ್ ಪ್ರದೇಶದ ನಾಗ್ಪುರ ಜಿಲ್ಲಾ ಕುದುರೆ ಸವಾರಿ ಅಕಾಡೆಮಿಯಲ್ಲಿ ಈ ಘಟನೆ ನಡೆದಿದೆ ಎಂದು ಶನಿವಾರ ತಿಳಿಸಿದ್ದಾರೆ. ಈ ಬಗ್ಗೆ ಸವಾರಿ ಅಕಾಡೆಮಿಯನ್ನು ನಡೆಸುತ್ತಿರುವವರು ದೂರು ನೀಡಿದ್ದಾರೆ.
ಇದನ್ನು ಓದಿದ್ದೀರಾ? ಮರಕುಂಬಿ ದಲಿತರಿಗೆ ನ್ಯಾಯ; ಕೋರ್ಟ್‌ನಲ್ಲಿ ಕೊಳೆಯುತ್ತಿವೆ ದಲಿತ ಹತ್ಯೆಯ ಸಾವಿರ ಕೇಸ್‌ಗಳು!
ಆರೋಪಿಯು ರಾತ್ರಿ ವೇಳೆ ಆವರಣದೊಳಗೆ ಅತಿಕ್ರಮಣ ಮಾಡುವುದನ್ನು ಗಮನಿಸಿದ ಭದ್ರತಾ ಸಿಬ್ಬಂದಿಯು ಅಕಾಡೆಮಿ ನಿರ್ವಾಹಕರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.
ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದಾಗ ಆರೋಪಿ ಚೋಟ್ಯಾ ಸುಂದರ್ ಕುದುರೆಯೊಂದರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವುದು ಕಂದು ಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಸದ್ಯ ಭಾರತೀಯ ನ್ಯಾಯ ಸಂಹಿತೆ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
