ಬಿಹಾರ | ತನ್ನ 6 ವರ್ಷದ ಮಗನನ್ನು ಎತ್ತಿ ನೆಲಕ್ಕೆ ಎಸೆದು ಕೊಂದ ತಂದೆ: ಪರಾರಿ

Date:

ಹೋಟೆಲ್‌ ಕೋಣೆಯಲ್ಲಿ ತನ್ನ 6 ವರ್ಷದ ಮಗನನ್ನು ಥಳಿಸಿ ಕೊಂದು ತಂದೆ ಪರಾರಿಯಾಗಿರುವ ಘಟನೆ ಬಿಹಾರದ ಪಟನಾದ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

- Advertisement -

ಮಗನನ್ನು ನೆಲದ ಮೇಲೆ ಎತ್ತಿ ಎಸೆದಿದ್ದಾನೆ ಎಂದು ಹೇಳಲಾಗಿದೆ. ಆರೋಪಿ ಪ್ರಭಾಕರ್ ಮಹೋಟೊ ತನ್ನ ಮಗ ಸನ್ನಿ (6)ಯನ್ನು ಕೊಂದು ಪರಾರಿಯಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಇದನ್ನು ಓದಿದ್ದೀರಾ? ಅಸ್ಸಾಂ | ಕರುಳ ಕುಡಿಯನ್ನು 50 ಸಾವಿರ ರೂ.ಗೆ ಮಾರಿದ 22 ವರ್ಷದ ಮಹಿಳೆ: ಆಶಾ ಕಾರ್ಯಕರ್ತರೂ ಭಾಗಿ ಶಂಕೆ

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಉಪ-ವಿಭಾಗೀಯ ಪೊಲೀಸ್ ಅಧಿಕಾರಿ (SDPO)ಸದರ್-1, ಅಭಿನವ್, “ಪಟನಾ ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್‌ ಕೋಣೆಯೊಳಗೆ ಆರು ವರ್ಷದ ಮಗನನ್ನು ತಂದೆ ಥಳಿಸಿದ್ದಾನೆ ಎಂದು ಭಾನುವಾರ ಬೆಳಿಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ. ಪೊಲೀಸರು ಸ್ಥಳಕ್ಕೆ ತಲುಪಿ ಮಗುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ” ಎಂದು ಹೇಳಿದ್ದಾರೆ.

“ಶನಿವಾರ ರಾತ್ರಿ ನನ್ನ ಮತ್ತು ಗಂಡನ ನಡುವೆ ಜಗಳವಾಗಿದೆ. ಈ ವೇಳೆ ಪತಿ ಸಿಟ್ಟಿನಲ್ಲಿ ನಮ್ಮ ಆರು ವರ್ಷದ ಮಗನನ್ನು ಕ್ರೂರವಾಗಿ ಥಳಿಸಿದರು. ಮಗನನ್ನು ಮೇಲಕ್ಕೆ ಎತ್ತಿ ನೆಲದ ಮೇಲೆ ಎಸೆದಿದ್ದಾರೆ” ಎಂದು ಬಾಲಕನ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.

ಇದಾದ ಬಳಿಕ ಪತಿ ಪರಾರಿಯಾಗಿದ್ದು ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಸಲಾಗುತ್ತಿದೆ. ದಂಪತಿ ತಮ್ಮ ಮಗನೊಂದಿಗೆ ಪಟನಾಗೆ ಬಂದಿದ್ದರು. ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್ ಕೋಣೆಯಲ್ಲಿ ತಂಗಿದ್ದರು ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...