ವ್ಯಕ್ತಿಯೊಬ್ಬರ ಮೃತದೇಹವನ್ನು ಆ್ಯಂಬುಲೆನ್ಸ್‌ನಲ್ಲಿ ಕೊಂಡೊಯ್ಯುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿ ಇಬ್ಬರು ಕುಟುಂಬಸ್ಥರು ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ಒಡಿಶಾದ ಭಾದ್ರಕ್ ಜಿಲ್ಲೆಯಲ್ಲಿ ನಡೆದಿದೆ.
26 ವರ್ಷದ ಯುವಕ ತನ್ನ ಸೋದರಳಿಯನೊಂದಿಗೆ ತನ್ನ ತಂದೆಯ ಮೃತದೇಹವನ್ನು ಆ್ಯಂಬುಲೆನ್ಸ್‌ನಲ್ಲಿ ಕೊಂಡೊಯ್ಯುತ್ತಿದ್ದರು. ಆದರೆ ರಾಷ್ಟ್ರೀಯ ಹೆದ್ದಾರಿ 16ರ ಸಮೀಪದಲ್ಲಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ಇದನ್ನು ಓದಿದ್ದೀರಾ? ಬೆಳಗಾವಿ | ಕುಂಭಮೇಳದಲ್ಲಿ ಕಾಲ್ತುಳಿತ; ಮೃತದೇಹ, ಗಾಯಾಳುಗಳನ್ನು ಕರೆತರಲು ಜಿಲ್ಲಾಡಳಿತ ಸಿದ್ಧತೆ
ಮೃತರನ್ನು ಸಂಜಯ್ ಜೆನಾ (26), ಸುದಾಂಶು ಜೆನಾ (42) ಮತ್ತು ಆ್ಯಂಬುಲೆನ್ಸ್ ಚಾಲಕ ದಿಲೀಪ್ ಸಿಂಗ್ (43) ಎಂದು ಗುರುತಿಸಲಾಗಿದೆ. ಸಂಜಯ್ ತಾಯಿ ಸಬಿತ್ರಿ ಜೆನಾ ಅವರಿಗೆ ಗಂಭೀರ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೋಗ್ಯ ಸಮಸ್ಯೆ ಹೊಂದಿದ್ದ ಸಂಜಯ್ ತಂದೆ ದಿವಾಕರ್ ಜೆನಾ ಅವರು ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ದಿವಾಕರ್ ಜೆನಾ ಅವರ ಮೃತದೇಹವನ್ನು ಮನೆಗೆ ಕೊಂಡೊಯ್ಯುತ್ತಿದ್ದ ವೇಳೆ ಆ್ಯಂಬುಲೆನ್ಸ್ ಅಪಘಾತವಾಗಿದೆ ಎಂದು ಹೇಳಲಾಗಿದೆ.
ಪ್ರಸ್ತುತ ದೂರು ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
