‘ಲೈಂಗಿಕ ಬಯಕೆ’ ತಡೆಯಲು, ಸಾಧುವಾಗಲು ಕೊಡಲಿಯಿಂದ ಜನನಾಂಗದ ಒಂದು ಭಾಗ ಕತ್ತರಿಸಿಕೊಂಡ ವ್ಯಕ್ತಿ!

Date:

42 ವರ್ಷದ ವ್ಯಕ್ತಿಯೊಬ್ಬ ತನ್ನ ‘ಲೈಂಗಿಕ ಬಯಕೆ’ ತಡೆಯಲು ಕೊಡಲಿಯಿಂದ ತನ್ನ ಜನನಾಂಗದ ಒಂದು ಭಾಗವನ್ನು ಕತ್ತರಿಸಿಕೊಂಡ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ಮಹಾರಾಜಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಬೆಳಿಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಗಂಭೀರ ಗಾಯಗೊಂಡ ರಮ್ಮಿಲನ್ ಯಾದವ್ ತನ್ನ ಸೋದರಸಂಬಂಧಿಗೆ ಕರೆ ಮಾಡಿ ತಿಳಿಸಿದ್ದಾರೆ. ಕೂಡಲೇ ರಮ್ಮಿಲನ್ ಬಳಿ ಬಂದ ಸಂಬಂಧಿಕ ಮಹಾರಾಜಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಬಳಿಕ ವೈದ್ಯರು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ತಿಳಿಸಿದ್ದಾರೆ ಎಂದು ಸಂಬಂಧಿಕರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ಓದಿದ್ದೀರಾ? ಲಿಂಗ ಗುರುತಿನ ಪ್ರಶ್ನೆ: ತನ್ನ ಜನನಾಂಗವನ್ನೇ ಕತ್ತರಿಸಿಕೊಂಡ ಯುಪಿಎಸ್‌ಸಿ ಅಭ್ಯರ್ಥಿ

ಯಾದವ್ ಈ ಸಂಬಂಧ ಮಾಧ್ಯಮದೊಂದಿಗೆ ಮಾತನಾಡಿರುವ ವಿಡಿಯೋ ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಕಾಮ, ಕ್ರೋಧದ ಭಾವನೆಗಳನ್ನು ತೊಡೆದುಹಾಕಲು ಈ ರೀತಿ ಮಾಡಿದೆ ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.

“ನನ್ನ ಲೈಂಗಿಕ ಬಯಕೆಯನ್ನು ತಡೆಯಬೇಕೆಂದು ನಾನು ಭಾವಿಸಿದೆ. ಆ ಕಾರಣಕ್ಕಾಗಿ ನಾನು ಜನನಾಂಗವನ್ನು ಕೊಡಲಿಯಿಂದ ಕತ್ತರಿಸಿದ್ದೇನೆ. ಪ್ರಾರ್ಥನೆಗೆ ನನ್ನನ್ನು ನಾನು ಅರ್ಪಿಸಿಕೊಳ್ಳುವುದು, ರಾಷ್ಟ್ರಕ್ಕೆ ಸೇವೆ ಸಲ್ಲಿಸುವುದು ಮತ್ತು ದೇಶದ ಕಲ್ಯಾಣಕ್ಕಾಗಿ ಕೆಲಸ ಮಾಡುವುದು ಈಗ ನನ್ನ ಗುರಿ. ನಾನು ಸಾಧು ಆಗುತ್ತೇನೆ” ಎಂದು ಯಾದವ್ ಹೇಳಿದ್ದಾರೆ.

View this post on Instagram

A post shared by Peptech MP (@peptechtimemp)

ಯಾದವ್ ಅವರ ಸೋದರಸಂಬಂಧಿ ಮಾಧ್ಯಮಗಳಿಗೆ ತಿಳಿಸಿರುವಂತೆ ಯಾದವ್‌ಗೆ ಪತ್ನಿ ಒಬ್ಬ ಮಗ ಮತ್ತು ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಈ ಪೈಕಿ ಜೂನ್ 25ರಂದು ಒಬ್ಬಳು ಮಗಳಿಗೆ ವಿವಾಹವಾಗಲಿದೆ. ಯಾದವ್ ಪತ್ನಿ ಬಹಳ ದಿನಗಳಿಂದ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ಕುಟುಂಬ ಆರ್ಥಿಕ ಸಂಕಷ್ಟದಲ್ಲಿದೆ.

ಈ ಬಗ್ಗೆ ಪಿಟಿಐಗೆ ಮಾಹಿತಿ ನೀಡಿರುವ ಜಿಲ್ಲಾ ಆಸ್ಪತ್ರೆಯ ಅಧಿಕಾರಿ ಡಾ. ರಾಜೇಶ್ ಮಿಶ್ರಾ, “ಕೊಡಲಿಯಿಂದ ತನ್ನ ಜನನಾಂಗಕ್ಕೆ ಗಾಯಗೊಳಿಸಿಕೊಂಡ ನಂತರ ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆತರಲಾಗಿದೆ. ರೋಗಿಯು ತನ್ನ ಜನನಾಂಗದ ಭಾಗಶಃ ಕತ್ತರಿಸಿಕೊಂಡಿದ್ದಾರೆ. ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇನ್ನು ಮಹಾರಾಜಪುರ ಪೊಲೀಸ್ ಠಾಣೆ ಗೃಹ ಅಧಿಕಾರಿ (ಎಸ್‌ಎಚ್‌ಒ) ಡಿ.ಕೆ. ಸಿಂಗ್ ಅವರು ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ಬಂದಿಲ್ಲ. ಲಿಖಿತ ದೂರು ಬಂದ ನಂತರ ವಿಚಾರಣೆ ನಡೆಸಿ ಕ್ರಮಕೈಗೊಳ್ಳಲಾಗುವುದು ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...