ಬಂಧಿತ ವ್ಯಕ್ತಿಗೂ ಸೈಫ್ ಅಲಿಖಾನ್ ಪ್ರಕರಣಕ್ಕೂ ಸಂಬಂಧವಿಲ್ಲ: ಪೊಲೀಸರ ಸ್ಪಷ್ಟನೆ

Date:

ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲೆ ದಾಳಿ ಮಾಡಿದ ಪ್ರಕರಣದಲ್ಲಿ ಓರ್ವ ಶಂಕಿತನನ್ನು ಬಂಧಿಸಿದ್ದಾರೆ ಎನ್ನುವ ವಿಚಾರಕ್ಕೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

- Advertisement -

ಶುಕ್ರವಾರ (ಜ.17ರಂದು) ಮುಂಬೈ ನಗರ ಪೊಲೀಸರು ಶಂಕಿತನೊಬ್ಬನನ್ನು ಬಂಧಿಸಿದ್ದರು. ಬಂಧಿಸಿದ ವ್ಯಕ್ತಿಯನ್ನು ಬಾಂದ್ರಾ ಠಾಣೆಗೆ ಕರೆತಂದಿದ್ದರು. ಆರಂಭದಲ್ಲಿ ಈತ ಸೈಫ್ ಅಲಿಖಾನ್ ಮೇಲೆ ದಾಳಿ ಮಾಡಿದ ವ್ಯಕ್ತಿ ಎಂದು ಹೇಳಲಾಗಿತ್ತು. ಆದರೆ ಪೊಲೀಸರು ತೀವ್ರ ವಿಚಾರಣೆ ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ವಿಚಾರಣೆಗಾಗಿ ಬಾಂದ್ರಾ ಪೊಲೀಸ್ ಠಾಣೆಗೆ ಕರೆದೊಯ್ದ ವ್ಯಕ್ತಿಗೂ ಸೈಫ್ ಅಲಿ ಖಾನ್ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ
ಎಂದು ಮುಂಬೈನ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಗುರುವಾರ (ಜ.16ರಂದು) ಮುಂಜಾನೆ 2.30ರ ಸುಮಾರಿಗೆ ದುಷ್ಕರ್ಮಿಯೊಬ್ಬ ಸೈಫ್ ಅಲಿಖಾನ್ ಅವರ ಮುಂಬೈನ ಬಾಂದ್ರಾ ನಿವಾಸಕ್ಕೆ ನುಗ್ಗಿ ಹಿಗ್ಗಾಮುಗ್ಗ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿ ಆಗಿದ್ದ. ಮುಂಬೈಯ ಲೀಲಾವತಿ ಆಸ್ಪತ್ರೆಯಲ್ಲಿ ಗುರುವಾರ ತಜ್ಞ ವೈದ್ಯರಿಂದ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಬಾಲಿವುಡ್ ನಟ ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೂಪಾಯಿ ಮೌಲ್ಯ ಕುಸಿತವೂ, ವಿಶ್ವಗುರುವಿನತ್ತ ಮೋದಿ ಭಾರತವೂ

ಸೈಫ್ ಮನೆಯಲ್ಲಿ ಕೆಲಸ ಮಾಡುವ ಎಲಿಯಾಮಾ ಫಿಲಿಪ್ಸ್ ಎಂಬುವರು ಆರೋಪಿಯನ್ನು ಮೊದಲು ನೋಡಿದ್ದಾರೆ. ಆರೋಪಿಯನ್ನು ನೋಡಿದ ಮಹಿಳೆ ಕಿರುಚಿ ನಟನನ್ನು ಎಚ್ಚರಿಸಿದ್ದಾರೆ. ಈ ವೇಳೆ ಸೈಫ್‌ ಅಲಿ ಖಾನ್‌ ಅಪರಿಚಿತನ ಬಳಿ ಬಂದಾಗ ಆರೋಪಿ ಚಾಕುವಿನಿಂದ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಒಳನುಗ್ಗಿದವನಿಗೆ ಏನು ಬೇಕು ಎಂದು ನಟ ಕೇಳಿದಾಗ ಆತ 1 ಕೋಟಿ ರೂ. ಬೇಕೆಂದು ಬೇಡಿಕೆ ಇಟ್ಟಿದ್ದಾನೆ.

ಇದು ದರೋಡೆಗಾಗಿ ನಡೆದಿರುವ ಕೃತ್ಯವೆಂದು ಪೊಲೀಸರು ಶಂಕಿಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಈ ಸಂಬಂಧ 20 ತಂಡವನ್ನು ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ. ಸೈಫ್ ಮನೆಗೆ ನುಗ್ಗಿದ ಆರೋಪಿಯ ಚಹರೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯದೊಂದಿಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...