ಸಾರ್ವಕಾಲಿಕ ತಾಪಮಾನ ಏರಿಕೆ: ದೆಹಲಿ ಆಸ್ಪತ್ರೆಯಲ್ಲಿ ಓರ್ವ ಸಾವು

Date:

ದೆಹಲಿಯಲ್ಲಿ ದಾಖಲೆ ಮಟ್ಟದಲ್ಲಿ ತಾಪಮಾನ ಏರಿಕೆಯಾಗಿದ್ದು, ಬಿಹಾರದ ದರ್ಭಾಂಗದ 40 ವರ್ಷದ ವ್ಯಕ್ತಿ ನಿನ್ನೆ ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಸೋಮವಾರ ತಡರಾತ್ರಿ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಬುಧವಾರದ ವೇಳೆಗೆ ತಾಪಮಾನ ಏರಿಕೆಯಿಂದಾಗಿ ಮೃತಪಟ್ಟಿದ್ದಾರೆ. “ಆ ವ್ಯಕ್ತಿಯು ಕೂಲರ್ ಅಥವಾ ಫ್ಯಾನ್ ಇಲ್ಲದ ಮನೆಯಲ್ಲಿ ವಾಸಿಸುತ್ತಿದ್ದರು. ತೀವ್ರ ಜ್ವರದಿಂದ ಬಳಲುತ್ತಿದ್ದರು” ಎಂದು ತಿಳಿಸಿದ್ದಾರೆ.

“ದೇಹದ ಉಷ್ಣತೆಯು 107 ಡಿಗ್ರಿ ಸೆಲ್ಸಿಯಸ್ ಮಾರ್ಕ್ ಅನ್ನು ದಾಟಿದೆ. ಸಾಮಾನ್ಯಕ್ಕಿಂತ ಸುಮಾರು 10 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಿದೆ” ಎಂದು ಹೇಳಿದ್ದಾರೆ. ಇನ್ನು ಈ ಬೇಸಿಗೆಯಲ್ಲಿ ದೆಹಲಿಯಲ್ಲಿ ತಾಪಮಾನದಿಂದಾಗಿ ಸಾವನ್ನಪ್ಪಿದ ಮೊದಲ ಪ್ರಕರಣ ಇದಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ?  ದೆಹಲಿಯಲ್ಲಿ 52.3 ಡಿಗ್ರಿ ಸೆಲ್ಸಿಯಸ್ ತಾಪಮಾನ; ಭಾರತದ ಸಾರ್ವಕಾಲಿಕ ದಾಖಲೆ

ಬುಧವಾರ ದೆಹಲಿಯಲ್ಲಿ 52.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ದೇಶದಲ್ಲಿ ದಾಖಲಾದ ಸಾರ್ವಕಾಲಿಕ ದಾಖಲೆ ತಾಪಮಾನವಾಗಿದೆ. ತಾಪಮಾನ ಏರಿಕೆಯಾದಂತೆ ದೆಹಲಿಯಲ್ಲಿ ವಿದ್ಯುತ್ ಬಳಕೆಯೂ ಕೂಡಾ ಏರಿಕೆಯಾಗಿದೆ. ನೀರಿನ ಬಿಕ್ಕಟ್ಟು ಕೂಡಾ ಉಂಟಾಗಿದೆ.

ನಗರದ ಹೊರವಲಯದಲ್ಲಿರುವ ಮುಂಗೇಶ್‌ಪುರ ಹವಾಮಾನ ಕೇಂದ್ರವು 52.9 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದೆ. ಮುಂಗೇಶಪುರ ನಿಲ್ದಾಣದ ರೆಕಾರ್ಡ್ ರೀಡಿಂಗ್ ಸೆನ್ಸಾರ್ ದೋಷ ಅಥವಾ ಸ್ಥಳೀಯ ಅಂಶಗಳಿಂದಾಗಿ ಸಂಭವಿಸಿದೆಯೇ ಎಂದು ಹವಾಮಾನ ಇಲಾಖೆ ಈಗ ತನಿಖೆ ನಡೆಸುತ್ತಿದೆ.

ಇನ್ನು ಕೆಲವು ಪ್ರದೇಶಗಳಲ್ಲಿ ತಾಪಮಾನ ಕುಸಿತ ಕಾಣುತ್ತಿದೆ. ಆದರೆ ಕೆಲವೆಡೆ ತಾಪಮಾನ ಇನ್ನೂ ಸರಾಸರಿ 45-50 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಎಂ ಮಹಪಾತ್ರ ಹೇಳಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18ನೇ ಲೋಕಸಭೆ | ಸಂಸದರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕರ್ನಾಟಕದ ಕೇಂದ್ರ ಸಚಿವರು

ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ರಾಜ್ಯದ ಸಂಸದರಾದ ಹೆಚ್.ಡಿ ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ,...

ರಕ್ತದೊತ್ತಡ, ಸಕ್ಕರೆ ಪ್ರಮಾಣ ಇಳಿಕೆ; ಆದರೆ ಅನಿರ್ದಿಷ್ಟಾವಧಿ ಉಪವಾಸ ಮುಂದುವರಿಸುತ್ತೇನೆ: ಅತಿಶಿ

ರಕ್ತದೊತ್ತಡ, ಸಕ್ಕರೆ ಪ್ರಮಾಣ ಇಳಿಕೆಯಾಗುತ್ತಿದೆ, ಆದರೆ ದೆಹಲಿಯ 28 ಲಕ್ಷ ಜನರಿಗೆ...

ಭರ್ತೃಹರಿ ಮಹತಾಬ್ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ: ವಿಪಕ್ಷಗಳ ವಿರೋಧ

ವಿಪಕ್ಷಗಳ ತೀವ್ರ ವಿರೋಧದ ನಡುವೆ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್‌ ಅವರು...

ತಮಿಳುನಾಡು ಕಳ್ಳಭಟ್ಟಿ ಸಾರಾಯಿ ದುರಂತ ಅಣ್ಣಾಮಲೈ ಪಿತೂರಿ: ಡಿಎಂಕೆ ನಾಯಕ ಆರೋಪ

ತಮಿಳುನಾಡಿನ ಕಲ್ಲಾಕುರಿಚಿಯಲ್ಲಿ ನಡೆದ ಕಳ್ಳಭಟ್ಟಿ ಸಾರಾಯಿ ದುರಂತದಲ್ಲಿ ಸಾವಿಗೆ ಬಿಜೆಪಿಯೇ ಹೊಣೆ,...