‘ಕೊರಿಯರ್ ಡೆಲಿವರಿ ಏಜೆಂಟ್‌’ ಎಂದು ಹೇಳಿ ಮನೆಗೆ ನುಗ್ಗಿ ಯುವತಿ ಮೇಲೆ ಅತ್ಯಾಚಾರ ಎಸಗಿದ ದುರುಳ

Date:

ತಾನು ಕೊರಿಯರ್ ಡೆಲಿವರಿ ಏಜೆಂಟ್ ಎಂದು ಹೇಳಿಕೊಂಡು ಮನೆಯ ಒಳಗೆ ಬಂದ ಅಪರಿಚಿತ ವ್ಯಕ್ತಿಯೋರ್ವ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಪುಣೆಯಲ್ಲಿ ನಡೆದಿದೆ. ಆರೋಪಿಯು ಅತ್ಯಾಚಾರ ಸಂತ್ರಸ್ತೆ 22 ವರ್ಷದ ಐಟಿ ಉದ್ಯೋಗಿಯಾಗಿರುವ ಯುವತಿಯ ಮೊಬೈಲ್‌ನಲ್ಲೇ ತನ್ನ ಅರ್ಧ ಮುಖ ಕಾಣುವಂತೆ ವಿಡಿಯೋ ಮಾಡಿಕೊಂಡಿದ್ದಾನೆ.

- Advertisement -

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಉಪ ಪೊಲೀಸ್ ಆಯುಕ್ತ (ವಲಯ 5) ರಾಜ್‌ಕುಮಾರ್ ಶಿಂದೆ, “ಆರೋಪಿ ಸಂತ್ರಸ್ತೆ ಮೊಬೈಲ್‌ನಲ್ಲೇ ತನ್ನ ಮುಖ ಭಾಗಶಃ ಕಾಣುವಂತೆ, ಸಂತ್ರಸ್ತೆಯ ಬೆನ್ನು ಕಾಣುವಂತೆ ಸೆಲ್ಫಿ ತೆಗೆದಿದ್ದಾನೆ. ಅಪರಾಧದ ಬಗ್ಗೆ ಯಾರಿಗೂ ತಿಳಿಸದಂತೆ ಎಚ್ಚರಿಸಿದ್ದಾನೆ. ಯಾರಿಗಾದರೂ ತಿಳಿಸಿದರೆ ವಿಡಿಯೋ, ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಡುವುದಾಗಿ ಬೆದರಿಸಿದ್ದಾನೆ. ‘ನಾನು ಮತ್ತೆ ಬರುತ್ತೇನೆ’ ಎಂದೂ ವಿಡಿಯೋದಲ್ಲಿ ಹೇಳಿದ್ದಾನೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಇದನ್ನು ಓದಿದ್ದೀರಾ? ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಚಿತ್ರೀಕರಿಸಿ ಹರಿಬಿಟ್ಟ ದುರುಳರು

ಮಹಾರಾಷ್ಟ್ರದ ಪುಣೆ ನಗರದ ಕೊಂಧ್ವಾ ಪ್ರದೇಶದ ಹೌಸಿಂಗ್ ಸೊಸೈಟಿಯಲ್ಲಿ ಬುಧವಾರ ಸಂಜೆ 7.30ರ ಸುಮಾರಿಗೆ ಈ ಘಟನೆ ನಡೆದಿದ್ದು ಸದ್ಯ ಆರೋಪಿಯ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಸಂತ್ರಸ್ತೆಯ ಸಹೋದರ ಮನೆಯಲ್ಲಿ ಇರಲಿಲ್ಲ. ಆಕೆ ಅಪಾರ್ಟ್‌ಮೆಂಟ್‌ನಲ್ಲಿ ಒಬ್ಬಳೇ ಇದ್ದಳು ಎಂದು ಅಧಿಕಾರಿಗಳು ಹೇಳಿದ್ದಾರೆ.

ಆ ವ್ಯಕ್ತಿ ಬ್ಯಾಂಕ್ ಸಂಬಂಧಿತ ದಾಖಲೆಯೊಂದಿಗೆ ಕೊರಿಯರ್ ಡೆಲಿವರಿ ಏಜೆಂಟ್ ಎಂದು ಹೇಳಿಕೊಂಡು ಆಕೆಯ ಮನೆಯೊಳಗೆ ಬಂದಿದ್ದಾನೆ. ದಾಖಲೆ ಸಹಿ ಮಾಡಲು ಪೆನ್ನು ಕೇಳಿದ್ದಾನೆ. ಆಕೆ ಪೆನ್ನು ತರಲು ಒಳ ಹೋದಾಗ ಆತ ಮನೆಯೊಳಗೆ ನುಗ್ಗಿ ಚಿಲಕ ಹಾಕಿದ್ದಾನೆ. ಯುವತಿಗೆ ಪ್ರಜ್ಞೆ ತಪ್ಪಿದ್ದು ಎಚ್ಚರವಾದಾಗ ಏನೂ ನೆನಪಿರಲಿಲ್ಲ. ತನ್ನ ಸಂಬಂಧಿಕರಿಗೆ ಮಾಹಿತಿ ನೀಡಿ, ಪೊಲೀಸರಿಗೆ ತಿಳಿಸಿದ್ದಾಳೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಶಂಕಿತನ ರೇಖಾಚಿತ್ರ ಸಿದ್ಧಪಡಿಸಲು ಪ್ರಯತ್ನಿಸಲಾಗುತ್ತಿದೆ. ಯುವತಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಹಾಗೆಯೇ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ಭುಗಿಲೆದ್ದ ಆಕ್ರೋಶ; ತೀವ್ರಗೊಂಡ ಮೋಶಾ ದಮನ ಕ್ರಮಗಳು

ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌...

ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ...