ಉತ್ತರ ಪ್ರದೇಶದ ಕುಷಿನಗರದಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಶುಲ್ಕ ಪಾವತಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ತನ್ನ ಮೂರು ವರ್ಷದ ಮಗನನ್ನು ಮಾರಾಟ ಮಾಡಿದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬರ್ವಾಪಟ್ಟಿಯ ನಿವಾಸಿ ಹರೀಶ್ ಪಟೇಲ್ ಎಂದು ಗುರುತಿಸಲಾಗಿದೆ.
ಆರೋಪಿ ತನ್ನ ಪತ್ನಿಯನ್ನು ಆರನೇ ಮಗುವಿನ ಹೆರಿಗೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಿಲಿಸಿದ್ದ. ಆದರೆ ಆಸ್ಪತ್ರೆಯ ಶುಲ್ಕವನ್ನು ಭರಿಸಲಾಗದ ಪಟೇಲ್, ತನ್ನ ಮೂರನೇ ಮಗುವನ್ನು ಮತ್ತೊಬ್ಬರಿಗೆ ಮಾರಾಟ ಮಾಡಿದ್ದನು. ಈ ಮಾಹಿತಿ ಪಡೆದ ಪೊಲೀಸರು, ಪ್ರಕರಣದಲ್ಲಿ ಭಾಗಿಯಾದ ಮಗುವನ್ನು ದತ್ತು ಪಡೆದ ಪೋಷಕರು, ಆಸ್ಪತ್ರೆಯ ಸಹಾಯಕಿ, ನಕಲಿ ವೈದ್ಯೆ ತಾರಾ ಕುಶ್ವಾಹಾ ಸೇರಿ ಐವರನ್ನು ಬಂಧಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ| ವಿನೇಶ್ ಫೋಗಟ್ ಪಕ್ಷ ರಾಜಕಾರಣ ಮಾಡಿದರೆ ಆಕೆ ಎತ್ತಿದ ಪ್ರಶ್ನೆಗಳು ಸುಳ್ಳಾಗವು
ಈ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಫಲರಾದ ಪೊಲೀಸ್ ಕಾನ್ಸ್‌ಟೆಬಲ್ ಅವರನ್ನು ಕರ್ತವ್ಯದಿಂದ ಅಮಾನತುಮಾಡಲಾಗಿದೆ. ಮಗುವನ್ನು ಪೋಷಕರಿಗೆ ಹಿಂತಿರುಗಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
