16 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Date:

Advertisements

ಗುರುಗ್ರಾಮದಲ್ಲಿ ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಸೆಷನ್ಸ್ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 40,000 ರೂ. ದಂಡ ವಿಧಿಸಿದೆ.

ಫೆಬ್ರವರಿಯಲ್ಲಿ, ಗುರುಗ್ರಾಮದ ಡಿಎಲ್‌ಎಫ್ ಹಂತ-1 ಪೊಲೀಸ್ ಠಾಣೆಯಲ್ಲಿ 16 ವರ್ಷದ ಬಾಲಕಿಯ ನಾಪತ್ತೆಯ ಬಗ್ಗೆ ದೂರು ದಾಖಲಾಗಿತ್ತು. ತನಿಖೆಯ ವೇಳೆ ಪೊಲೀಸರು ಬಾಲಕಿಯನ್ನು ಪತ್ತೆಹಚ್ಚಿದ್ದಾರೆ.

ಇದನ್ನು ಓದಿದ್ದೀರಾ? ಅತ್ಯಾಚಾರ ಪ್ರಕರಣ | ಅಪರಾಧಿ ಅಬುತಾಹಿರ್‌ಗೆ 20 ವರ್ಷ ಶಿಕ್ಷೆ

Advertisements

ಆಕೆಯ ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ದೃಢಪಟ್ಟಿದೆ. ಬಳಿಕ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಅತ್ಯಾಚಾರ ಆರೋಪದಲ್ಲಿ ಉತ್ತರ ಪ್ರದೇಶದ ಹಾರ್ದೋಯ್ ಜಿಲ್ಲೆಯ ಬಸ್ತಾಪುರ ಗ್ರಾಮದ ನಿವಾಸಿ ಫರ್ಕನ್ ಎಂಬಾತನನ್ನು ಬಂಧಿಸಿದ ನಂತರ, ಪೊಲೀಸ್ ತಂಡವು ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧದ ಎಲ್ಲಾ ಸಾಕ್ಷ್ಯಗಳು ಮತ್ತು ಸಾಕ್ಷಿಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಭಾನುವಾರ ಮಾಹಿತಿ ನೀಡಿದ ಗುರುಗ್ರಾಮ ಪೊಲೀಸ್ ವಕ್ತಾರ ಸಂದೀಪ್ ಕುಮಾರ್, “ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುಗ್ರಾಮ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪಪಟ್ಟಿ ಮತ್ತು ಪೊಲೀಸರು ಸಂಗ್ರಹಿಸಿದ ಸಾಕ್ಷ್ಯಗಳು, ಸಾಕ್ಷಿಗಳ ಆಧಾರದ ಮೇಲೆ ಗುರುಗ್ರಾಮ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಶ್ವನಿ ಕುಮಾರ್ ಮೆಹ್ತಾ ಅವರ ಪೀಠವು ಆರೋಪಿಯನ್ನು ತಪ್ಪಿತಸ್ಥ ಎಂದು ಘೋಷಿಸಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕೇರಳ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಶಿಕ್ಷಕನಿಗೆ 111 ವರ್ಷ ಜೈಲು ಶಿಕ್ಷೆ

ದೇಶದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು

2020 ಹೊರತುಪಡಿಸಿ 2016ರಿಂದ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಅಧಿಕವಾಗಿದೆ. ಅದರಲ್ಲಿಯೂ ಮುಖ್ಯವಾಗಿ ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಗರ್ಭಪಾತ, ಅತ್ಯಾಚಾರ-ಕೊಲೆ – ಇಂತಹ ಅಪರಾಧಗಳು ಹೆಚ್ಚಾಗುತ್ತಿದೆ.
ಎನ್‌ಜಿಒ ಸಿಆರ್‌ವೈ ವರದಿಯ ಪ್ರಕಾರ ದೇಶದಲ್ಲಿ 2016ರಿಂದ 2022ರ ನಡುವೆ ಅಪ್ರಾಪ್ತರ ಮೇಲೆ ಅತ್ಯಾಚಾರ ಪ್ರಕರಣಗಳು ಸುಮಾರು ಶೇಕಡ 96ರಷ್ಟು ಏರಿಕೆಯಾಗಿದೆ. 2021ರಿಂದ 2022ರ ನಡುವೆ ಶೇಕಡ 6.9ರಷ್ಟು ಪ್ರಕರಣಗಳು ಅಧಿಕವಾಗಿದೆ.

ಇವು ವರದಿಯಾದ ಪ್ರಕರಣಗಳಾದರೆ, ಇನ್ನೂ ಅದೆಷ್ಟೋ ಪ್ರಕರಣಗಳು ಮುನ್ನೆಲೆಗೆ ಬಂದಿಲ್ಲ. ಸಂತ್ರಸ್ತೆ/ ಸಂತ್ರಸ್ತ ಅಥವಾ ಆಕೆ/ ಆತನ ಕುಟುಂಬಸ್ಥರು ಮರ್ಯಾದೆಗೆ ಅಂಜಿ ಅತ್ಯಾಚಾರಿಗಳ ವಿರುದ್ದ ದೂರು ದಾಖಲಿಸುವುದೇ ಇಲ್ಲ. ಇನ್ನೊಂದೆಡೆ ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರುವ ಅತ್ಯಾಚಾರಿಗಳಿಗೆ ಭಯಪಟ್ಟು ಸಂತ್ರಸ್ತರು ದೂರು ದಾಖಲಿಸುವುದಿಲ್ಲ, ಅಥವಾ ಸಾಕ್ಷ್ಯವನ್ನೇ, ಸಾಕ್ಷಿಯನ್ನೇ ನಾಶಪಡಿಸಲಾಗುತ್ತದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X