ಡೀಪ್‌ಫೇಕ್ ಬಳಸಿ ಐಪಿಎಸ್ ಅಧಿಕಾರಿ ರೂಪದಲ್ಲಿ ವಂಚನೆ: ದೇಶದ ಮೊದಲ ಪ್ರಕರಣ

Date:

ಮನರಂಜನೆ, ಮಿಮಿಕ್ರಿ ಮುಂತಾದವುಗಳಿಗೆ ಸೀಮಿತವಾಗಿದ್ದ ಡೀಪ್‌ಫೇಕ್ ತಂತ್ರಜ್ಞಾನ ದಿನದಿಂದ ದಿನಕ್ಕೆ ವಂಚನೆ ಜಾಲಕ್ಕೂ ವಿಸ್ತರಿಸಿಕೊಳ್ಳುತ್ತಿದೆ. ಇತ್ತೀಚಿಗೆ ಡೀಪ್‌ಫೇಕ್‌ ತಂತ್ರಜ್ಞಾನ ಬಳಸಿ ಐಪಿಎಸ್‌ ಅಧಿಕಾರಿಯ ರೂಪದಲ್ಲಿ ವೃದ್ಧರೊಬ್ಬರಿಗೆ ವಂಚನೆ ಮಾಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.

- Advertisement -

ಗಾಜಿಯಾಬಾದ್‌ನ ಗೋವಿಂದಪುರಂನ 76 ವರ್ಷದ ನಿವಾಸಿ ಅರವಿಂದ್‌ ಶರ್ಮಾ ಅವರು ಕೆಲದಿನಗಳ ಹಿಂದೆ ತಾವು ಖರೀದಿಸಿದ್ದ ಹೊಸ ಸ್ಮಾರ್ಟ್ ಫೋನ್‌ನಲ್ಲಿ ಫೇಸ್‌ಬುಕ್ ಖಾತೆ ತೆರೆದಿದ್ದರು. ನವೆಂಬರ್ 4 ರಂದು ಫೇಸ್‌ಬುಕ್‌ ಮೂಲಕ ಕರೆ ಮಾಡಿದ್ದ ಸೈಬರ್‌ ವಂಚಕರು ಆರಂಭದಲ್ಲಿ ಸಮಾಧಾನವಾಗಿ ಮಾತನಾಡಿ ನಂತರ ಮಹಿಳೆಯ ನಗ್ನ ದೃಶ್ಯವನ್ನು ತೋರಿಸಿದರು. ಚಿತ್ರ ನೋಡಿದ ಅರವಿಂದ್‌ ಶರ್ಮಾ ತಕ್ಷಣ ಕರೆ ಸ್ಥಗಿತಗೊಳಿಸಿದರು. ವೃದ್ಧರ ಜೊತೆ ಮಾತನಾಡುವಾಗ ಕೆಲವೊಂದು ವೈಯಕ್ತಿಕ ವಿಚಾರಗಳನ್ನು ತಿಳಿದುಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದಾದ ಸ್ವಲ್ಪ ಸಮಯದ ನಂತರ ಅಪರಿಚಿತ ಸಂಖ್ಯೆಯಿಂದ ಅರವಿಂದ್‌ ಶರ್ಮಾ ಅವರು ವಾಟ್ಸಾಪ್‌ ಮೂಲಕ ವಿಡಿಯೋ ಕರೆಯನ್ನು ಸ್ವೀಕರಿಸಿದರು. ವಿಡಿಯೋದಲ್ಲಿದ್ದ ವ್ಯಕ್ತಿಯು ಐಪಿಎಸ್‌ ಅಧಿಕಾರಿಯ ವಸ್ತ್ರ ಧರಿಸಿದ್ದ. ಅರವಿಂದ್‌ ಅವರ ಜೊತೆ ಮಾತನಾಡಿದ ಆ ವ್ಯಕ್ತಿ “ಮಹಿಳೆಗೆ ನೀವು ಕಿರುಕುಳ ನೀಡಿದ್ದು ಆಕೆ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಲಾಗುತ್ತಿದೆ” ಎಂದು ಬೆದರಿಸಿದ್ದಾನೆ. ಇದರ ಜೊತೆಗೆ ವೃದ್ಧರಿಗೆ ವಂಚಕರಿಂದ ಮತ್ತೊಂದು ಕರೆ ಬಂದಿದ್ದು, ಬೆತ್ತಲೆ ಯುವತಿಯ ಜೊತೆ ಮಾತನಾಡಿದ ದೃಶ್ಯಗಳನ್ನು ತೋರಿಸಿ ಹಣ ನೀಡದಿದ್ದರೆ ದೃಶ್ಯಗಳನ್ನು ನಿಮ್ಮ ಕುಟುಂಬಕ್ಕೆ ತಿಳಿಸುವುದಾಗಿ ಬೆದರಿಸಿದ್ದರು.

ಈ ಸುದ್ದಿ ಓದಿದ್ದೀರಾ? ಪಂಚ ರಾಜ್ಯಗಳ ಎಕ್ಸಿಟ್ ಪೋಲ್: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ಗೆ ಅಧಿಕಾರ ಸಾಧ್ಯತೆ

5 ಸಾವಿರದಿಂದ ಆರಂಭಗೊಂಡ ಬೆದರಿಕೆ ವಸೂಲಿಯು 20 ದಿನಗಳ ಅಂತರದಲ್ಲಿ ಹಲವು ಕಂತುಗಳಲ್ಲಿ 74 ಸಾವಿರದವರೆಗೂ ವಸೂಲಿ ಮಾಡಲಾಗಿತ್ತು. ನಿರಂತರ ಬೆದರಿಕೆಯಿಂದ ಮಾನಸಿಕವಾಗಿ ಕುಗ್ಗಿಹೋಗಿದ್ದ ಅರವಿಂದ್‌ ಶರ್ಮಾ ಅವರು ಆತ್ಮಹತ್ಯೆಗೂ ಮುಂದಾಗಿದ್ದರು. ಆಕೆಯ ಪುತ್ರಿಯ ನೆರವಿನಿಂದ ಗಾಜಿಯಾಬಾದ್‌ ಪೊಲೀಸರಿಗೆ ದೂರು ನೀಡಿದ್ದಾರೆ.

ಅನಂತರ ಡೀಪ್‌ಫೇಕ್ ಮೂಲಕ ಸೈಬರ್‌ ವಂಚಕರು ವಂಚನೆ ಎಸಗಿರುವುದು ಬಯಲಾಗಿದೆ. ಕವಿ ನಗರದ ಎಸಿಪಿ ಅಭಿಷೇಕ್ ಶ್ರೀವಾಸ್ತವ ಅವರು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ವಂಚಕರನ್ನು ಪತ್ತೆ ಹಚ್ಚಲು ಸೈಬರ್ ಘಟಕಕ್ಕೆ ಮಾಹತಿ ರವಾನಿಸಿದ್ದಾರೆ. ಅಪರಾಧಿಗಳ ಖಾತೆಗಳ ವಿವರಗಳನ್ನು ಪಡೆಯಲು ಮೆಟಾ, ವಾಟ್ಸಾಪ್, ಫೇಸ್‌ಬುಕ್ ಸಂಸ್ಥೆಗಳಿಗೆ ಪತ್ರ ಬರೆಯುವುದಾಗಿ ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...