ಹೋಳಿ ಬಣ್ಣ ಹಚ್ಚಿಸಿಕೊಳ್ಳಲು ನಿರಾಕರಿಸಿದ ಯುವಕನ ಕೊಲೆ

Date:

ಹೋಳಿ ಹಬ್ಬದಂದು ಬಣ್ಣ ಹಚ್ಚಿಸಿಕೊಳ್ಳಲು ನಿರಾಕರಿಸಿದ ಯುವಕನನ್ನು ಮೂವರು ಕತ್ತು ಹಿಸುಕಿ ಹತ್ಯೆಗೈದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

- Advertisement -

ಬುಧವಾರ ಸಂಜೆ ದೌಸಾ ಜಿಲ್ಲೆಯ ರಾಲ್ವಾಸ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹತ್ಯೆಗೀಡಾದ ಯುವಕನನ್ನು ಹಂಸರಾಜ್‌ ಎಂದು ಗುರುತಿಸಲಾಗಿದೆ. ಹಂಸರಾಜ್ ಸ್ಥಳೀಯ ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ. ಇಲ್ಲಿಗೆ ಬಂದ ಅಶೋಕ್, ಬಬ್ಲು ಮತ್ತು ಕಲುರಾಮ್ ಬಣ್ಣ ಬಳಿಯಲು ಯತ್ನಿಸಿದ್ದರು. ಈ ವೇಳೆ ಯುವಕ ನಿರಾಕರಿಸಿದ್ದಕ್ಕೆ, ಮೂವರು ಆತನಿಗೆ ಬೆಲ್ಟ್‌ನಿಂದ ಹಲ್ಲೆ ನಡೆಸಿದ್ದರು. ಬಳಿಕ ಅದರಲ್ಲಿ ಒಬ್ಬ ಕತ್ತು ಹಿಸುಕಿ ಆತನನ್ನು ಹತ್ಯೆಗೈದಿದ್ದಾನೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಅಗರ್ವಾಲ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ಷೇತ್ರ ಪುನರ್ವಿಂಗಡಣೆ ಎಂಬ ಅನ್ಯಾಯ; ನಾಶವಾಗುವ ಮುನ್ನ ಎಚ್ಚೆತ್ತುಕೊಳ್ಳಿ

ಹತ್ಯೆಯನ್ನು ಖಂಡಿಸಿ ಕುಟುಂಬದ ಸದಸ್ಯರು ಮತ್ತು ಗ್ರಾಮಸ್ಥರು ಹಂಸರಾಜ್ ಅವರ ಶವವನ್ನು ಈ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇರಿಸಿ ಪ್ರತಿಭಟನೆ ನಡೆಸಿದ್ದಾರೆ. ಮೃತನ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ, ಕುಟುಂಬದ ಒಬ್ಬ ಸದಸ್ಯನಿಗೆ ಸರ್ಕಾರಿ ಕೆಲಸ ನೀಡಬೇಕು. ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಆರೋಪಿಗಳನ್ನು ಬಂಧಿಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನಾಕಾರರು ಮೃತದೇಹವನ್ನು ಹೆದ್ದಾರಿಯಿಂದ ತೆಗೆದು, ಪ್ರತಿಭಟನೆ ಕೈಬಿಟ್ಟಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...