ಮರ್ಯಾದೆಗೇಡು ಹತ್ಯೆ | ಸಹೋದರಿಯನ್ನು ಕೊಂದ ಯುವಕ; ತಂದೆಯಿಂದ ಪುತ್ರನ ಸಮರ್ಥನೆ!

Date:

ಉತ್ತರ ಪ್ರದೇಶದಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ ಬೆಳಕಿಗೆ ಬಂದಿದೆ. ಅಂತರ್ ಧರ್ಮೀಯ ಪ್ರೇಮ ಸಂಬಂಧವಿದ್ದ ಕಾರಣಕ್ಕೆ 25 ವರ್ಷದ ಯುವಕನೋರ್ವ ತನ್ನ 21 ವರ್ಷದ ಸಹೋದರಿಯನ್ನು ಹತ್ಯೆ ಮಾಡಿದ್ದಾನೆ. ಕುಟುಂಬಕ್ಕೆ ಅವಮಾನ ಮಾಡಿದ ತನ್ನ ಮಗಳನ್ನು ಕೊಂದಿದ್ದು ಸರಿ ಎಂದು ಮೃತಳ ತಂದೆ ತಮ್ಮ ಮಗನ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ.

- Advertisement -

ಅಸ್ಮೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ಮಟವಾಲಿ ಪಟ್ಟಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಯುವಕ ಜಾನೆ ಆಲಂ ಸ್ವತಃ ತಾನಾಗಿಯೇ ಪೊಲೀಸರಿಗೆ ಶರಣಾಗಿ ತಾನು ತನ್ನ ಸಹೋದರಿ ರೂಪ್ ಜಹಾನ್ ಅನ್ನು ಕೊಂದಿರುವುದಾಗಿ ಹೇಳಿದ್ದಾನೆ. ಬಳಿಕ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ಮರ್ಯಾದೆಗೇಡು ಹತ್ಯೆ: ಯುವತಿಗೆ ವಿದ್ಯುತ್ ಸ್ಪರ್ಶಿಸಿ ಕೊಲೆ; ದುರುಳ ತಂದೆ-ಮಗನ ಬಂಧನ

ತನ್ನ ಮಗ ಜಾನೆ ಆಲಂ ಕೃತ್ಯವನ್ನು ಸಮರ್ಥಿಸಿಕೊಂಡ ಅವರ ತಂದೆ ನೌಷರ್ , “ರೂಪ್ ನಡವಳಿಕೆ ಸರಿ ಇರಲಿಲ್ಲ. ಅವರು ಶಿವಂ ಸೈನಿ (22) ಎಂಬಾತನನ್ನು ಪ್ರೀತಿಸುತ್ತಿದ್ದಳು. ಆತನನ್ನು ಮದುವೆ ಆಗಲು ಬಯಸಿದ್ದಳು. ಇದರಿಂದಾಗಿ ಗ್ರಾಮಸ್ಥರು ನನ್ನನ್ನು ಗೇಲಿ ಮಾಡುತ್ತಿದ್ದರು. ನನ್ನ ಮಗನಿಗೆ ಯಾವುದೇ ಪಶ್ಚಾತ್ತಾಪವಿಲ್ಲ. ನಮ್ಮನ್ನು ಅವಮಾನಿಸಿದ ಆಕೆಯನ್ನು ಕೊಂದಿದ್ದು ಸರಿ” ಎಂದು ಸಮರ್ಥಿಸಿಕೊಂಡಿದ್ದಾರೆ.

“ನಾವು ಮುಸ್ಲಿಮರು, ಮತ್ತು ಅವರು ಸೈನಿ. ನಾವು ಹೇಗೆ ಮದುವೆ ಮಾಡಿಕೊಡುವುದು? ಹುಡುಗ ನಮ್ಮ ಸಮುದಾಯಕ್ಕೆ ಸೇರಿದವನಾಗಿದ್ದರೆ ವಿಷಯ ಬೇರೆಯಾಗಿರುತ್ತಿತ್ತು” ಎಂದೂ ಹೇಳಿಕೊಂಡಿದ್ದಾರೆ.

ಅಂತರ್ಜಾತಿ ಅಥವಾ ಅಂತರ್ಧರ್ಮೀಯ ವಿವಾಹವಾಗಿ ಕುಟುಂಬ ಅಥವಾ ಸಮುದಾಯದ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಹೇಳಿ ಸ್ವಂತ ಕುಟುಂಬದ ಸದಸ್ಯರನ್ನೇ ಕೊಲೆ ಮಾಡುವ ಘಟನೆಗಳು ದೇಶದಲ್ಲಿ ಅಧಿಕವಾಗುತ್ತಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಮತ್ತು ಇತ್ತೀಚಿನ ವರದಿಗಳ ಪ್ರಕಾರ, ಈ ಅಪರಾಧದ ಪ್ರಮಾಣದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಅದರಲ್ಲೂ ಹೆಚ್ಚಾಗಿ ಕುಟುಂಬದ ಮರ್ಯಾದೆ ನೆಪದಲ್ಲಿ ಬಲಿಯಾಗುತ್ತಿರುವುದು ಮಹಿಳೆಯರು.

ದಕ್ಷಿಣ ಭಾರತದಲ್ಲೂ ಇಂತಹ ಪ್ರಕರಣಗಳು ಹೆಚ್ಚುತ್ತಿದ್ದು, ಕರ್ನಾಟಕದ ಧಾರವಾಡ, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಇತ್ತೀಚೆಗೆ (2025-26) ಆಘಾತಕಾರಿ ಘಟನೆಗಳು ವರದಿಯಾಗಿವೆ. ಕರ್ನಾಟಕ ಸರ್ಕಾರವು ಇಂತಹ ಕೃತ್ಯಗಳನ್ನು ತಡೆಯಲು ‘ಮರ್ಯಾದೆಗೇಡು ಹತ್ಯೆ ತಡೆ ಕಾಯ್ದೆ’ ಎಂಬ ಪ್ರತ್ಯೇಕ ಮತ್ತು ಕಟ್ಟುನಿಟ್ಟಾದ ಕಾನೂನು ಜಾರಿಗೆ ತರಲು ಚಿಂತನೆ ನಡೆಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...