ಉತ್ತರ ಪ್ರದೇಶ | 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯ

Date:

14 ವರ್ಷದ ಬಾಲಕಿಯ ಮೇಲೆ ದುರುಳನೋರ್ವ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಫುಗಾನಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

ಬಾಲಕಿ ತನ್ನ ಮಾವನ ಮನೆಯಲ್ಲಿದ್ದಾಗ ಆರೋಪಿ ಆಸಿಫ್ (22) ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅದಾದ ಬಳಿಕ ಈ ಬಗ್ಗೆ ಯಾರಿಗಾದರೂ ತಿಳಿಸಿದಂತೆ ಬೆದರಿಕೆ ಹಾಕಿದ್ದಾನೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ದಲಿತರ ಮೇಲಿನ ದೌರ್ಜನ್ಯ; ಬಿಜೆಪಿ ಸರ್ಕಾರವಿರುವ ಉತ್ತರ ಪ್ರದೇಶ ನಂಬರ್ ಒನ್: ಅಖಿಲೇಶ್ ಯಾದವ್

ಬಾಲಕಿಯ ಕುಟುಂಬಸ್ಥರು ನೀಡಿದ ದೂರಿನ ಆಧಾರದಲ್ಲಿ ಆಸಿಫ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಸಬ್-ಇನ್ಸ್‌ಪೆಕ್ಟರ್ ತೇಜ್‌ವೀರ್ ಸಿಂಗ್ ತಿಳಿಸಿದ್ದಾರೆ.

ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯ

ಎನ್‌ಸಿಆರ್‌ಸಿ ವರದಿಯ ಪ್ರಕಾರ ದೇಶದಲ್ಲೇ ಅಧಿಕ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಉತ್ತರ ಪ್ರದೇಶದಲ್ಲಿ ದಾಖಲಾಗುತ್ತಿದೆ. 2023ರ ದತ್ತಾಂಶದಂತೆ ಉತ್ತರ ಪ್ರದೇಶದಲ್ಲಿ ಒಟ್ಟು 66,381 ಮಹಿಳಾ ವಿರೋಧಿ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಒಟ್ಟು ಅಪರಾಧಗಳಲ್ಲಿ ಶೇ.8ರಷ್ಟು ಅತ್ಯಾಚಾರ ಪ್ರಕರಣಗಳಾಗಿವೆ. ಇನ್ನು ಪೋಕ್ಸೋ ಕಾಯ್ದೆಯಡಿ ಅತಿ ಹೆಚ್ಚು ಪ್ರಕರಣಗಳೂ ಉತ್ತರ ಪ್ರದೇಶದಲ್ಲಿ ದಾಖಲಾಗುತ್ತಿವೆ. ಕೌಟುಂಬಿಕ ದೌರ್ಜನ್ಯ, ಲೈಂಗಿಕ ಕಿರುಕುಳ ಪ್ರಕರಣಗಳು ಉತ್ತರ ಪ್ರದೇಶದಲ್ಲಿ ಹೆಚ್ಚಾಗುತ್ತಲೇ ಇದೆ.

ಇನ್ನು ಎನ್‌ಸಿಆರ್‌ಬಿ ವರದಿ ಪ್ರಕಾರ ದೇಶದಲ್ಲಿಯೂ ಒಟ್ಟಾರೆಯಾಗಿ ಮಹಿಳಾ ದೌರ್ಜನ್ಯ ಪ್ರಕರಣಗಳು ಏರಿಕೆಯಾಗುತ್ತಿದೆ. ದೆಹಲಿಯಂತಹ ಮೆಟ್ರೋ ನಗರಗಳಲ್ಲಿ ಮಹಿಳೆಯರ ವಿರುದ್ದದ ಅಪರಾಧ ದರವು ರಾಷ್ಟ್ರೀಯ ಸರಾಸರಿಗಿಂತ ಅಧಿಕವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...