ಉತ್ತರ ಪ್ರದೇಶ | ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿದ ಕಾಮುಕ

Date:

ಕಾಮುಕನೋರ್ವ ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದಿದೆ. 35 ವರ್ಷದ ಆರೋಪಿ ಶ್ಯಾಮ್ ಪಾಲ್ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಶುಕ್ರವಾರ ರಾತ್ರಿ ಮಗು ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ. ಮಗು ಆಡುತ್ತಿದ್ದ ಸಂದರ್ಭದಲ್ಲಿ ಮಗುವಿನ ಕುಟುಂಬಸ್ಥರು ಮರುದಿನ ನಡೆಯಲಿದ್ದ ಮದುವೆಯ ಸಿದ್ಧತೆಯಲ್ಲಿ ತೊಡಗಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಇದನ್ನು ಓದಿದ್ದೀರಾ? ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಉತ್ತರ ಪ್ರದೇಶದ ಬಿಜೆಪಿ ಶಾಸಕ ದೋಷಿ ಎಂದ ನ್ಯಾಯಾಲಯ

ಮಗುವಿನ ಸಮೀಪ ಯಾರೂ ಇಲ್ಲದ್ದನ್ನು ನೋಡಿದ ಕಾಮುಕ ಮಗುವಿನ ಯಾವುದೋ ನೆಪ ಹೇಳಿ ಆಮಿಷವೊಡ್ಡಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಮಗುವನ್ನು ಹುಡುಕಿದಾಗ ಮಗುವಿನೊಂದಿಗೆ ಆರೋಪಿಯೂ ಪತ್ತೆಯಾಗಿದ್ದಾನೆ. ಆಕೆಯ ಬಟ್ಟೆ ಸಂಪೂರ್ಣವಾಗಿ ರಕ್ತಸಿಕ್ತವಾಗಿದ್ದು ಬಾಲಕಿ ಸ್ಥಿತಿ ಗಂಭೀರವಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೂಡಲೇ ಕುಟುಂಬಸ್ಥರು ಪೊಲೀಸರಿಗೆ ಕರೆ ಮಾಡಿದ್ದು ಮಿಟೌಲಿ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ನಂತರ ಮಗುವನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಪರಿಸ್ಥಿತಿ ಗಂಭೀರವಾಗಿರುವ ಕಾರಣ ಮಗುವನ್ನು ಲಕ್ನೋಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಮಿಟೌಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಯಾದವೇಂದ್ರ ಹೇಳಿದ್ದಾರೆ.

2023ರ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ(NCRB) ವರದಿಯ ಪ್ರಕಾರ, ಮಹಿಳೆಯರ ವಿರುದ್ಧದ ಅಪರಾಧಗಳ ಸಂಖ್ಯೆಯಲ್ಲಿ ಉತ್ತರ ಪ್ರದೇಶವು ದೇಶದಲ್ಲೇ ಅಗ್ರಸ್ಥಾನದಲ್ಲಿದೆ. ಮಕ್ಕಳ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ನಂತರದ ಸ್ಥಾನದಲ್ಲಿ ಉತ್ತರ ಪ್ರದೇಶವಿದೆ. 2023ರ ವರದಿ ಪ್ರಕಾರ 18,852 ಮಕ್ಕಳ ವಿರುದ್ಧ ನಡೆದ ಅಪರಾಧ ಪ್ರಕರಣಗಳು ದಾಖಲಾಗಿವೆ. ಪೋಕ್ಸೋ ಅಡಿಯಲ್ಲಿ 3,728 ಪ್ರಕರಣಗಳು ದಾಖಲಾಗಿದೆ. ಈ ಪೈಕಿ ಶೇ.97ರಷ್ಟು ಕುಟುಂಬಸ್ಥರು, ನೆರೆಮನೆಯವರು, ಕುಟುಂಬದ ಆಪ್ತರಿಂದಲೇ ನಡೆದಿದೆ.

ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...