ಸಿಗರೇಟ್‌ ಸೇದಬೇಡ ಎಂದಿದ್ದಕ್ಕೆ ‘ಪೆಟ್ರೋಲ್ ಬಂಕ್‌’ಗೆ ಬೆಂಕಿ ಹಚ್ಚಿದ ಪುಂಡ ಯುವಕ

Date:

ಪೆಟ್ರೋಲ್‌ ಬಂಕ್‌ನಲ್ಲಿ ಸಿಗರೇಟ್‌ ಸೇದಬಾರದು ಎಂದು ಹೇಳಿದ ಕಾರಣಕ್ಕಾಗಿ ಪುಂಡ ಯುವಕಬೊಬ್ಬ ಪೆಟ್ರೋಲ್‌ಗೆ ಪೈಪ್‌ಗೆ ಬೆಂಕಿ ಹಚ್ಚಿರುವ ಘಟನೆ ಛತ್ತೀಸ್‌ಗಢದ ರಾಯ್ಪುರ ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್‌ ಹೊತ್ತಿ ಉರಿದಿದೆ. ಪೆಟ್ರೋಲ್‌ ಬಂಕ್‌ಗೆ ನಾನಾ ಭಾಗಗಳಿಗೂ ಹಾನಿಯಾಗಿದೆ.

- Advertisement -

ಘಟನೆ ಗುರುವಾರ ಸಂಜೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸರ ಮಾಹಿತಿ ಪ್ರಕಾರ ಧರ್ಮೇಂದ್ರ ಕ್ಷತ್ರಿ ಮತ್ತು ಇಮ್ರಾನ್ ಎಂಬ ಇಬ್ಬರು ಬೈಕ್‌ಗೆ ಇಂಧನ ತುಂಬಿಸಿಕೊಳ್ಳಲು ಪೆಟ್ರೋಲ್‌ ಬಂಕ್‌ಗೆ ಬಂದಿದ್ದರು. ಈ ವೇಳೆ, ಪೆಟ್ರೋಲ್‌ ತುಂಬಿಸುವಾಗ ಧರ್ಮೇಂದ್ರ ಎಂಬಾತ ಸಿಗರೇಟ್‌ ಸೇದಲು ಯತ್ನಿಸಿದ್ದನು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಧರ್ಮೇಂದ್ರನಿಂದ ಪೆಟ್ರೋಲ್ ಬಂಕ್‌ನಲ್ಲಿ ಧೂಮಪಾನ ಮಾಡಬಾರದೆಂದು ಅಲ್ಲಿನ ಸಿಬ್ಬಂದಿ ಹೇಳಿದ್ದಾರೆ. ಕುಪಿತಗೊಂಡ ಧರ್ಮೇಂದ್ರ ಇಂಧನ ತುಂಬುತ್ತಿದ್ದ ಪೈಪ್‌ಗೆ ಬೆಂಕಿ ಹಚ್ಚಿದ್ದಾನೆ. ಪೆಟ್ರೋಲ್‌ ಪಂಪ್ ಸಿಬ್ಬಂದಿ ತಕ್ಷಣವೇ ಎಚ್ಚೆತ್ತುಕೊಂಡು ಬೆಂಕಿಯನ್ನು ನಂದಿಸಿದ್ದಾರೆ. ಆದಾಗ್ಯೂ, ಬೈಕ್ ಹೊತ್ತಿ ಉರಿದಿದೆ.

ಪೆಟ್ರೋಲ್‌ ಪಂಪ್ ಮ್ಯಾನೇಜರ್ ನೀಡಿದ ದೂರಿನ ಆಧಾರದ ಮೇಲೆ ಉರ್ಲಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಇಬ್ಬರು ಕೇಂದ್ರ ಸಚಿವರಿಗೆ ಕೊಕ್

ಉತ್ತರ ಪ್ರದೇಶದಿಂದ ತೆರವಾಗಲಿರುವ ಎಂಟು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಸೋಮವಾರ (ಅ....

ಆರೋಪಿಯ IQ ಕಡಿಮೆ ಇದ್ದ ಮಾತ್ರಕ್ಕೆ ವಿಚಾರಣೆಯಿಂದ ಹೊರಗಿಡಲು ಸಾಧ್ಯವಿಲ್ಲ: ಕೇರಳ ಹೈಕೋರ್ಟ್

ಕಡಿಮೆ ಬುದ್ಧಿಮತ್ತೆ (IQ) ಅಥವಾ ಬೌದ್ಧಿಕ ಅಸಮರ್ಥತೆ ಇದೆ ಎಂಬ ಕಾರಣವೊಂದರಿಂದಲೇ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; NSUIನಿಂದ ವಿನೂತನ ‘ಜೀವಂತ ಶವ’ ಪ್ರತಿಭಟನೆ

ಮತದಾರರ ಹಕ್ಕುಗಳು ಮತ್ತು ಚುನಾವಣಾ ಪ್ರಕ್ರಿಯೆಯ ಮೇಲಿನ ಬೆದರಿಕೆಗಳನ್ನು ಖಂಡಿಸಿ, ಮುಖ್ಯ...

ಗ್ರೇಟ್ ನಿಕೋಬಾರ್ ಯೋಜನೆ: ಕಲ್ಕತ್ತಾ ಹೈಕೋರ್ಟ್ ವಿಚಾರಣೆಗೆ ತಡೆ ನೀಡಲು ಸುಪ್ರೀಂ ನಕಾರ

"ಸಂಸ್ಕೃತಿಯ ರಕ್ಷಣೆಯು ಸಂವಿಧಾನದಿಂದ ರಕ್ಷಿಸಲ್ಪಟ್ಟ ಮೂಲಭೂತ ಹಕ್ಕಾಗಿದೆ" ಎಂದು ಸುಪ್ರೀಂ ಕೋರ್ಟ್...