ಸಿಗರೇಟ್ ತಂದುಕೊಡಲು ನಿರಾಕರಿಸಿದ್ದಕ್ಕೆ ಬಾಲಕನ ಹಣೆಗೆ ಗುಂಡು ಹಾರಿಸಿದ ದುರುಳ

Date:

ಅಂಗಡಿಯಿಂದ ಸಿಗರೇಟ್ ತಂದುಕೊಡಲು ನಿರಾಕರಿಸಿದ್ದಕ್ಕೆ 8 ವರ್ಷದ ಬಾಲಕನ ಹಣೆಗೆ ದುಷ್ಟನೊಬ್ಬ ಗುಂಡು ಹಾರಿಸಿರುವ ಘಟನೆ ಬಿಹಾರದ ಮುಂಗೇರ್‌ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಮುಂಗೇರ್ ಜಿಲ್ಲೆಯ ಗೋವಿಂದಪುರ ಗ್ರಾಮದ ಬಾಲಕ ವಿಪರೀತ ಚಳಿಯಿದ್ದ ಕಾರಣ ತನ್ನ ಮನೆಗೆ ಹೊರಗೆ ಬೆಂಕಿ ಹಚ್ಚಿ, ಬೆಂಕಿ ಕಾಯುತ್ತಾ ಕುಳಿತಿದ್ದ. ಈ ವೇಳೆ, ಅಲ್ಲಿಗೆ ಅದೇ ಗ್ರಾಮದ ನಿತೀಶ್‌ ಕುಮಾರ್‌ ಎಂಬಾತ ಬಂದಿದ್ದಾನೆ. ಅಂಗಡಿಯಿಂದ ಸಿಗರೇಟ್ ತಂದುಕೊಡುವಂತೆ ಬಾಲಕನನ್ನು ಕೇಳಿದ್ದಾನೆ. ಆದರೆ, ವಿಪರೀತ ಚಳಿ ಇದೆ, ಅಂಗಡಿಗೆ ಹೋಗುವುದಿಲ್ಲ ಎಂದು ಬಾಲಕ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ತನ್ನ ಮಾತನ್ನು ಬಾಲಕ ನಿರಾಕರಿಸಿದ್ದಕ್ಕೆ ಕುಪಿತಕೊಂಡ ದುಷ್ಕರ್ಮಿ ನಿತೀಶ್‌ ಕುಮಾರ್, ಪಿಸ್ತೂಲ್‌ನಿಂದ ಬಾಲಕನ ಹಣೆಗೆ ಗುಂಡು ಹಾರಿಸಿದ್ದಾನೆ. ಗುಂಡಿನ ಸದ್ದು ಕೇಳಿ ಬಾಲಕನ ಕುಟುಂಬಸ್ಥರು ಮತ್ತು ನರೆಹೊರೆಯವರು ಸ್ಥಳಕ್ಕೆ ಧಾವಿಸಿದ್ದಾರೆ.

ಕೂಡಲೇ ಬಾಲಕನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಬಾಲಕನ ಸ್ಥಿತಿ ಗಂಭೀರವಾಗಿದ್ದರಿಂದ ಐಸಿಯು ಚಿಕಿತ್ಸೆ ಲಭ್ಯವಿರುವ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದಾರೆ. ಮುಂಗೇರ್‌ನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಬಾಲಕನ ಪರಿಸ್ಥಿತಿ ಬಗ್ಗೆ ಆಸ್ಪತ್ರೆಯ ವೈದ್ಯರು ಪ್ರತಿಕ್ರಿಯಿಸಿದ್ದು, “ಬಾಲಕನ ಹಣೆಯಲ್ಲಿ ಮೂಗಿನ ಬಳಿ ಗುಂಡು ಸಕ್ಕಿಕೊಂಡಿತ್ತು. ಗುಂಡನ್ನು ತೆಗೆಯಲಾಗಿದೆ. ಬಾಲಕನ ಪರಿಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆ ನೀಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಆರೋಪಿ ನಿತೀಶ್ ಕುಮಾರ್ ಪರಾರಿಯಾಗಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆತನನ್ನು ಬಂಧಿಸಲು ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆತ ಮತ್ತೊಂದು ಪ್ರಕರಣದಲ್ಲಿಯೂ ಆರೋಪಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆ ಸಂಬಂಧ ರಾಜ್ಯ ಬಿಜೆಪಿ-ಜೆಡಿಯು ಸರ್ಕಾರದ ವಿರುದ್ಧ ಆರ್‌ಜೆಡಿ ನಾಯಕ ಜಯಪ್ರಕಾಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ. “ಇದು ಬಿಹಾರದ ಅರಾಜಕತೆಗೆ ಉದಾಹರಣೆಯಾಗಿದೆ. ಹೆಚ್ಚುತ್ತಿರುವ ಅಪರಾಧಗಳು ಆಡಳಿತದ ವೈಫಲ್ಯವನ್ನು ಪ್ರತಿಬಿಂಬಿಸುತ್ತವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...