ಹೃದಯವಿದ್ರಾವಕ ಘಟನೆ | ಲೈಂಗಿಕ ದೌರ್ಜನ್ಯ ತಡೆಯಲು ಹೋದ ಯುವಕನನ್ನು ಹೊಡೆದು ಕೊಂದ ಕಾಮುಕರು

Date:

ಕಾಮುಕರ ಗುಂಪೊಂದು ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸುತ್ತಿದ್ದಾಗ, ಯುವತಿಯ ರಕ್ಷಣೆಗೆ ಬಂದ ಯುವಕನನ್ನು ಕಾಮುಕರ ಗುಂಪು ಹೊಡೆದು ಕೊಂದಿರುವ ಹೃದಯವಿದ್ರಾವಕ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿದೆ.

- Advertisement -

ಕೋಲ್ಕತ್ತಾದ ನ್ಯೂ ಟೌನ್‌ನ ನಿರ್ಜನ ಪ್ರದೇಶದಲ್ಲಿ ಮೂವರು ಕಾಮುಕರು ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಈ ವೇಳೆ, ಸ್ಥಳಕ್ಕೆ ಬಂದ ಯುವಕ ಕಾಮುಕರನ್ನು ತಡೆದಿದ್ದಾನೆ. ಕಾಮುಕರು ಮತ್ತು ಯುವಕನ ನಡುವೆ ಗಲಾಟೆಯಾಗಿದ್ದು, ಯುವಕನನ್ನು ಕಾಮುಕರು ಅಮಾನುಷವಾಗಿ ಹೊಡೆದು ಕೊಂದಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಘಟನೆಯಲ್ಲಿ ಸಂಕೇತ್‌ ಚಟರ್ಜಿ ಎಂಬ ಯುವಕ ಸಾವನ್ನಪ್ಪಿದ್ದಾನೆ. ಆತನ ತಲೆಗೆ ಕಟ್ಟಿಗೆಯಿಂದ ಕಾಮುಕರು ಹಲವು ಬಾರಿ ಹೊಡೆದಿದ್ದಾರೆ. ತೀವ್ರ ರಕ್ತಸ್ರಾವವಾಗಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಯವಕನನ್ನುಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.

ಈ ವರದಿ ಓದಿದ್ದೀರಾ?: ‘ಸಂಸತ್ತು ಸರ್ವೋಚ್ಚ’ ಎಂದಿದ್ದಾರೆ ಧನಕರ್; ನಿಜಕ್ಕೂ ಯಾವುದು ಶ್ರೇಷ್ಠ ಮತ್ತು ಸರ್ವೋಚ್ಚ?

ಸಂತ್ರಸ್ತ ಯುವತಿ ಮತ್ತು ಮೃತ ಯುವಕ ಸ್ನೇಹಿತರಾಗಿದ್ದು, ಇಬ್ಬರ ನಡುವೆ ಸಣ್ಣ ಜಗಳ ನಡೆದಿತ್ತು. ಜಗಳದಿಂದ ಬೇಸರಗೊಂಡ ಯುವತಿ ಮನೆಯಿಂದ ರಾತ್ರಿ ವೇಳೆ ಹೊರಬಂದಿದ್ದಾರೆ. ರಸ್ತೆಯಲ್ಲಿ ವಾಕ್‌ ಮಾಡುವಾಗ ಮೂವರು ಕಾಮುಕರು ಆಕೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾರೆ. ಯುವತಿಯನ್ನು ಹುಡುಕಿಕೊಂಡು ಬಂದ ಸಂಕೇತ್‌, ಯುವತಿಯನ್ನು ರಕ್ಷಿಸಿದ್ದಾರೆ. ಈ ವೇಳೆ, ಆತನ ಮೇಲೆ ಕಾಮುಕರು ಭೀಕರವಾಗಿ ಹಲ್ಲೆ ನಡೆಸಿದ್ದಾರೆ.

ಘಟನೆ ಬಳಿಕ ಮೂವರು ಆರೋಪಿಗಳು ಪರಾರಿಯಾಗಿದ್ದರು. ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಸಾಗರ್ ದಾಸ್, ರಾಜು ಘೋಷ್ ಹಾಗೂ ಶಂಭು ಮಂಡಲ್ ಎಂದು ಗುರುತಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...