ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವ್ಯಕ್ತಿಯ ಹತ್ಯೆ

Date:

ತೆಲಂಗಾಣ ಮಾಜಿ ಸಿಎಂ ಕೆ ಚಂದ್ರಶೇಖರ್‌ ರಾವ್‌ ವಿರುದ್ಧ ಕಾಲೇಶ್ವರಂ ಯೋಜನೆಯ ಮೇಡಿಗಡ್ಡ ಬ್ಯಾರೇಜ್‌ನ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ ಮಾಡಿ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದ ವ್ಯಕ್ತಿಯೊಬ್ಬರು ಹೈದರಾಬಾದ್‌ನ ಜಯಶಂಕರ್‌ ಭೂಪಲ್‌ಪಲ್ಲಿ ನಗರದಲ್ಲಿ ಕೊಲೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

50 ವರ್ಷದ ಎನ್‌ ರಾಜಲಿಂಗಮೂರ್ತಿ ಅವರನ್ನು ಇಬ್ಬರು ಅಪರಿಚಿತ ವ್ಯಕ್ತಿಗಳು ಭೂವ್ಯಾಜ್ಯದ ಸಂಬಂಧ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಆದಾಗ್ಯೂ ಈ ಘಟನೆಯ ಬಗ್ಗೆ ರಾಜಕೀಯ ವೈಷಮ್ಯವಿರುವುದನ್ನು ಪೊಲೀಸರು ತಳ್ಳಿಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಬುಧವಾರ ಸಂಜೆ 7.30ರ ವೇಳೆಯಲ್ಲಿ ಹೋಗುತ್ತಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಗಾಯಗೊಂಡ ಇವರನ್ನು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇಡಿಗಡ್ಡ ಬ್ಯಾರೇಜ್‌ನ ನಿರ್ಮಾಣದಲ್ಲಿ ಅಕ್ರಮ ನಡೆದಿದೆ ಎಂಬ ಹಿನ್ನೆಲೆಯಲ್ಲಿ ರಾಜಲಿಂಗಮೂರ್ತಿ ಅವರು 2023ರ ಅಕ್ಟೋಬರ್‌ನಲ್ಲಿ ಖಾಸಗಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಕೆಸಿಆರ್‌ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸಿಸುವಂತೆ ಕೋರ್ಟ್‌ ಆದೇಶಿಸಿತ್ತು.

ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಪ್ರಕರಣವನ್ನು ರದ್ದುಗೊಳಿಸದ ಹಿನ್ನೆಲೆಯಲ್ಲಿ ಕೆಸಿಆರ್‌ ಹಾಗೂ ಪ್ರಕರಣದಲ್ಲಿ ಭಾಗಿಯಾಗಿರುವ ಇತರರು ತೆಲಂಗಾಣ ಹೈಕೋರ್ಟ್‌ ಮೊರೆ ಹೋಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...