ಲಾರೆನ್ಸ್ ಬಿಷ್ಣೋಯ್ ಹೆಸರಲ್ಲಿ ಕ್ಯಾಬ್ ಬುಕ್ ಮಾಡಿ ಸಲ್ಮಾನ್ ಖಾನ್ ನಿವಾಸಕ್ಕೆ ಕಳುಹಿಸಿದ ವ್ಯಕ್ತಿ ಬಂಧನ

Date:

ಜೈಲಿನಲ್ಲಿರುವ ಗ್ಯಾಂಗ್‌ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿ ಇಲ್ಲಿನ ಬಾಂದ್ರಾ ಪ್ರದೇಶದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸಕ್ಕೆ ಕಳುಹಿಸಿದ ಆರೋಪದ ಮೇಲೆ ಗಾಜಿಯಾಬಾದ್ ನಿವಾಸಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

- Advertisement -

ಆರೋಪಿ ರೋಹಿತ್ ತ್ಯಾಗಿಯನ್ನು ಆತನ ಊರಿನಿಂದ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಇದು ತಮಾಷೆ ಮಾಡುವ ಉದ್ದೇಶದಿಂದ ಮಾಡಿರುವುದಾಗಿ ಹೇಳಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಬುಧವಾರ, ಖಾನ್ ಅವರ ನಿವಾಸವಾದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಿಂದ ಬಾಂದ್ರಾ ಪೊಲೀಸ್ ಠಾಣೆಗೆ ಪ್ರಯಾಣಿಸಲು ರೋಹಿತ್ ತ್ಯಾಗಿ ಆನ್‌ಲೈನ್‌ನಲ್ಲಿ ಕ್ಯಾಬ್ ಬುಕ್ ಮಾಡಿದ್ದಾರೆ. ಕ್ಯಾಬ್ ಡ್ರೈವರ್ ವಿಳಾಸವನ್ನು ತಲುಪಿದಾಗ, ಇದು ತಮಾಷೆ ಎಂದು ಅರಿತು ದೂರು ದಾಖಲಿಸಿದ್ದಾರೆ.

ಇದನ್ನು ಓದಿದ್ದಿರಾ?  ಸಲ್ಮಾನ್ ಖಾನ್ ಮನೆಗೆ ಗುಂಡಿನ ದಾಳಿ ಪ್ರಕರಣ: ಇನ್ನೋರ್ವ ಆರೋಪಿ ಬಂಧನ

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಾಂದ್ರಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತ್ಯಾಗಿಯನ್ನು ಪತ್ತೆ ಹಚ್ಚಿದ್ದಾರೆ.

ಕಳೆದ ಭಾನುವಾರ ಖಾನ್ ಅವರ ನಿವಾಸದ ಮೇಲೆ ಮೋಟಾರ್‌ಬೈಕ್‌ನಲ್ಲಿ ಬಂದು ಗುಂಡು ಹಾರಿಸಲಾಗಿದೆ. ಈ ಘಟನೆಯ ಬಳಿಕ ಲಾರೆನ್ಸ್ ಬಿಷ್ಣೋಯ್‌ನ ಸಹೋದರ ಅನ್ಮೋಲ್ ಬಿಷ್ಣೋಯ್ ಆನ್‌ಲೈನ್ ಪೋಸ್ಟ್‌ನಲ್ಲಿ ಈ ದಾಳಿಯ ಹೊಣೆ ಹೊತ್ತಿದ್ದಾರೆ. ಹಾಗೆಯೇ ಬಾಲಿವುಡ್ ನಟನಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.

ಇದನ್ನು ಓದಿದ್ದೀರಾ?ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ: ಇಬ್ಬರ ಬಂಧನ

ಇನ್ನು ಪೊಲೀಸ್ ಮೂಲಗಳ ಪ್ರಕಾರ ಸಲ್ಮಾನ್ ಖಾನ್‌ ನಿವಾಸಕ್ಕೆ ಗುಂಡು ಹಾರಿಸಿದ ಇಬ್ಬರೂ ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಭಾಗವಾಗಿದ್ದಾರೆ. ಗಾಯಕ ಸಿಧು ಮೂಸ್ ವಾಲಾ ಮತ್ತು ರಜಪೂತ ನಾಯಕ ಮತ್ತು ಕರ್ಣಿ ಸೇನೆಯ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ ಸೇರಿದಂತೆ ಹಲವಾರು ಪ್ರಮುಖ ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಿಷ್ಣೋಯ್ ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾನೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೊಹ್ರಾಬುದ್ದೀನ್ ಪ್ರಕರಣ: ಅಮಿತ್ ಶಾ ಬಿಡುಗಡೆ ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ನಕಾರ

ತೀವ್ರ ಕುತೂಹಲ ಕೆರಳಿಸಿರುವ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಪ್ರಚೋದನಕಾರಿ ಭಾಷಣದಿಂದ ಹಲ್ಲೆಯವರೆಗೆ: ಪರ್ವೇಶ್ ವರ್ಮಾ ಎಂಬ ಪರಮ ದುರಹಂಕಾರಿಯ ಕತೆ

ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜನರಿಗೆ ಉತ್ತರದಾಯಿಗಳಾಗಿರಬೇಕು. ಆದರೆ, ದೆಹಲಿಯ ಲೋಕೋಪಯೋಗಿ ಸಚಿವ ಪರ್ವೇಶ್...

ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಪ್ರಾಧಿಕಾರಗಳ ನಿರ್ಲಕ್ಷ್ಯ: ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (NCR) ಅಪ್ರಾಪ್ತರು ಹಾಗೂ ಮಹಿಳೆಯರ...