ಶರದ್‌ ಪವಾರ್‌ಗೆ ದಾಬೋಲ್ಕರ್‌ ರೀತಿ ಕೊಲ್ಲುವ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ

Date:

  • ಫೇಸ್‌ಬುಕ್‌ ಪೋಸ್ಟ್‌ನಲ್ಲಿ ಶರದ್‌ ಪವಾರ್‌ ಅವರಿಗೆ ಜೀವ ಬೆದರಿಕೆ ಎಂದಿದ್ದ ಎನ್‌ಸಿಪಿ
  • ಖಾಸಗಿ ಸಂಸ್ಥೆಯಲ್ಲಿ ಡೇಟಾ ಫೀಡಿಂಗ್, ಅನಾಲಿಟಿಕ್ಸ್ ಕೆಲಸ ಮಾಡುತ್ತಿದ್ದ ಆರೋಪಿ

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪದಲ್ಲಿ ಪುಣೆಯ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಸೋಮವಾರ (ಜೂನ್‌ 12) ಬಂಧಿಸಿದ್ದಾರೆ.

- Advertisement -

ಖಾಸಗಿ ಸಂಸ್ಥೆಯೊಂದರಲ್ಲಿ ‘ಡೇಟಾ ಫೀಡಿಂಗ್ ಮತ್ತು ಅನಾಲಿಟಿಕ್ಸ್’ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಸಾಗರ್ ಬರ್ವೆ ಎಂಬ ವ್ಯಕ್ತಿ ಬಂಧಿತ ಆರೋಪಿ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಪ್ರಕರಣದ ತನಿಖೆ ನಡೆಸುತ್ತಿದ್ದ ಮುಂಬೈ ಅಪರಾಧ ವಿಭಾಗದ ಪೊಲೀಸರು ಬರ್ವೆಯನ್ನು ಶರದ್‌ ಪವಾರ್‌ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಮುಂಬೈಗೆ ಕರೆತಂದಿದ್ದಾರೆ. ನಂತರ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಮಂಗಳವಾರದವರೆಗೆ ಆರೋಪಿಯನ್ನು ಪೊಲೀಸ್ ಬಂಧನಕ್ಕೆ ನೀಡಲಾಗಿದೆ” ಎಂದು ಅಧಿಕಾರಿ ತಿಳಿಸಿದರು.

ಆರೋಪಿ ಸಾಗರ್‌ ಬರ್ವೆ ಫೇಸ್‌ಬುಕ್‌ ಪೋಸ್ಟ್‌ವೊಂದರಲ್ಲಿ ಪವಾರ್‌ ಅವರಿಗೆ ಜೀವ ಬೆದರಿಕೆ ಹಾಕಿದ್ದ.

“ನಿಮಗೂ (ಶರದ್‌ ಪವಾರ್) 2013ರ ಆಗಸ್ಟ್ 20ರಂದು ಪುಣೆಯಲ್ಲಿ ಅಪರಿಚಿತರ ಗುಂಡಿಗೆ ಬಲಿಯಾಗಿದ್ದ ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರಿಗಾದ ಗತಿಯೇ ಬರಲಿದೆ” ಎಂದು ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆಯ ಸಂದೇಶ ಬಂದಿರುವ ಬಗ್ಗೆ ಎನ್ಸಿಪಿ ಜೂನ್ 9 ರಂದು ಹೇಳಿತ್ತು.

ಆರೋಪಿ ಬರ್ವೆ ಫೇಸ್‌ಬುಕ್‌ನಲ್ಲಿ ಎರಡು ನಕಲಿ ಖಾತೆಗಳನ್ನು ತೆರೆದು ಪವಾರ್‌ ಅವರಿಗೆ ಜೀವ ಬೆದರಿಕೆಯ ಪೋಸ್ಟ್‌ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜಸ್ಥಾನ | ಬೃಹತ್‌ ಸಮಾವೇಶ ನಡೆಸಿದ ಸಚಿನ್‌ ಪೈಲಟ್‌; ಹೊಸ ಪಕ್ಷ ಸ್ಥಾಪನೆಯ ಕುತೂಹಲಕ್ಕೆ ತೆರೆ

ಶರದ್‌ ಪವಾರ್ ಅವರಿಗೆ ಬೆದರಿಕೆ ಕರೆ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರು ಪವಾರ್‌ ಅವರಿಗೆ ಭದ್ರತೆಯನ್ನು ಬಿಗಿಗೊಳಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಪವಾರ್‌ ಅವರ ಸುರಕ್ಷತೆಗೆ ಸರ್ಕಾರ ಅಗತ್ಯ ರೀತಿಯ ಎಲ್ಲ ಕ್ರಮಗಳನ್ನು ಕೈಗೊಳ್ಳುವುದು ಎಂದು ಹೇಳಿದರು.

ಎನ್‌ಸಿಪಿಯೊಂದಿಗೆ ಭಿನ್ನಾಭಿಪ್ರಾಯವಿದೆ. ಆದರೆ ಅದರ ನಾಯಕನಿಗೆ ಜೀವ ಬೆದರಿಕೆ ನೀಡುವುದನ್ನು ಸಹಿಸುವುದಿಲ್ಲ. ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...