ಮಣಿಪುರ | 10 ಮಂದಿ ಕುಕಿ ಬಂಡುಕೋರರ ಹತ್ಯೆ; ಜಿರಿಬಾಮ್‌ನಲ್ಲಿ ನಿಷೇಧಾಜ್ಞೆ

Date:

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಕುಕಿ-ಜೋ ಬಂಡುಕೋರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಘರ್ಷಣೆಯಲ್ಲಿ 10 ಮಂದಿ ಕುಕಿ ಬಂಡುಕೋರರನ್ನು ಸಿಆರ್‌ಪಿಎಫ್‌ ಹತ್ಯೆಗೈದಿದೆ. ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

- Advertisement -

ಜಿಲ್ಲೆಯ ಬೊರೊಬೆಕ್ರಾ ಪೊಲೀಸ್ ಠಾಣೆ ಮತ್ತು ಪಕ್ಕದ ಸಿಆರ್‌ಪಿಎಫ್ ಶಿಬಿರದ ಮೇಲೆ ಬಂದೂಕುಧಾರಿಗಳು ಸೋಮವಾರ ದಾಳಿ ನಡೆಸಿದ್ದಾರೆ. ಅಲ್ಲದೆ, ಜಕುರಾಧೋರ್ ಕರೋಂಗ್ ಮಾರುಕಟ್ಟೆಯಲ್ಲಿದ್ದ ಹಲವಾರು ಅಂಗಡಿಗಳನ್ನು ಸುಟ್ಟು ಹಾಕಿದ್ದಾರೆ. ಮನೆಗಳ ಮೇಲೂ ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಬಂದೂಕುಧಾರಿಗಳ ಮೇಲೆ ಸಿಆರ್‌ಪಿಎಫ್ ಪ್ರತಿದಾಳಿ ನಡೆಸಿದೆ. ಬೊರೊಬೆಕ್ರಾ ಪ್ರದೇಶದಲ್ಲಿ ಭಾರೀ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ 10 ಮಂದಿ ಬಂಡುಕೋರರು ಸಾವನ್ನಪ್ಪಿದ್ದಾರೆ.

“ಬೊರೊಬೆಕ್ರಾ ಪ್ರದೇಶದಲ್ಲಿ ಬಂಡುಕೋರರು ದಾಳಿ ನಡೆಸಿದ್ದಾರೆ. ಈ ವೇಳೆ ಭದ್ರತಾ ಪಡೆಗಳು ಪ್ರಬಲ ಪ್ರತಿದಾಳಿ ನಡೆಸಿವೆ. ಘಟನೆಯಲ್ಲಿ ಒಬ್ದರು ಸಿಆರ್‌ಪಿಎಫ್ ಕಾನ್‌ಸ್ಟೇಬಲ್ ಸಂಜೀವ್ ಕುಮಾರ್‌ ಎಂಬವರಿಗೆ ಬುಲೆಟ್ ತಗುಲಿ ಗಾಯವಾಗಿದೆ. ಅಸ್ಸಾಂನ ಸಿಲ್ಚಾರ್ ವೈದ್ಯಕೀಯ ಕಾಲೇಜಿಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ.

“ಸುಮಾರು 40-45 ನಿಮಿಷಗಳ ಭಾರೀ ಗುಂಡಿನ ಚಕಮಕಿ ನಡೆದಿದೆ. ಬಳಿಕ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಸ್ಥಳದಲ್ಲಿದ್ದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳೊಂದಿಗೆ ಶಸ್ತ್ರಸಜ್ಜಿತ ಬಂಡುಕೋರರ 10 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆ ನಡೆಸಲಾಗುತ್ತಿದೆ” ಎಂದು ಹೇಳಿದೆ.

ಬೊರೊಬೆಕ್ರಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಆಂತರಿಕವಾಗಿ ಸ್ಥಳಾಂತರಗೊಂಡ ಜನರಿಗಾಗಿ ಪರಿಹಾರ ಶಿಬಿರವಿದ್ದು, ಅಲ್ಲಿ ವಾಸಿಸುತ್ತಿದ್ದ ಐವರು ನಾಪತ್ತೆಯಾಗಿದ್ದಾರೆ. ಈ ನಾಗರಿಕರನ್ನು ಬಂಡುಕೋರರು ಅಪಹರಿಸಿದ್ದಾರೆಯೇ? ಅಥವಾ ದಾಳಿ ನಡೆದಾಗ ಅವರೇ ಸ್ಥಳಾಂತರವಾಗಿದ್ದಾರೆಯೇ? ಎಂಬುವುದು ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರಿಗಾಗಿ ಶೋಧ ನಡೆಯುತ್ತಿದೆ ಎಂದಿದ್ದಾರೆ.

ಕುಕಿ-ಜೋ ಕೌನ್ಸಿಲ್ ತನ್ನ 11 ಸ್ವಯಂ ಸೇವಕರ ಹತ್ಯೆಯನ್ನು ಖಂಡಿಸಿದೆ. ಅವರಿಗೆ ಗೌರವ ಸೂಚಿಸುವ ಸಲುವಾಗಿ ಇಂದು ಬೆಳಿಗ್ಗೆ 5 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್‌ಗೆ ಕರೆ ಕೊಟ್ಟಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...