ಮಣಿಪುರ | ರಾಜ್ಯದ ಪ್ರಾದೇಶಿಕ ಸಮಗ್ರತೆ ಕಾಪಾಡುವ ನಿರ್ಣಯಕ್ಕೆ 23 ಬಿಜೆಪಿ ಶಾಸಕರ ಸಹಿ

Date:

ಹಿಂಸಾಪೀಡಿತ ಮಣಿಪುರ ರಾಜ್ಯದ ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಲು ಆಡಳಿತಾರೂಢ ಬಿಜೆಪಿಯ 23 ಶಾಸಕರು ಪ್ರತಿಜ್ಞೆ ಮಾಡಿದ್ದು, ಈ ಕುರಿತ ನಿರ್ಣಯಕ್ಕೆ ಸಹಿ ಹಾಕಿದ್ದಾರೆ.

- Advertisement -

“ಮಣಿಪುರ ರಾಜ್ಯದ ಪ್ರಾದೇಶಿಕ ಸಮಗ್ರತೆಗಾಗಿ ನಾವು ನಿಲ್ಲುತ್ತೇವೆ ಮತ್ತು ಯಾವುದೇ ರೀತಿಯ ಪ್ರತ್ಯೇಕ ಆಡಳಿತವನ್ನು ನಾವು ಒಪ್ಪುವುದಿಲ್ಲ ಎಂದು ಶಾಸಕಾಂಗ ಸಭೆಯ ಎಲ್ಲಾ ಕೆಳಗಿರುವ ಸದಸ್ಯರು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ” ಎಂದು ನಿರ್ಣಯವನ್ನು ಓದಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

ಗಮನಾರ್ಹ ಅಂಶವೆಂದರೆ, ಮುಖ್ಯಮಂತ್ರಿ ಬಿರೇನ್‌ಸಿಂಗ್ ಈ ನಿರ್ಣಯಕ್ಕೆ ಸಹಿ ಹಾಕಿಲ್ಲ.

ಪ್ರಸ್ತುತ ಬಿಕ್ಕಟ್ಟಿಗೆ ಶೀಘ್ರವೇ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ನಾಯಕತ್ವದ ಮನವೊಲಿಸಲು ಶೀಘ್ರದಲ್ಲೇ ದೆಹಲಿಗೆ ತೆರಳಲು ಶಾಸಕರು ನಿರ್ಧರಿಸಿದ್ದಾರೆ.

ಸೋಮವಾರ ರಾತ್ರಿ ಸಿಎಂ ಕಾರ್ಯಾಲಯದಲ್ಲಿ ಹೊಸದಾಗಿ ರೂಪುಗೊಂಡ ಮಣಿಪುರದ ಯೂತ್ ಸಿವಿಲ್ ಸೊಸೈಟಿ ಸಂಘಟನೆಯ ಸದಸ್ಯರೊಂದಿಗೆ ಸಭೆ ನಡೆಸಿದ ನಂತರ ಸಹಿ ಮಾಡಿದವರು, ಪ್ರತ್ಯೇಕ ಆಡಳಿತದ ಕುಕಿ ಝೋ ಸಮುದಾಯದ ಬೇಡಿಕೆಯು ತಮಗೆ ಸ್ವೀಕಾರಾರ್ಹವಲ್ಲ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ: ʼಈ ದಿನʼ ವಿಶೇಷ ಸಂದರ್ಶನ ಭಾಗ-1 | ‘ಮಣಿಪುರವನ್ನು ಒಡೆದರೆ, ನಾವು ಭಾರತವನ್ನೇ ಒಡೆಯುತ್ತೇವೆ’- ತೌನೋಜಮ್ ಬೃಂದಾ

ಸೋಮವಾರ ರಾತ್ರಿ, ಮಣಿಪುರದ ಸಾವಿರಾರು ಯುವಕರು ಅವರನ್ನು ಭೇಟಿ ಮಾಡಲು ಸಿಎಂ ಬಂಗಲೆಯ ಕಡೆಗೆ ಮೆರವಣಿಗೆ ನಡೆಸಿದರು. ಆದರೆ ಭದ್ರತಾ ಪಡೆಗಳು ಅವರಲ್ಲಿ ಕೆಲವರಿಗೆ ಮಾತ್ರ ಬ್ಯಾರಿಕೇಡ್‌ಗಳನ್ನು ದಾಟಲು ಅವಕಾಶ ಮಾಡಿಕೊಟ್ಟವು.

ಮಣಿಪುರದಲ್ಲಿ ಸಮುದಾಯಕ್ಕೆ ಪ್ರತ್ಯೇಕ ಆಡಳಿತ ನೀಡಬೇಕೆಂದು ಆಗ್ರಹಿಸಿದ 10 ಮಂದಿ ಕುಕಿ ಶಾಸಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಜತೆಗಿನ ಸಭೆಯಲ್ಲಿ ಯೂತ್ ಸಿವಿಲ್ ಸೊಸೈಟಿ ಸಂಘಟನೆಯ ಸದಸ್ಯರು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಪ್ರಮಾದ | ಹೆಸರು ಕಳೆದುಕೊಂಡವರಿಗಾಗಿ ‘ಫಾರ್ಮ್ 6’ ನಿಯಮ ಬದಲಾಯಿಸುವಂತೆ ಆಯೋಗಕ್ಕೆ ಮಹಾರಾಷ್ಟ್ರ ಒತ್ತಾಯ

ದೇಶಾದ್ಯಂತ ತೀವ್ರ ವಿವಾದ ಮತ್ತು ಗೊಂದಲಗಳಿಗೆ ಕಾರಣವಾಗಿರುವ SIR ಪ್ರಕ್ರಿಯೆಯಲ್ಲಿನ ದೊಡ್ಡ...

2027ರ ಚುನಾವಣೆ | ಬಿಜೆಪಿಯ ಲೂಟಿ ವಿರುದ್ಧ ಕಾಂಗ್ರೆಸ್ ಸಮರ: ‘ಸೇವ್ ಗೋವಾ’ ಅಭಿಯಾನದಲ್ಲಿ ರಾಹುಲ್ ಸಾಥ್

2027ರ ಗೋವಾ ವಿಧಾನಸಭೆ ಚುನಾವಣೆಗೆ ಭರ್ಜರಿ ತಳಹದಿ ನಿರ್ಮಿಸಲು ಮುಂದಾಗಿರುವ ಕಾಂಗ್ರೆಸ್,...

ಮಧ್ಯಪ್ರದೇಶ | ಭೀಕರ ಅಪಘಾತ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ, 14 ಮಂದಿ ಸಾವು

ಭಕ್ತರ ಮೇಲೆ ಲಾರಿ ಹರಿದು 14ಕ್ಕೂ ಹೆಚ್ಚು ಭಕ್ತರು ಸಾವನ್ನಪ್ಪಿ, 28ಕ್ಕೂ...

ಕೋಲ್ಕತ್ತಾ ದುರ್ಗಾ ಪೂಜೆ ಕಾಲ್ತುಳಿತ ದುರಂತ; ಸಾವಿನ ಸಂಖ್ಯೆ 19ಕ್ಕೆ ಏರಿಕೆ; 7 ಜನರ ಬಂಧನ!

ಉತ್ತರ ಕೋಲ್ಕತ್ತಾದ ಪ್ರಸಿದ್ಧ ಚೋರ್‌ಬಗನ್ ಸಾರ್ವಜನಿಕ ದುರ್ಗೋತ್ಸವ ಸಮಿತಿಯ ಪಂಡಾಲ್‌ನಲ್ಲಿ ಸಂಭವಿಸಿದ...