ಮಣಿಪುರ: ಗಲಭೆ ನಂತರ ಮ್ಯಾನ್ಮಾರ್ ಗಡಿ ಸಮೀಪದ ಖಾಲಿ ಮನೆಗಳಿಗೆ ಬೆಂಕಿ

Date:

ಮೇ 3 ರಂದು ಜನಾಂಗೀಯ ಘರ್ಷಣೆಗಳು ಭುಗಿಲೆದ್ದ ನಂತರ ಖಾಲಿ ಮಾಡಲಾಗಿದ್ದ ಮ್ಯಾನ್ಮಾರ್ ಗಡಿಯ ಸಮೀಪದಲ್ಲಿರುವ ಮಣಿಪುರದ ಮೊರೆಹ್ ಬಜಾರ್‌ನಲ್ಲಿರುವ ಹಲವಾರು ಮನೆಗಳಿಗೆ ಬುಧವಾರ ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿದ್ದಾರೆ.

- Advertisement -

ಕುಕಿ ಪ್ರಾಬಲ್ಯದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಕೇಂದ್ರ ಭದ್ರತಾ ಪಡೆಗಳು ಬಳಸುತ್ತಿದ್ದ ಎರಡು ವಾಹನಗಳನ್ನು ಸುಟ್ಟು ಹಾಕಿದ ಕೆಲವು ಗಂಟೆಗಳ ನಂತರ ಈ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ನಾಗಾಲ್ಯಾಂಡ್‌ನ ಡಿಂಪೌರ್‌ನಿಂದ ವಾಹನಗಳು ಬರುತ್ತಿದ್ದಾಗ ಎನ್‌ಎಚ್ 2 ರ ಸಪೋರ್ಮಿನಾ ಪ್ರದೇಶದಲ್ಲಿ ವಾಹನಗಳನ್ನು ತಡೆದು ಬೆಂಕಿ ಹಚ್ಚಲಾಗಿದೆ. ಕುಕಿ ನಿವಾಸಿಗಳು ವಾಹನಗಳನ್ನು ಪರಿಶೀಲಿಸಲು ಬಯಸಿದ್ದರು ಮತ್ತು ಭದ್ರತಾ ಪಡೆಗಳು ತಮ್ಮ ವಾಹನಗಳ ಒಳಗೆ ಪ್ರವೇಶಿಸಲು ನಿರಾಕರಿಸಿದಾಗ ಕೆಲವರು ಬೆಂಕಿ ಹಚ್ಚಿದರು.ಆದಾಗ್ಯೂ, ಎರಡೂ ಘಟನೆಗಳಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಭದ್ರತಾ ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಮೋದಿ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಅಂಗೀಕರಿಸಿದ ಲೋಕಸಭೆ ಸ್ಪೀಕರ್

ಮೇ 3 ರಂದು ಹಿಂಸಾಚಾರ ಪ್ರಾರಂಭವಾದಾಗ ಕುಕಿ ಮತ್ತು ಮೀಟೀ ಸಮುದಾಯಗಳಿಗೆ ಸೇರಿದ ಸಾವಿರಾರು ಜನರು ಮೊರೆಹ್‌ನಿಂದ ಓಡಿಹೋದರು. ಅನೇಕ ಮನೆಗಳಿಗೆ ಆಗಲೇ ಬೆಂಕಿ ಹಚ್ಚಲಾಗಿತ್ತು. ಇದೀಗ ಉಳಿದ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಮೋರಹ್, ವಿವಿಧ ಜನ ಸಮುದಾಯವನ್ನು ಹೊಂದಿರುವ ಪ್ರಮುಖ ವ್ಯಾಪಾರ ಕೇಂದ್ರ. ಅಲ್ಲಿ ಕುಕಿಗಳು ಬಹುಸಂಖ್ಯಾತರು.

ಮೇ 3 ರಿಂದ ಶುರುವಾದ ಹಿಂಸಾಚಾರದಿಂದ 140 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 60,000 ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆತ್ಮಹತ್ಯೆ ಪ್ರಕರಣ: ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಬಾಲಿವುಡ್ ನಟಿ ರಾಖಿ ಸಾವಂತ್‌ಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದೆ. 2010ರ...

ರಷ್ಯಾದ ಇಂಧನದಿಂದ ಭಾರತ ದೂರ ಸರಿಯುವುದು ಅಸಾಧ್ಯ: ಅಮೆರಿಕ

ರಷ್ಯಾದ ತೈಲ ಖರೀದಿಸುವ ರಾಷ್ಟ್ರಗಳ ಮೇಲಿನ ದಿಗ್ಬಂಧನ ಮತ್ತು ಆಮದು ಸುಂಕದ...

ಫುಟ್‌ಪಾತ್ ನಿರ್ಮಿಸದಿದ್ರೆ, ನಾವೇ ಧರಣಿ‌ ಕೂರ್ತೀವಿ; BJP ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ವಾರ್ನಿಂಗ್!

ದೆಹಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಸಮೀಪದ ಮಥುರಾ ರಸ್ತೆಯಲ್ಲಿ ಪಾದಚಾರಿಗಳು...