ಮಣಿಪುರ | ಶೋಧ ಕಾರ್ಯಾಚರಣೆ ಬೆನ್ನಲ್ಲೇ ಅಸ್ಸಾಂ ರೈಫಲ್ಸ್ ಶಿಬಿರದ ಮೇಲೆ ದಾಳಿ; ವಾಹನಗಳಿಗೆ ಬೆಂಕಿ

Date:

ಮಣಿಪುರದ ಸೇನಾಪತಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯು ತೀವ್ರ ಸ್ವರೂಪಕ್ಕೆ ತಿರುಗಿದೆ. ಅಸ್ಸಾಂ ರೈಫಲ್ಸ್ ಶಿಬಿರದ ಮೇಲೆ ಆಕ್ರೋಶಿತ ಗುಂಪೊಂದು ಮುತ್ತಿಗೆ ಹಾಕಿ, ಕಲ್ಲು ತೂರಾಟ ನಡೆಸುವುದರ ಜೊತೆಗೆ ಭದ್ರತಾ ಪಡೆಗಳ ವಾಹನಗಳಿಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಿರುವ ಘಟನೆ ಮಂಗಳವಾರ ರಾತ್ರಿ ವರದಿಯಾಗಿದೆ.

- Advertisement -

ಮಣಿಪುರದ ಸೇನಾಪತಿ ಜಿಲ್ಲೆಯ ನಾಗಾ ತಫೌನಲ್ಲಿರುವ ಅಸ್ಸಾಂ ರೈಫಲ್ಸ್ ಶಿಬಿರದ ಮೇಲೆ ಈ ದಾಳಿ ನಡೆದಿದೆ. ಎನ್‌ಎಸ್‌ಸಿಎನ್ (ಐಎಂ) ನ ಓಕ್ಲಾಂಗ್ ಶಿಬಿರದ ಸಮೀಪವಿರುವ ಮಕುಇಲಾಂಗ್ಡಿ ಪ್ರದೇಶದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳ ಚಲನವಲನಗಳ ಬಗ್ಗೆ ಖಚಿತ ಮಾಹಿತಿ ದೊರೆತಿತ್ತು. ಕದನ ವಿರಾಮ ನಿಯಮಗಳನ್ನು ಉಲ್ಲಂಘಿಸಿ ಶಸ್ತ್ರಾಸ್ತ್ರಗಳನ್ನು ಹಿಡಿದು ಹಾಗೂ ಸಮವಸ್ತ್ರ ಧರಿಸಿ ಶಸ್ತ್ರಸಜ್ಜಿತ ಗುಂಪುಗಳು ಓಡಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬಂದ ಹಿನ್ನೆಲೆಯಲ್ಲಿ, ಅಸ್ಸಾಂ ರೈಫಲ್ಸ್ ಪಡೆಗಳು ಅಲ್ಲಿ ಶೋಧ ಕಾರ್ಯಾಚರಣೆಯನ್ನು ಕೈಗೊಂಡಿದ್ದವು. ಈ ವಿಷಯವನ್ನು ಕದನ ವಿರಾಮ ಮೇಲ್ವಿಚಾರಣಾ ಗುಂಪಿನ (CFMG) ಗಮನಕ್ಕೂ ತರಲಾಗಿತ್ತು ಎಂದು ರಕ್ಷಣಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನೂ ಓದಿ: ಸಾಮ್ರಾಜ್ಯಶಾಹಿ ಅಮೆರಿಕಕ್ಕೆ ಸಡ್ಡು ಹೊಡೆದ ಇರಾನ್: ‘ಹಾರ್ಮುಜ್’ ಎಂಬ ಸ್ವಾಭಿಮಾನದ ಕೋಟೆ

ಆದರೆ, ಕಾರ್ಯಾಚರಣೆಯ ಸಂದರ್ಭದಲ್ಲಿ ಮಕುಇಲಾಂಗ್ಡಿ ಮತ್ತು ಓಕ್ಲಾಂಗ್ ಗ್ರಾಮಗಳ ನಿವಾಸಿಗಳು, ವಿಶೇಷವಾಗಿ ಮಹಿಳೆಯರು ಭದ್ರತಾ ಪಡೆಗಳ ದಾರಿಗೆ ಅಡ್ಡಿಪಡಿಸಿ ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಬಳಿಕ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಮೊಟಕುಗೊಳಿಸಿ ಹಿಂದಕ್ಕೆ ಸರಿದಿದ್ದರೂ, ರಾತ್ರಿ 9:30ರ ಸುಮಾರಿಗೆ ನೂರಾರು ಜನರಿದ್ದ ಗುಂಪು ಸೇನಾಪತಿ ಪಟ್ಟಣದಲ್ಲಿ ಜಮಾಯಿಸಿ ಅಸ್ಸಾಂ ರೈಫಲ್ಸ್ ಶಿಬಿರದ ಕಡೆಗೆ ನುಗ್ಗಿ ಬಂದಿದೆ.

ಶಿಬಿರದ ಒಳಗೆ ನುಗ್ಗಿದ ಆಕ್ರೋಶಿತ ಗುಂಪು ಮನಬಂದಂತೆ ಕಲ್ಲು ತೂರಾಟ ನಡೆಸಿದೆ. ಈ ವೇಳೆ ಒಂದು ಲಘು ವಾಹನಕ್ಕೆ ಬೆಂಕಿ ಹಚ್ಚಲಾಗಿದ್ದು, ಎರಡು ಟ್ರಕ್‌ಗಳನ್ನು ಉರುಳಿಸಿ ಹಾನಿಗೊಳಿಸಲಾಗಿದೆ. ಅಲ್ಲದೆ, ಅಲ್ಲಿದ್ದ ನಾಗರಿಕರ ಕಾರೊಂದಕ್ಕೂ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಮಣಿಪುರ ಪೊಲೀಸ್ ಮತ್ತು ಸಿಆರ್‌ಪಿಎಫ್ ಪಡೆಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ಗುಂಪನ್ನು ಚದುರಿಸಿವೆ. ಪ್ರಸ್ತುತ ಶಿಬಿರದ ಬಳಿ ಪರಿಸ್ಥಿತಿ ಹತೋಟಿಯಲ್ಲಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು TNIE ವರದಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿ ಆಗ್ರಹಿಸಿ ಸಿಪಿಐ(ಎಂ)ನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...