ಮಣಿಪುರ ಬಿಕ್ಕಟ್ಟು: ರಾಷ್ಟ್ರೀಯ ಹೆದ್ದಾರಿಗಳ ಪುನರಾರಂಭಕ್ಕೆ ಯೋಜನೆ ರೂಪಿಸಲು ಕುಕಿ, ನಾಗಾ ಸಮುದಾಯಗಳಿಗೆ ಸುಪ್ರೀಂ ಆದೇಶ

Date:

ಮಣಿಪುರದಲ್ಲಿ ಎದುರಾಗಿರುವ ಜನಾಂಗೀಯ ಸಂಘರ್ಷ ಹಾಗೂ ಇತ್ತೀಚಿನ ಬಿಕ್ಕಟ್ಟುಗಳ ನಡುವೆ, ರಾಜ್ಯದ ಮುಖ್ಯ ರಾಷ್ಟ್ರೀಯ ಹೆದ್ದಾರಿಗಳನ್ನು ಮುಕ್ತಗೊಳಿಸಲು ಸಮಗ್ರ ಯೋಜನೆಯನ್ನು ಸಲ್ಲಿಸುವಂತೆ ಕುಕಿ-ಝೋ, ನಾಗಾ ಮತ್ತು ಮೈತೇಯಿ ಸಮುದಾಯಗಳ ಸಂಘಟನೆಗಳಿಗೆ, ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನೂ ಓದಿ: ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: 20ಕ್ಕೂ ಅಧಿಕ ಮನೆಗಳಿಗೆ ಬೆಂಕಿ

ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು, “ಹೆದ್ದಾರಿಗಳ ಬಂದ್‌ ಮಾಡುವ ಮೂಲಕ ಯಾವುದೇ ಸಮುದಾಯಕ್ಕೂ ಪ್ರಯೋಜನವಾಗುವುದಿಲ್ಲ. ಸಂಘರ್ಷದಿಂದ ಸಾಕು ಸಾಗಿದೆ, ಶಾಂತಿ ಸ್ಥಾಪನೆ ಹಾಗೂ ರಸ್ತೆಗಳ ಸುಗಮ ಸಂಚಾರಕ್ಕೆ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು” ಎಂದು ತೀಕ್ಷ್ಣವಾಗಿ ಅಭಿಪ್ರಾಯಪಟ್ಟರು. ರಾಷ್ಟ್ರೀಯ ಹೆದ್ದಾರಿಗಳು ಪ್ರತಿಯೊಬ್ಬ ಸಾಮಾನ್ಯ ಪ್ರಜೆಯ ಜೀವಾಳವಾಗಿವೆ ಎಂದು ಅವರು ಎಚ್ಚರಿಸಿದರು.

ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರು ಮಾತನಾಡಿ, “ಕೇವಲ ಒಂದೆರಡು ಹೆದ್ದಾರಿಗಳನ್ನು ತೆರೆದು ಇತರ ರಸ್ತೆಗಳನ್ನು ಬ್ಲಾಕ್ ಮಾಡುವುದು ಪರಿಹಾರವಲ್ಲ; ರಾಜ್ಯದ ಎಲ್ಲಾ ನಿರ್ಬಂಧಿತ ರಸ್ತೆಗಳೂ ತೆರೆಯಬೇಕು” ಎಂದು ಸ್ಪಷ್ಟಪಡಿಸಿದರು.

‘ಕುಕಿ ವುಮೆನ್ ಆರ್ಗನೈಸೇಶನ್ ಫಾರ್ ಹ್ಯೂಮನ್ ರೈಟ್ಸ್’ (KWOHR) ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿತ್ತು. ರಾಷ್ಟ್ರೀಯ ಹೆದ್ದಾರಿ-2 (NH-2) ತಡೆಯಿಂದಾಗಿ ಕಾಂಗ್‌ಪೋಕ್ಪಿ ಮತ್ತು ಸುತ್ತಮುತ್ತಲಿನ ಕುಕಿ ಪ್ರದೇಶಗಳಿಗೆ ಆಹಾರ, ಔಷಧ, ಇಂಧನ ಮತ್ತು ಅಗತ್ಯ ವಸ್ತುಗಳ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದ್ದು, ಇದು ಮಾನವೀಯ ಬಿಕ್ಕಟ್ಟಿಗೆ ಕಾರಣವಾಗಿದೆ ಎಂದು ಅರ್ಜಿದಾರರು ಕೋರ್ಟ್‌ ಗಮನಕ್ಕೆ ತಂದಿದ್ದರು.

ಇದೇ ವೇಳೆ, ಬಲಪ್ರಯೋಗ ಮಾಡಿ ರಸ್ತೆ ತೆರವುಗೊಳಿಸಲು ಆದೇಶಿಸಿದರೆ ಅದು ಮತ್ತಷ್ಟು ಹಿಂಸಾಚಾರಕ್ಕೆ ದಾರಿ ಮಾಡಿಕೊಡಬಹುದು ಎಂಬ ಕಳವಳವನ್ನು ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿದೆ. ಆದ್ದರಿಂದ ಯಾವುದೇ ಪ್ರತ್ಯಾರೋಪಗಳು ಅಥವಾ ಪ್ರಮಾಣಪತ್ರಗಳ ಬದಲಾಗಿ, ಎಲ್ಲಾ ರಸ್ತೆಗಳನ್ನು ತೆರವುಗೊಳಿಸಲು ಪರ್ಯಾಯ ಪ್ರಸ್ತಾಪಗಳನ್ನು ಸಲ್ಲಿಸುವಂತೆ ಅರ್ಜಿದಾರರು ಮತ್ತು ಪ್ರತಿವಾದಿಗಳಿಗೆ ಕೋರ್ಟ್ ಸೂಚಿಸಿದೆ. ಈ ಪ್ರಕರಣದಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವನ್ನೂ (NHAI) ಸುಪ್ರೀಂ ಕೋರ್ಟ್ ಪಕ್ಷಗಾರನನ್ನಾಗಿ ಸೇರ್ಪಡೆಗೊಳಿಸಿದೆ.

2023ರ ಮೇ 3ರಿಂದ ಮಣಿಪುರದಲ್ಲಿ ಬಹುಸಂಖ್ಯಾತ ಮೈತೇಯಿ ಮತ್ತು ಬುಡಕಟ್ಟು ಸಮುದಾಯವಾದ ಕುಕಿ-ಝೋ ನಡುವೆ ಸುದೀರ್ಘವಾದ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಈ ಹಿಂಸಾಚಾರದಲ್ಲಿ 250ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಬಿಜೆಪಿ ಸರ್ಕಾರ ಈವರೆಗೂ ಈ ಹಿಂಸಾಚಾರವನ್ನು ನಿಯಂತ್ರಣಕ್ಕೆ ತರುವಲ್ಲಿ ಸಫಲವಾಗಿಲ್ಲ. ಬದಲಾಗಿ ಬಿಜೆಪಿ ರಾಜಕೀಯದಾಟದಲ್ಲೇ ತೊಡಗಿದೆ. ಇವೆಲ್ಲವುದರ ನಡುವೆ 2026ರಲ್ಲಿ ಮಣಿಪುರದಲ್ಲಿ ಹಿಂಸಾಚಾರ ಮತ್ತೊಂದು ಸಮುದಾಯಕ್ಕೆ ಪಸರಿಸಿದೆ. ಬುಡಕಟ್ಟು ಸಮುದಾಯ ನಾಗಾ ಮತ್ತು ಕುಕಿ ನಡುವೆ ಹಿಂಸಾಚಾರ ಆರಂಭವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...

ಮೋದಿ ಪ್ರಮಾಣಪತ್ರ ವಿವಾದ: ಕೇಜ್ರಿವಾಲ್ ಮೇಲ್ಮನವಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಪ್ರಮಾಣಪತ್ರವನ್ನು ಬಹಿರಂಗಪಡಿಸುವಂತೆ ಗುಜರಾತ್...