ಇಂಫಾಲದಲ್ಲಿ ಭಾರತ್ ನ್ಯಾಯ ಯಾತ್ರೆಗೆ ಅನುಮತಿ ನಿರಾಕರಿಸಿದ ಮಣಿಪುರ ಸರ್ಕಾರ

Date:

ಪೂರ್ವ ಇಂಫಾಲ ಜಿಲ್ಲೆಯ ಹಟ್ಟಾಕಾಂಗೈಬುಂಗ್‌ನಲ್ಲಿ ಜನವರಿ 14ರಂದು ಆರಂಭಗೊಳ್ಳುವ ರಾಹುಲ್‌ ಗಾಂಧಿಯವರ ಭಾರತ್‌ ನ್ಯಾಯ ಯಾತ್ರೆಗೆ ಮಣಿಪುರ ಸರ್ಕಾರ ಅನುಮತಿ ನಿರಾಕರಿಸಿದೆ.

- Advertisement -

ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ ಮೇಘಚಂದ್ರ ಅವರು ತಮ್ಮ ಪಕ್ಷದ ಪ್ರಮುಖ ನಾಯಕರೊಂದಿಗೆ ಮುಖ್ಯಮಂತ್ರಿ ಎನ್‌ ಬಿರೇನ್ ಸಿಂಗ್ ಅವರನ್ನು ಭೇಟಿ ನೀಡಿ ಅನುಮತಿ ಕೇಳಿದ್ದರು. ಆದರೆ ರಾಜ್ಯದ ಕಾನೂನು ಸುವ್ಯವಸ್ಥೆ ಪರಿಸ್ಥಿತಿಯ ಹಿನ್ನೆಲೆಯಲ್ಲಿಅನುಮತಿ ನೀಡಲು ಸಾಧ್ಯವಿಲ್ಲ ಎಂದು ಬಿರೇನ್ ಸಿಂಗ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮೇಘಚಂದ್ರ, ಅನುಮತಿ ನಿರಾಕರಿಸಿರುವ ಸರ್ಕಾರದ ಪ್ರತಿಕ್ರಿಯೆ ಅತೀ ದುರಾದೃಷ್ಟವಾಗಿದ್ದು, ನಾನು ಇಂಫಾಲದ ಬದಲಿಗೆ ತೌಬಲ್ ಜಿಲ್ಲೆಯ ಖೋಂಗ್‌ಜೋಮ್‌ನಲ್ಲಿರುವ ಖಾಸಗಿ ಸ್ಥಳಕ್ಕೆ ಸ್ಥಳವನ್ನು ಬದಲಾಯಿರುವುದಾಗಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಡುದ್ವೇಷದ ಕತ್ತಲ ಯುಗದಲ್ಲಿ ಬೆಳ್ಳಂಬೆಳಕಿನ ತೀರ್ಪು

ಕಾಂಗ್ರೆಸ್‌ನ ಭಾರತ್ ನ್ಯಾಯಯಾತ್ರೆ ಅನುಮತಿಯ ಬಗ್ಗೆ ಮಂಗಳವಾರ ಮಾತನಾಡಿದ್ದ ಮುಖ್ಯಮಂತ್ರಿ ಬಿರೇನ್ ಸಿಂಗ್, ಭದ್ರತಾ ಸಂಸ್ಥೆಗಳ ವರದಿಗಳನ್ನು ಸ್ವೀಕರಿಸಿದ ನಂತರ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದರು. ಸದ್ಯ ಮಣಿಪುರದ ಕಾನೂನು ಮತ್ತು ಸುವ್ಯವಸ್ಥೆ ತುಂಬ ಕ್ಲಿಷ್ಟಕರವಾಗಿದೆ ಎಂದಿದ್ದರು.

ಜನವರಿ 14ರಂದು ಆರಂಭಗೊಳ್ಳುವ ಭಾರತ್‌ ನ್ಯಾಯ ಯಾತ್ರೆ ಬಸ್‌ ಹಾಗೂ ಪಾದಯಾತ್ರೆಯ ಮೂಲಕ 6713 ಕಿ.ಮೀ ಸಂಚರಿಸಲಿದೆ. 66 ದಿನಗಳು ನಡೆಯುವ ಯಾತ್ರೆಯು 110 ಜಿಲ್ಲೆಗಳು, 100 ಲೋಕಸಭಾ ಕ್ಷೇತ್ರಗಳು ಹಾಗೂ 337 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಳ್ಳಲಿದೆ. ಮಾರ್ಚ್‌ 20ರಂದು ಮುಂಬೈನಲ್ಲಿ ಅಂತಿಮಗೊಳ್ಳಲಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಪಕ್ಷದ ಪ್ರಮುಖ ನಾಯಕರೊಂದಿಗೆ ಧ್ವಜಾರೋಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...