ಮಣಿಪುರ: ಮೈತೇಯಿಗಳಿಗೆ ಎಸ್‌ಟಿ ಮೀಸಲು ಕಲ್ಪಿಸಿದ್ದ ಆದೇಶ ಪ್ರಶ್ನಿಸಲು ಹೈಕೋರ್ಟ್ ಅನುಮತಿ

Date:

ಮೈತೇಯಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನ ನೀಡಿದ ಮಾರ್ಚ್ 27ರ ವಿವಾದಾತ್ಮಕ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಮಣಿಪುರ ಹೈಕೋರ್ಟ್ ರಾಜ್ಯದ ಬುಡಕಟ್ಟು ಸಂಘಟನೆಗಳಿಗೆ ಅನುಮತಿ ನೀಡಿದೆ.

- Advertisement -

ಮೈತೇಯಿಗಳಿಗೆ ಎಸ್‌ಟಿ ಸ್ಥಾನಮಾನ ನೀಡಲು ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ ಈ ಆದೇಶದ ಬಳಿಕವೇ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತ್ತು. ಕಳೆದ ಐದು ತಿಂಗಳಿಂದಲೂ ಮಣಿಪುರ ಆಂತರಿಕ ಕಲಹಕ್ಕೆ ದೂಡಲ್ಪಟ್ಟಿತು. ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ಬಹುದೊಡ್ಡ ಬಿರುಕು ಮೂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಅಕ್ಟೋಬರ್ 19 ರಂದು, ನ್ಯಾಯಮೂರ್ತಿ ಅಹಂತೇಮ್ ಬಿಮೋಲ್ ಸಿಂಗ್ ಮತ್ತು ನ್ಯಾಯಮೂರ್ತಿ ಎ. ಗುಣೇಶ್ವರ್ ಶರ್ಮಾ ಅವರ ವಿಭಾಗೀಯ ಪೀಠವು ಅನುಮತಿಯನ್ನು ನೀಡಿದ್ದು, ತಮ್ಮ ಮನವಿಯನ್ನು ನೋಂದಾಯಿಸಲು ಬುಡಕಟ್ಟು ಸಂಸ್ಥೆಗಳಿಗೆ ಅವಕಾಶ ಮಾಡಿಕೊಟ್ಟಿದೆ. ಮೇಲ್ಮನವಿಯನ್ನು ವಿರೋಧಿಸಿರುವ ಮಣಿಪುರ ಸರ್ಕಾರ ಮತ್ತು ಮೈತೇಯಿ ಬುಡಕಟ್ಟು ಒಕ್ಕೂಟದ ಮನವಿಗಳನ್ನು ಕೋರ್ಟ್ ತಿರಸ್ಕರಿಸಿದೆ.

ಬುಡಕಟ್ಟು ಸಂಘಟನೆಗಳು ಮಂಡಿಸಿದ ಕುಂದುಕೊರತೆ ಮತ್ತು ವಾದಗಳನ್ನು ನ್ಯಾಯಾಲಯ ಮುಂದಿನ ದಿನಗಳಲ್ಲಿ ವಿಚಾರಣೆ ನಡೆಸಬಹುದು.

ಈ ವಿವಾದಾತ್ಮಕ ಆದೇಶವನ್ನು ಹಿಂದಿನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಂ.ವಿ. ಮುರಳೀಧರನ್ ಅವರು ನೀಡಿದ್ದರು. ನ್ಯಾಯಮೂರ್ತಿ ಮುರಳೀಧರನ್ ಅವರನ್ನು ಕಲ್ಕತ್ತಾ ಹೈಕೋರ್ಟ್‌ಗೆ ವರ್ಗಾಯಿಸಲು ಕೇಂದ್ರ ಸರ್ಕಾರವು ಈಗ ಸೂಚನೆ ನೀಡಿರುವುದರಿಂದ, ಮಣಿಪುರದ ಹೊಸ ಮುಖ್ಯ ನ್ಯಾಯಮೂರ್ತಿ ಸಿದ್ಧಾರ್ಥ್ ಮೃದುಲ್ ಅವರು ವಿಚಾರಣೆಗೆ ಮೇಲ್ಮನವಿಯನ್ನು ಕೈಗೆತ್ತಿಕೊಳ್ಳುವ ನಿರೀಕ್ಷೆಯಿದೆ.

ಮಣಿಪುರದಲ್ಲಿ ನಡೆದಿರುವ ಜನಾಂಗೀಯ ಕಲಹದಿಂದಾಗಿ ಈವರೆಗೆ 180 ಮಂದಿ ಮೃತಪಟ್ಟಿದ್ದಾರೆ. ಲಕ್ಷಾಂತರ ಜನರು ಮನೆಗಳನ್ನು ಬಿಟ್ಟು ನಿರಾಶ್ರಿತ ಶಿಬಿರಗಳಿಗೆ ದೂಡಲ್ಪಟ್ಟಿದ್ದಾರೆ.

ಮೇ 3 ರಂದು ಹಿಂಸಾಚಾರ ಪ್ರಾರಂಭವಾದ ನಂತರ, ಅಖಿಲ ಮಣಿಪುರ ಬುಡಕಟ್ಟು ಒಕ್ಕೂಟ ನೇತೃತ್ವದ ವಿವಿಧ ಸಂಘಟನೆಗಳು, ವಿವಾದಿತ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಅನುಮತಿ ಕೋರಿ ಮಣಿಪುರ ಹೈಕೋರ್ಟ್‌ಗೆ ಮನವಿ ಸಲ್ಲಿಸಿದವು. ಅಂತಿಮವಾಗಿ, ಅಕ್ಟೋಬರ್ 17 ರಂದು ನ್ಯಾಯಾಲಯವು ಅವರ ಮನವಿಯನ್ನು ಒಪ್ಪಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...