ಮಣಿಪುರ | ಕಣಿವೆ ಜಿಲ್ಲೆಗಳಲ್ಲಿ ಅಧಿಕ ಭದ್ರತಾ ಪಡೆ ನಿಯೋಜನೆ ವಿರುದ್ಧ ಪ್ರತಿಭಟನೆ

Date:

Advertisements

ಅಧಿಕ ಭದ್ರತಾ ಪಡೆ ನಿಯೋಜನೆ ಮಾಡಿರುವುದರ ಮತ್ತು ರಾಜ್ಯದ ಕಣಿವೆ ಜಿಲ್ಲೆಗಳ ಗಡಿಯಲ್ಲಿ ಕಾವಲು ಕಾಯುತ್ತಿದ್ದ ಗ್ರಾಮ ಸ್ವಯಂಸೇವಕರ ಬಂಧನದ ವಿರುದ್ಧ ಹಿಂಸಾಚಾರ ಪೀಡಿತ ಮಣಿಪುರದ ಹಲವು ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ.

ಇಂಫಾಲ್‌ನಲ್ಲಿ, ತಂಗ್‌ಮೈಬಾಂಡ್ ಡಿಎಂ ಕಾಲೇಜಿನ ಗೇಟ್‌ನ ಹೊರಗೆ ಧರಣಿ ನಡೆಸಲಾಗಿದೆ. ಇದಲ್ಲದೆ, ಹಲವು ಮಹಿಳಾ ಪ್ರತಿಭಟನಾಕಾರರು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಅಧಿಕೃತ ನಿವಾಸದತ್ತ ಮೆರವಣಿಗೆ ನಡೆಸಿದರು.

ಇನ್ನು ಇಂಫಾಲ್‌ನ ಕಾಂಚಿಪುರದ ಮಣಿಪುರ ವಿಶ್ವವಿದ್ಯಾಲಯದ ಗೇಟ್‌ನಲ್ಲಿ ರ್‍ಯಾಲಿ ನಡೆಸುತ್ತಿದ್ದ ಮಹಿಳೆಯರನ್ನು ಪೊಲೀಸರು ತಡೆದಿದ್ದಾರೆ. ಅದಾದ ಬಳಿಕ ಆ ಪೈಕಿ ಕೆಲವರಿಗೆ ಮನವಿ ಪತ್ರವನ್ನು ಅಧಿಕಾರಿಗಳಿಗೆ ಸಲ್ಲಿಸಲು ಅವಕಾಶ ನಿಡಲಾಗಿದೆ.

Advertisements

ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉನ್ನತ ಮಟ್ಟದ ಸಭೆಯನ್ನು ಕರೆದ ಕೆಲವು ದಿನಗಳ ನಂತರ ಮಣಿಪುರದಲ್ಲಿ ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಕಣಿವೆ ಜಿಲ್ಲೆಗಳ ವಿವಿಧೆಡೆ ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ.

ಇದನ್ನು ಓದಿದ್ದೀರಾ?  ಮಣಿಪುರ ಹಿಂಸಾಚಾರ| ಸ್ಥಿತಿ ಅವಲೋಕಿಸಲು ಸಭೆ ಕರೆದ ಗೃಹ ಸಚಿವ ಅಮಿತ್ ಶಾ

ಇನ್ನು ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಇಮಗಿ ಮೀರಾ ಒಟ್ಗಾನಿಸ್ ಎಂಬ ಸಂಘಟನೆಯ ಸಂಚಾಲಕಿ ಸುಜಾತಾ ದೇವಿ, “ಸಂಸತ್ತಿನ ಅಧಿವೇಶನ ನಡೆಯುತ್ತಿರುವುದರಿಂದ ಮಣಿಪುರದಲ್ಲಿ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಬಯಸುತ್ತೇವೆ” ಎಂದು ಹೇಳಿದ್ದಾರೆ.

“ಕೇಂದ್ರ ಅರೆಸೇನಾ ಪಡೆಗಳನ್ನು ದೂರದ ಮತ್ತು ದುರ್ಬಲ ಪ್ರದೇಶಗಳಲ್ಲಿ ನಿಯೋಜಿಸಬೇಕು. ಆದರೆ ಕಣಿವೆ ಪ್ರದೇಶದಲ್ಲಿ ನಿಯೋಜಿಸಲಾಗುತ್ತಿದೆ” ಎಂದರು.

ಮತ್ತೊಬ್ಬ ಮಹಿಳಾ ನಾಯಕಿ ಎಮಾ ನ್ಗಾಂಬ್ಜ್, “ಮಣಿಪುರದ ಪರಿಸ್ಥಿತಿಯ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸಬೇಕು. ರಾಜ್ಯದಲ್ಲಿ ಜನರು ಈಗಾಗಲೇ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಿರುವಾಗ ಭದ್ರತಾ ಏಜೆನ್ಸಿಗಳ ಅತಿಯಾದ ಅಧಿಕಾರ ಬಳಕೆ ಸದ್ಯಕ್ಕೆ ಅಗತ್ಯವಿಲ್ಲ” ಎಂದು ಅಭಿಪ್ರಾಯಿಸಿದರು.

ಇದನ್ನು ಓದಿದ್ದೀರಾ?  ಮಣಿಪುರ | ಸಿಎಂ ಅಧಿಕೃತ ನಿವಾಸದ ಬಳಿ ಭಾರೀ ಬೆಂಕಿ ಅವಘಡ

ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಬಹುಸಂಖ್ಯಾತ ಮೈತಿ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ಮಣಿಪುರದಲ್ಲಿ ಕಳೆದ ವರ್ಷ ಮೇ 3ರಂದು ಬುಡಕಟ್ಟು ಜನಾಂಗದವರ ಒಗ್ಗಟ್ಟಿನ ಮೆರವಣಿಗೆ ನಡೆದಿದ್ದು, ಅದಾದ ಬಳಿಕ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾಗಿದೆ.

ಹಿಂಸಾಚಾರದಲ್ಲಿ ಕುಕಿ ಮತ್ತು ಮೈತಿ ಎರಡೂ ಸಮುದಾಯಗಳಿಗೆ ಸೇರಿದ 220ಕ್ಕೂ ಹೆಚ್ಚು ಜನರು ಮತ್ತು ಭದ್ರತಾ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಮಣಿಪುರದಲ್ಲಿ ಒಟ್ಟು ಜನಸಂಖ್ಯೆಯ ಶೇಕಡ 53ರಷ್ಟು ಮೈತಿಗಳಿದ್ದು ಅವರಿಗೆ ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ. ನಾಗಾಗಳು ಮತ್ತು ಕುಕಿಗಳನ್ನು ಸೇರಿದ ಬುಡಕಟ್ಟು ಜನಾಂಗದವರು ಮಣಿಪುರದಲ್ಲಿ ಶೇಕಡ 40ರಷ್ಟಿದ್ದು ಮುಖ್ಯವಾಗಿ ಬೆಟ್ಟ ಜಿಲ್ಲೆಗಳಲ್ಲಿ ವಾಸವಾಗಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X