ಮಣಿಪುರ ಹಿಂಸಾಚಾರ | ಗ್ರಾಹಕ ವ್ಯವಹಾರಗಳ ಸಚಿವರ ಆಪ್ತ ಸಹಾಯಕನ ಅಪಹರಣ

Date:

ಕಳೆದ ಒಂದು ವರ್ಷದಿಂದ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಈವರೆಗೆ ಸಾವಿರಾರು ಜನರು ಸಾವನ್ನಪ್ಪಿದ್ದಾರೆ. ಇದೀಗ, ಮಣಿಪುರ ಸರ್ಕಾರದ ಗ್ರಾಹಕ ವ್ಯವಹಾರಗಳ ಸಚಿವ ಎಲ್ ಸುಸಿಂದ್ರೋ ಅವರ ಆಪ್ತ ಸಹಾಯಕರನ್ನು ಶಸ್ತ್ರಸಜ್ಜಿತ ಗುಂಪೊಂದು ಅಪಹಿರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಸಚಿವ ಎಲ್ ಸುಸಿಂದ್ರೋ ಅವರ ಆಪ್ತ ಸಹಾಯಕ ಎಸ್‌ ಸೊಮೊರೆಂಡ್ರೋ (43) ಅವರನ್ನು ಇಂಫಾಲ್ ಪೂರ್ವ ಜಿಲ್ಲೆಯಲ್ಲಿರುವ ಅವರ ನಿವಾಸದ ಬಳಿ ಗುಂಪೊಂದು ಅಪಹರಿಸಿದೆ. ಅಪಹರಣದ ಹೊಣೆಯನ್ನು ಯಾವುದೇ ಗುಂಪು ಹೊತ್ತುಕೊಂಡಿಲ್ಲ. ಅವರ ರಕ್ಷಣೆಗಾಗಿ ಪೊಲೀಸರು ಹುಡುಕಾಟ ಮತ್ತು ತನಿಖೆ ನಡಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬಿಷ್ಣುಪುರ ಜಿಲ್ಲೆಯಲ್ಲಿ ಗುರುವಾರ ರಾತ್ರಿ, ಮಣಿಪುರ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಓಯಿನಮ್ ನಬಕಿಶೋರ್ ಅವರ ಮನೆ ಮೇಲೆ ಶಸ್ತ್ರಸಜ್ಜಿತ ಗುಂಪೊಂದು ದಾಳಿ ಮಾಡಿತ್ತು. ಐದಕ್ಕೂ ಹೆಚ್ಚು ಮಂದಿ ಮೇಲೆ ಗುಂಡಿನ ದಾಳಿ ನಡೆಸಿ, ಹತ್ಯೆಗೈದಿತ್ತು. ಈ ಘಟನೆ ನಡೆದ ಒಂದು ದಿನದ ಬಳಿಕ, ಸಚಿವರ ಆಪ್ತ ಸಹಾಯಕನ ಅಪಹರಣವಾಗಿದೆ.

ಅಪಹರಣ ಸ್ಥಳದಲ್ಲಿ ಬಿದ್ದಿದ್ದ ಖಾಲಿ ಕಾಟ್ರಿಡ್ಜ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಿಷ್ಣುಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

“ಅವರನ್ನು ರಕ್ಷಿಸಲು ಪೊಲೀಸರು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ನಾವು ಕೆಲವರ ಮೇಲೆ ನಿಗಾ ಇಡುತ್ತಿದ್ದೇವೆ. ತನಿಖೆ ನಡೆಯುತ್ತಿರುವುದರಿಂದ ಹೆಚ್ಚಿನ ವಿವರ ನೀಡಲಾಗದು” ಎಂದು ಮಣಿಪುರ ಸರ್ಕಾರದ ಭದ್ರತಾ ಸಲಹೆಗಾರ ಕುಲ್ದೀಪ್ ಸಿಂಗ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...